Home namma chikmagalur chikamagalur ಅಂಗನವಾಡಿ ಶಿಕ್ಷಕಿಯ ನಿರ್ಲಕ್ಷ್ಯ-ಪುಟ್ಟ ಕಂದಮ್ಮನ ಮರ್ಮಾಂಗಕ್ಕೆ ಗಾಯ
chikamagalurCrime NewsHomeLatest Newsnamma chikmagalur

ಅಂಗನವಾಡಿ ಶಿಕ್ಷಕಿಯ ನಿರ್ಲಕ್ಷ್ಯ-ಪುಟ್ಟ ಕಂದಮ್ಮನ ಮರ್ಮಾಂಗಕ್ಕೆ ಗಾಯ

Share
Share

ಚಿಕ್ಕಮಗಳೂರು: ಅಂಗನವಾಡಿಗೆ ಮಕ್ಕಳನ್ನು ಕಳುಹಿಸುವ ಪೋಷಕರು ಓದಲೇ ಬೇಕಾದ ಸುದ್ದಿ ಇದು. ಅಂಗನವಾಡಿ ಶಿಕ್ಷಕಿಯ ನಿರ್ಲಕ್ಷ್ಯದಿಂದ ಪುಟ್ಟ ಕಂದಮ್ಮನ ಮರ್ಮಾಂಗಕ್ಕೆ ಗಾಯವಾಗಿದ್ದು, ಈಗ ಒದ್ದಾಡುವಂತಾಗಿದೆ. ಹೌದು, ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಈ ಘೋರ ನಡೆದಿದೆ. ក ಆಟವಾಡುತ್ತಿದ್ದ ವೇಳೆ ಮಗುವಿಗೆ ಕಬ್ಬಿಣದ ಜಾಲರಿ ತಂತಿ ತಗುಲಿ ಮರ್ಮಾಂಗಕ್ಕೆ ಗಾಯವಾಗಿದ್ದು, ಇದೀಗ ಆರು ಹೊಲಿಗೆ ಹಾಕಲಾಗಿದೆ

ಮಕ್ಕಳನ್ನು ಸರಿಯಾಗಿ ಗಮನಿಸದೆ ಶಿಕ್ಷಕಿ ನಿರ್ಲಕ್ಷ್ಯ ತೋರಿದ್ದರಿಂದ ಮಗುವಿಗೆ ಗಾಯವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಮಾಹಿತಿಯ ಪ್ರಕಾರ, ಪೋಷಕರು ಮಗುವನ್ನು ಎಂದಿನಂತೆ ಅಂಗನವಾಡಿಗೆ ಕಳುಹಿಸಿದ್ದರು. ಅಂಗನವಾಡಿ ಮುಂಭಾಗದ ಆವರಣದಲ್ಲಿರುವ ಮರಕ್ಕೆ ಜಾಲರಿ (ಕಬ್ಬಿಣದ ತಂತಿ ಜಾಲ) ಅಳವಡಿಸಲಾಗಿದ್ದು, ಅದನ್ನು ಹಾಗೇ ಬಿಡಲಾಗಿದೆ. ಆಟವಾಡುತ್ತಿದ್ದ ಬಾಲಕ ಆ ಜಾಲರಿ ಬಳಿಗೆ ಹೋಗಿದ್ದಾನೆ. ಆ ವೇಳೆ ಮರ್ಮಾಂಗಕ್ಕೆ ಗಾಯವಾಗಿದೆ.

ಅಷ್ಟಾಗಿಯೂ ಅಂಗನವಾಡಿ ಶಿಕ್ಷಕಿ ಬಾಲಕನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮುಂದುವರಿಸಿದ್ದಾರೆ. ಘಟನೆ ಬಗ್ಗೆ ಪೋಷಕರಿಗೆ ಮಾಹಿತಿಯನ್ನೇ ನೀಡದೆ ಮಗುವನ್ನು ಮನೆಗೆ ಕಳುಹಿಸಿದ್ದಾರೆ. ಮನೆಗೆ ಬಂದ ಬಳಿಕ ಮಗು ನಿರಂತರವಾಗಿ ಅಳುತ್ತಿದ್ದುದನ್ನು ಗಮನಿಸಿದ ತಾಯಿ, ಏನಾಯಿತು ಎಂದು ಪರಿಶೀಲಿಸಿದಾಗ ಗಾಯವಾಗಿರುವುದು ಗೊತ್ತಾಗಿದೆ. ಕೂಡಲೇ ಅವರು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಕೂಲಂಕುಷವಾಗಿ ಪರಿಶೀಲಿಸಿದ ವೈದ್ಯರು 6 ಹೊಲಿಗೆ ಹಾಕಿದ್ದಾರೆ. ಸದ್ಯ ಮಗು ಅಪಾಯದಿಂದ ಪಾರಾಗಿದೆ.

ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಮಕ್ಕಳ ಸುರಕ್ಷತೆಯನ್ನು ಗಾಳಿಗೆ ತೂರಿದ ಶಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಈ ಘಟನೆ ಪೋಷಕರನ್ನು ಚಿಂತೆಗೆ ದೂಡಿದ್ದಂತು ಸತ್ಯ. ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕಾದ ಸ್ಥಳದಲ್ಲೇ ಇಂತಹ ಘಟನೆ ಸಂಭವಿಸಿರುವುದರಿಂದ ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಮಕ್ಕಳ ಸುರಕ್ಷತೆಯನ್ನು ಗಾಳಿಗೆ ತೂರಿದ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Anganwadi teacher’s negligence injures little girl’s heart

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...