ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಆಂಧ್ರಪ್ರದೇಶ ಮೂಲದ 26 ವರ್ಷದ ಯುವಕ ವಿನಯ್ ರೆಡ್ಡಿ ಭದ್ರಾ ಬಲದಂಡೆ ನಾಲೆಯ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭೋಪಾಲ್ ಮೂಲದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ನೂಪರ್ವೈಸರ್ ಆಗಿ ಸೇವೆ ಸಲ್ಲಿಸುತ್ತಿದ್ದ ಇವರು, ಪ್ರಸ್ತುತ ಭದ್ರಾ ಜಲಾಶಯದಿಂದ ಚಿತ್ರದುರ್ಗಕ್ಕೆ ನೀರು ಸರಬರಾಜು ಮಾಡುವ ಪ್ರಮುಖ ಯೋಜನೆಯ ಕಾಮಗಾರಿಯಲ್ಲಿ ಸಕ್ರಿಯರಾಗಿದ್ದರು.ಬದುಕು ಕಟ್ಟಿಕೊಳ್ಳಬೇಕಿದ್ದ ಈ ಯುವಕನ ಸಾವಿಗೆ ಕೌಟುಂಬಿಕ ಸಮಸ್ಯೆಗಳೇ ಪ್ರಬಲ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಬಳಿಕ ಮೃತದೇಹಕ್ಕಾಗಿ ತೀವ್ರ ಶೋಧ ನಡೆಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಖ್ಯಾತ ಮುಳುಗು ತಜ್ಞ ಮಲ್ಪೆ ಈಶ್ವರ್ ಅವರ ನೇತೃತ್ವದ ತಂಡವು ಹರಸಾಹಸ ಪಟ್ಟು ಶವವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.
ಆಂಧ್ರದ ಮೂಲದವರಾದ ವಿನಯ್ ರೆಡ್ಡಿ ಅವರ ಅಕಾಲಿಕ ಸಾವು ಅವರ ಕುಟುಂಬಸ್ಥರಲ್ಲಿ ಹಾಗೂ ಕೆಲಸದ ಸಹೋದ್ಯೋಗಿಗಳಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಈ ಕುರಿತು ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ತನಿಖೆಯನ್ನು ಮುಂದುವರಿಸಿದ್ದಾರೆ.
Andhra Pradesh youth commits suicide by jumping into Bhadra river
Leave a comment