Home namma chikmagalur 20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ
namma chikmagalurchikamagalurHomeLatest NewsPolitical News

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

Share
Share

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿದರು.

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದಲ್ಲಿ ಪದೇ ಪದೇ ಮೂಗು ತೂರಿಸುವ ಬಿಜೆಪಿ, ಕೇಂದ್ರದಲ್ಲಿ 11 ವರ್ಷದ ಆಡಳಿತ ವಿಫಲತೆಯನ್ನು ಬಿಜೆಪಿ ನಾಯಕರು ಏಕೆ ಪ್ರಶ್ನಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ನಾಯಕತ್ವದ ಬಗ್ಗೆ ಯಾರೊಬ್ಬರು ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು, ಸಚಿವರು, ಸಂಸದರು ಪಕ್ಷದ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಒಂದಿಬ್ಬರು ನಾಯ ಕತ್ವ ಬದಲಾವಣೆ ವಿಚಾರವನ್ನು ಪ್ರಶ್ನಿಸುತ್ತಿದ್ದಾರೆ.

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ ದೀಪ್ ಸಿಂಗ್ ಸುರ್ಜಿವಾಲ ಜತೆ ಚರ್ಚಿಸಿ ದ್ದೇನೆ. ನಾಯಕತ್ವ ಬದಲಾವಣೆ ಬಗ್ಗೆ ಯಾರೊ ಬ್ಬರೂ ಅಪಸ್ವರ ಎತ್ತ ದಂತೆ ಹೈಕಮಾಂಡ್ ಕಠಿಣ ನಿರ್ಧಾರ ಕೈಗೊಳ್ಳ ಬೇಕು ಎಂದು ಸಲಹೆ ನೀಡಿದ್ದೇನೆ’ ಎಂದರು.

‘ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲೆಯಲ್ಲಿ ಸಿ.ಆರ್.ಸಗೀರ್ ಅಹ್ಮದ್, ಡಿ.ಬಿ.ಚಂದ್ರೇಗೌಡ, ನಾನು ಸೇರಿದಂತೆ ಮೂವರು ಸಚಿವರಾಗಿದ್ದೆವು. ನಂತರ ಬಂದ ಸರ್ಕಾರಗಳು ಜಿಲ್ಲೆಯ ಶಾಸಕರಿಗೆ ಒಂದೊಂದು ವರ್ಷ ಮಾತ್ರ ಸಚಿವ ಸ್ಥಾನ ದೊರಕಿದೆ. ಜಿಲ್ಲೆಗೆ ಸಚಿವ ಸ್ಥಾನ ಸಿಗದೆ 22 ವರ್ಷದಲ್ಲಿ 20 ವರ್ಷ ಹೊರಗಿನವರೆ ಉಸ್ತುವಾರಿ ಸಚಿವರಾಗಿದ್ದಾರೆ. ಈ ಬಾರಿ ಸಂಪುಟ ವಿಸ್ತರಣೆ ವೇಳೆ ಶಾಸಕಿ ನಯನಾ ಮೋಟಮ್ಮ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಡ ಹಾಕುವುದಿಲ್ಲ.

ಮಹಿಳಾ ಕೋಟದಲ್ಲಿ ನಯನಾ ಮೋಟಮ್ಮ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ಚುರುಕುಗೊಳ್ಳುವ ಜತೆಗೆ ಅಭಿವೃದ್ಧಿಗೆ ಸಹಕಾರ ಸಿಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಭರವಸೆಯಿದೆ’ ಎಂದು ತಿಳಿಸಿದರು.

An outsider has been the in-charge minister for the district for 20 years.

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...