Home namma chikmagalur ಜಾತಿಗಣತಿ ಹೆಸರಿನಲ್ಲಿ ಹಿಂದೂ ಧರ್ಮವನ್ನು ಒಡೆಯಲು ಯತ್ನ
namma chikmagalurchikamagalurHomeLatest News

ಜಾತಿಗಣತಿ ಹೆಸರಿನಲ್ಲಿ ಹಿಂದೂ ಧರ್ಮವನ್ನು ಒಡೆಯಲು ಯತ್ನ

Share
Share

ಚಿಕ್ಕಮಗಳೂರು:  ಜಾತಿ ಜಾತಿ ಮಧ್ಯೆ ಕಂದಕ ಸೃಷ್ಟಿಸಿ ಹಿಂದೂ ಧರ್ಮವನ್ನು ಹಿಂಬಾಗಿಲಿನಿಂದ ನುಚ್ಚುನೂರು ಮಾಡಿ ರಾಜಕೀಯ ಮಾಡಲು ಮುಖ್ಯಮಂತ್ರಿಗಳು ಹೊರಟಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಹೆಚ್ ಲೋಕೇಶ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಧರ್ಮ ಧರ್ಮಗಳ ನಡುವೆ ಕಲಹ ಸೃಷ್ಟಿಸಲು ಜಾತಿಗಣತಿ ಷಡ್ಯಂತ್ರ ನಡೆಸಲಾಗುತ್ತಿದೆ. ವಿವಿಧ ಸಂಘಟನೆಗಳು ಮತ್ತು ಜಾತಿಗಳು ಈ ಹಿಂದೆ ಕಾಂತರಾಜ್ ಆಯೋಗದ ಜಾತಿಗಣತಿಗೆ ವಿರೋಧ ವ್ಯಕ್ತವಾಗಿದ್ದನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದ್ದು, ಈಗ ಹಿಂದೂ ಧರ್ಮವನ್ನು ಒಡೆಯುವ ಉದ್ದೇಶದಿಂದ ನೂರಾರು ಕೋಟಿ ರೂಗಳನ್ನು ವ್ಯಯಿಸಿ ಜಾತಿ ಗಣತಿ ಹುನ್ನಾರ ನಡೆಸುತ್ತಿದ್ದಾರೆಂದು ದೂರಿದರು.

ಎಲ್ಲಾ ಜಾತಿಗಳು ಸೇರಿ ಹಿಂದೂ ಧರ್ಮವಾಗಿದೆ. ಜಾತಿಗಳನ್ನು ಒಡೆದು ಮತಾಂತರಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಸಮೀಕ್ಷೆಯಲ್ಲಿ ಹಿಂದೂಗಳು ಕ್ರಿಶ್ಚಿಯನ್ ಆಗಿದ್ದಾರೆ. ಮುಸಲ್ಮಾನರು ಕ್ರಿಶ್ಚಿಯನ್‌ಗಳಾಗಿ ಮತಾಂತರಗೊಂಡಿದ್ದವರು ತಮ್ಮ ಮೂಲ ಧರ್ಮಕ್ಕೆ ವಾಪಾಸ್ ಆಗಿರುವ ನಿದರ್ಶನಗಳು ಇವೆ ಎಂದು ಹೇಳಿದರು.

ಕ್ರಿಶ್ಚಿಯನ್‌ಗೆ ಮತಾಂತರಗೊಂಡಿರುವ ಸುಮಾರು ೪೭ ಜಾತಿಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಶಾಂತಿ ಕದಡುವ, ಕಂದಕಗಳನ್ನು ಸೃಷ್ಟಿಸಿ ಗಲಭೆ ಮೂಲಕ ಶಾಂತಿಗೆ ಧಕ್ಕೆ ತರುವ ಯತ್ನಗಳು ನಡೆದಿವೆ ಎಂದು ವಿವರಿಸಿದರು.

ಯಾರು ಮತಾಂತರಗೊಂಡಿದ್ದಾರೆ ಅವರನ್ನು ಸ್ಪಷ್ಟವಾಗಿ ಕ್ರಿಶ್ಚಿಯನ್ ಎಂದು ಪರಿಗಣಿಸಬೇಕು. ಆದರೆ, ಹರಿಜನ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಎಂಬಿತ್ಯಾದಿಗಳಾಗಿ ವಿಂಗಡಿಸಿ ಮೀಸಲಾತಿ ನೀಡುವ ಕಾಂಗ್ರೆಸ್ ಪಕ್ಷದ ಹುನ್ನಾರವನ್ನು ಖಂಡಿಸಿದರು.

ಜಿಲ್ಲೆಯಾದ್ಯಂತ ಈಗಾಗಲೇ ರಾಜ್ಯ ಹಿಂದುಳಿದ ಆಯೋಗದ ಹೆಸರಿನಲ್ಲಿ ಮನೆಯ ವಿದ್ಯುತ್ ಮೀಟರ್ ಸ್ಟಿಕ್ಕರ್ ಅಂಟಿಸಲಾಗಿದ್ದು, ಜನರ ತೆರಿಗೆ ಹಣವನ್ನು ರಾಜ್ಯಸರ್ಕಾರ ಜಾತಿಗಣತಿ ಹೆಸರಿನಲ್ಲಿ ಪೋಲುಮಾಡುತ್ತಿದೆ ಎಂದು ದೂರಿದರು.

ಜಿಲ್ಲಾ ವಕ್ತಾರ ಬಿಜಿ ಸೋಮಶೇಖರ್ ಮಾತನಾಡಿ, ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿ ಬೆಳೆ ಹಾನಿ ಜೊತೆಗೆ ಜೀವ ಹಾನಿಯೂ ಆಗಿದೆ. ಆ ಭಾಗದ ರೈತರು, ಕಾರ್ಮಿಕರು ಜೀವಭಯದಲ್ಲಿ ಇದ್ದಾರೆ. ಕೂಡಲೇ ಆನೆ ಕಾರಿಡಾರ್ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ಇತ್ತೀಚೆಗೆ ತರೀಕೆರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಕ್ತಾರ ಹೆಚ್.ಎಸ್. ಪುಟ್ಟಸ್ವಾಮಿ, ಮಾಜಿ ತಾ.ಪಂ ಅಧ್ಯಕ್ಷ ನೆಟ್ಟೆಕೆರೆಹಳ್ಳಿ ಜಯಣ್ಣ ಉಪಸ್ಥಿತರಿದ್ದರು.

An attempt to divide Hinduism in the name of caste census

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...