Home namma chikmagalur chikamagalur ಅಂಬೇಡ್ಕರ್ ಜಯಂತಿಗೆ ಅಡ್ಡಿ : ಆರೋಪಿಗಳ ಬಂಧನಕ್ಕೆ ಪ್ರತಿಭಟನೆ
chikamagalurHomeLatest Newsnamma chikmagalur

ಅಂಬೇಡ್ಕರ್ ಜಯಂತಿಗೆ ಅಡ್ಡಿ : ಆರೋಪಿಗಳ ಬಂಧನಕ್ಕೆ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಅಂಬೇಡ್ಕರ್ ಜಯಂತಿಗೆ ಅಡ್ಡಿಪಡಿಸಿರುವ ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರುಗಳು ನಗರದ ಆಜಾ ದ್‌ಪಾರ್ಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಒಕ್ಕೂಟದ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ಮಾತನಾಡಿ ರಾಷ್ಟ್ರ ನಾಯಕ ಡಾ|| ಬಿ. ಆರ್.ಅಂಭೇಡ್ಕರ್ ಜಯಂತಿಗೆ ಹೊಸಕೋಟೆ ಗ್ರಾಮದಲ್ಲಿ ಅಡ್ಡಿಪಡಿಸುವ ಮೂಲಕ ನೀಲಿ ಬಾವುಟವನ್ನು ಕಿತ್ತೆಸೆದು ಅವಮಾನ ಮಾಡಿರುವ ಗ್ರಾಮದ ವ್ಯಕ್ತಿಗಳನ್ನು ಬಂಧಿಸದಿರುವುದು ಖಂಡನೀಯ ಎಂದರು.

ಪ್ರಕರಣಕ್ಕೆ ಸಂಬಂಧಿಸಿದ ಗ್ರಾಮದ ೨೩ ಮಂದಿ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೂ ಪೊಲೀಸ್ ಇಲಾಖೆ ಕ್ರಮ ವಹಿಸುತ್ತಿಲ್ಲ. ಅಂಬೇಡ್ಕರ್ ಜಯಂತಿ ಆಚರಿಸುವ ವೇಳೆ ಈ ರೀತಿಯ ದುರ್ಘಟನೆ ನಡೆಸಿರುವವರನ್ನು ಬಂಧಿಸದೇ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯ ಲ್ಲ ಎಂದು ತಿಳಿಸಿದರು.

ಬಲಾಡ್ಯ ಜನಾಂಗದ ಒತ್ತಡದ ಮೇರೆಗೆ ಪೊಲೀಸರು ದಲಿತರಿಗೆ ನ್ಯಾಯ ಒದಗಿಸುವ ಬದಲು ಜಾತಿ ಬೇಧ ಅಥವಾ ಲಂಚದ ಹಾವಳಿಗೆ ಸಿಲುಕಿ ಪೊಲೀಸ್ ಇಲಾಖೆ ಅನ್ಯಾಯ ಮಾಡುತ್ತಿದೆ. ಆ ನಿಟ್ಟಿನಲ್ಲಿ ಸತ್ಯಾ ಸತ್ಯತೆ ಮೇರೆಗೆ ಪೊಲೀಸ್ ಇಲಾಖೆ ಕೆಲಸ ನಿರ್ವಹಿಸಬೇಕು ಎಂದರು.

ಅಂಬೇಡ್ಕರ್‌ಗೆ ಅವಮಾನ ಮಾಡಿದ ಆರೋಪಿಗಳನ್ನು ಸದ್ಯದಲ್ಲೇ ಬಂಧಿಸದಿದ್ದಲ್ಲಿ ಒಕ್ಕೂಟವು ಸ್ಥಳೀ ಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಪ್ರತಿಭಟನೆ ನಡೆಸ ಲಾಗುವುದು ಎಂದು ಎಚ್ಚರಿಸಿದರು.

ಒಕ್ಕೂಟದ ಮುಖಂಡ ವಸಂತ್‌ಕುಮಾರ್ ಮಾತನಾಡಿ ದೇಶ-ವಿದೇಶಗಳಲ್ಲಿ ಅಂಬೇಡ್ಕರ್ ಬಗ್ಗೆ ಅಪಾರವಾದ ಗೌರವವಿದೆ. ರಾಷ್ಟ್ರ ಹಬ್ಬವಾದ ಅಂಭೇಡ್ಕರ್ ಜಯಂತಿ ರಾಷ್ಟ್ರಾದಾದ್ಯಂತ ಆಚರಿಸುವುದು ಮೂಲಭೂತ ಹಕ್ಕು. ಆದರೆ ಕೆಲವು ಬಲಾಡ್ಯ ಜನಾಂಗದ ಮುಖಂಡರು ಜಯಂತಿಗೆ ಅಡ್ಡಿಪಡಿಸಿ ದಲಿತ ರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ದೂರಿದರು.

ದೇಶದ ಮೂಲನಿವಾಸಿ ದಲಿತರಿಗೆ ನ್ಯಾಯ ಒದಗಿಸುವಲ್ಲಿ ಜಿಲ್ಲಾಡಳಿತ ವಿಫಲತೆ ಹೊಂದುತ್ತಿದೆ. ದಲಿ ತ ಸಮುದಾಯಕ್ಕೆ ನ್ಯಾಯ ನೀಡದ ಜಿಲ್ಲಾಡಳಿತ, ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆಗೆ ದಸಂಸ ಮುಖಂಡರುಗಳು ಆಹ್ವಾನಿಸಬಾರದು ಎಂದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಮುಖಂಡರಾದ ಮರ್ಲೆ ಅಣ್ಣಯ್ಯ, ಗೌಸ್ ಮೊಹಿಯುದ್ದೀನ್, ಕೃಷ್ಣ ಮೂರ್ತಿ, ಬಿಳೇಕಲ್ಲು ಬಾಲಕೃಷ್ಣ, ಮಂಜಯ್ಯ, ಕುಮಾರ್, ಶೇಖರ್ ಹಾಗೂ ಹೊಸಕೋಟೆ ಗ್ರಾಮಸ್ಥರು ಉಪಸ್ಥಿತರಿದ್ದರು.

Ambedkar Jayanti disrupted: Protest against arrest of accused

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...