Home namma chikmagalur chikamagalur ಸಿ.ಟಿ. ರವಿ ಅವರ ವಿರುದ್ಧದ ಮತ್ತೊಂದು ದೂರು ದಾಖಲು
chikamagalurCrime NewsHomeLatest Newsnamma chikmagalur

ಸಿ.ಟಿ. ರವಿ ಅವರ ವಿರುದ್ಧದ ಮತ್ತೊಂದು ದೂರು ದಾಖಲು

Share
Share

ಚಿಕ್ಕಮಗಳೂರು: ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ವಿರುದ್ಧದ ವಿವಾದದ ಕಿಡಿ ಮತ್ತಷ್ಟು ಹೆಚ್ಚಾಗಿದ್ದು, ಚಿಕ್ಕಮಗಳೂರಿನಲ್ಲಿ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ನಗರದ ಉಪ್ಪಳ್ಳಿ ನಿವಾಸಿ ಗೌಸ್ ಮುನೀರ್ ಎಂಬುವರು ನಗರದ ಸೆನ್ (CEN) ಪೊಲೀಸ್‌ ಠಾಣೆಯಲ್ಲಿ ಈ ದೂರು ನೀಡಿದ್ದು, ಸಿ.ಟಿ. ರವಿ ಅವರ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಹಾಗೂ ಕೋಮು ದ್ವೇಷ ಪ್ರಚೋದಿಸಿದ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ.

ಇತ್ತೀಚೆಗೆ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಸಿ.ಟಿ. ರವಿ ಅವರು ‘ಮುಲ್ಲಾ’ ಪದ ಬಳಕೆ ಮಾಡಿ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಜೊತೆಗೆ, ಬೇರೆ ರಾಜ್ಯದಲ್ಲಿ ನಡೆದ ಅಪಘಾತದ ವಿಡಿಯೋವನ್ನು ಹಂಚಿಕೊಂಡು, “ಜಂತರ್ ಮಂತರ್‌ನಲ್ಲಿ ಮುಲ್ಲಾಗಳು ಸಾರ್ವಜನಿಕ ಆಸ್ತಿ-ಪಾಸ್ತಿ ಹಾಳು ಮಾಡುತ್ತಿದ್ದಾರೆ” ಎಂದು ತಪ್ಪು ಮಾಹಿತಿ ಹರಡುವ ಮೂಲಕ ಕೋಮು ಗಲಭೆಗೆ ಪ್ರಚೋದನೆ ನೀಡಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

ಈ ದೂರಿನ ಅನ್ವಯ ಬಿ.ಎನ್.ಎಸ್. ಕಲಂ 173(3)(1)ರ ಅಡಿಯಲ್ಲಿ ಸೆನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಇದರೊಂದಿಗೆ ಸಿ.ಟಿ. ರವಿ ಅವರ ವಿರುದ್ಧ ಸಲ್ಲಿಕೆಯಾದ ಒಟ್ಟು ದೂರುಗಳ ಸಂಖ್ಯೆ ಮೂರಕ್ಕೇರಿದೆ. ಈ ಪೈಕಿ ಮುದಾಸಿರ್ ಹಾಗೂ ಗೌಸ್ ಮುನೀರ್ ನೀಡಿದ ದೂರುಗಳ ಆಧಾರದ ಮೇಲೆ ನಗರ ಪೊಲೀಸ್ ಠಾಣೆ ಮತ್ತು ಸೆನ್ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Another complaint filed against CT Ravi

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...

Related Articles

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು...

ಸಿ.ಟಿ.ರವಿಯನ್ನು ಇನ್ನೆರಡು ದಿನದಲ್ಲಿ ಬಂಧಿಸದಿದ್ದರೆ ಜಿಲ್ಲಾ ಬಂದ್‌

ಮೂಡಿಗೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಸಮರ್ಥಿಸುವ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು...

ಸಿ.ಟಿ.ರವಿಯಿಂದ ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ...

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು...