Home namma chikmagalur chikamagalur ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ
chikamagalurHomeLatest Newsnamma chikmagalur

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ

Share
Share

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತೆ ಮುಂದುವರಿದಿದ್ದು,ನಾಲ್ಕು ದಿನಗಳ ಅಂತರದಲ್ಲಿ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ದಾಖಲಾಗಿದ್ದ ಲಕ್ಷ್ಮಿಪುರ ಗ್ರಾಮದ 60 ವರ್ಷದ ಮಂಜುನಾಥ್ ಎಂಬುವವರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.

ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಾಗಿದ್ದ ಮಂಜುನಾಥ್ ಅವರಿಗೆ ವೈದ್ಯರು ಸಕಾಲಕ್ಕೆ ಸ್ಪಂದಿಸದ ಕಾರಣ, ಅವರು ಸ್ಟೆಚ್ಚರ್ ಮೇಲೆಯೇ ನರಳಾಡುವಂತಾಗಿತ್ತು. ಬೆಳಗಿನ ಜಾವ ಉಸಿರಾಟದ ಸಮಸ್ಯೆಯಿಂದ ಮಂಜುನಾಥ್ ಆಸ್ಪತ್ರೆಗೆ ಬಂದಾಗ, ಕರ್ತವ್ಯದಲ್ಲಿದ್ದ ವೈದ್ಯರು ಚಿಕಿತ್ಸೆ ನೀಡುವ ಬದಲು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ರೋಗಿ ಉಸಿರಾಡಲು ಪರದಾಡುತ್ತಿದ್ದರೂ ಸುಮಾರು ಒಂದು ಗಂಟೆಗಳ ಕಾಲ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎನ್ನಲಾಗಿದೆ. ಸಂತ್ರಸ್ತ ಕುಟುಂಬದವರು ಎಷ್ಟೇ ಅಂಗಲಾಚಿದರೂ ಸಿಬ್ಬಂದಿಗಳು ಮತ್ತು ವೈದ್ಯರು ಕ್ಯಾರೆ ಎನ್ನದೆ ದರ್ಪ ಮೆರೆದಿದ್ದಾರೆ ಎನ್ನುವ ಆರೋಪವಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಕೊನೆ ಕ್ಷಣದಲ್ಲಿ ಅವರನ್ನು ಐಸಿಯುವಿಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ.

ಕಳೆದ ಗುರುವಾರ ಆಲ್ಲೂರಿನ ಲಕ್ಷ್ಮಣ್ ಎಂಬುವರು ಕೂಡ ವೈದ್ಯರ ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದರು. ಆಸ್ಪತ್ರೆಯ ಈ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಡವರ ಜೀವದ ಜೊತೆ ಚೆಲ್ಲಾಟವಾಡುವ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Another innocent life lost due to negligence of the district hospital

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...