Home ತಿರುಪತಿ ರೈಲಿಗೆ ನಮಸ್ಕಾರ ಮಾಡಿದ ವೃದ್ಧೆ
HomechikamagalurLatest Newsnamma chikmagalur

ತಿರುಪತಿ ರೈಲಿಗೆ ನಮಸ್ಕಾರ ಮಾಡಿದ ವೃದ್ಧೆ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನೂತನ ರೈಲಿಗೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಭಕ್ತಿಭಾವದ ದೃಶ್ಯವೊಂದು ಗಮನ ಸೆಳೆಯಿತು. ತಿರುಪತಿಗೆ ಹೊಸದಾಗಿ ಪ್ರಾರಂಭವಾಗಿರುವ ರೈಲಿಗೆ ವೃದ್ಧೆಯೊಬ್ಬರು ಮೂರು ಬಾರಿ ಅಡ್ಡ ಬಿದ್ದು ಭಕ್ತಿಯಿಂದ ನಮಸ್ಕಾರ ಸಲ್ಲಿಸಿದರು.

ಹಿರೇಮಗಳೂರಿನ ನಿವಾಸಿ ಲಕ್ಷ್ಮೀ ಬಾಯಿ, ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ತಮ್ಮ ಮನೆದೇವರಾದ ತಿರುಪತಿ ವೆಂಕಟೇಶ್ವರನ ದರ್ಶನಕ್ಕಾಗಿ ತೆರಳುತ್ತಾರೆ. ಇದೀಗ ಚಿಕ್ಕಮಗಳೂರಿನಿಂದ ತಿರುಪತಿಗೆ ನೇರವಾಗಿ ರೈಲು ಸಂಚಾರ ಪ್ರಾರಂಭವಾದ ಹಿನ್ನಲೆಯಲ್ಲಿ ಲಕ್ಷ್ಮೀ ಬಾಯಿ, ರೈಲಿಗೆ ‘ಭಕ್ತಿಯ ಬೀಳ್ಕೊಡುಗೆ’ ನೀಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸೋಮಣ್ಣ ಪ್ರಧಾನ ಮಂತ್ರಿ ಮೋದಿ ಅವರ ವಿಕಸಿತ ಭಾರತದ ಕಲ್ಪನೆಯಿಂದ ಇದು ಸಾಧ್ಯವಾಗಿದೆ. ಹೀಗಾಗಿ ಆ ತಾಯಿಗೆ ತಿರುಪತಿಗೆ ರೈಲು ಆರಂಭವಾಗಿರುವುದಕ್ಕೆ ಸಂತೋಷವಾಗಿದೆ. ತಿರುಪತಿ ತಿಮ್ಮಪ್ಪನಿಗೆ ಎಷ್ಟು ನಮಸ್ಕಾರ ಸಲ್ಲಿಸುತ್ತೇನೋ ಅಷ್ಟು ನಮಸ್ಕಾರವನ್ನು ಆ ತಾಯಿಗೆ ಸಲ್ಲಿಸುತ್ತೇನೆ ಎಂದರು.

An old woman saluted the Tirupati train

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...