Home namma chikmagalur chikamagalur ಆಲ್ದೂರು–ಶೃಂಗೇರಿ ರಸ್ತೆ ಅಭಿವೃದ್ಧಿಗೆ ₹50 ಕೋಟಿ ಅನುದಾನಕ್ಕೆ ಮನವಿ
chikamagalurHomeLatest Newsnamma chikmagalur

ಆಲ್ದೂರು–ಶೃಂಗೇರಿ ರಸ್ತೆ ಅಭಿವೃದ್ಧಿಗೆ ₹50 ಕೋಟಿ ಅನುದಾನಕ್ಕೆ ಮನವಿ

Share
Share
ಚಿಕ್ಕಮಗಳೂರು: ಶೃಂಗೇರಿ, ಬಾಳೆಹೊನ್ನೂರು, ಆಲ್ದೂರು ಮೂಲಕ ಚಿಕ್ಕಮಗಳೂರು ಸೇರುವ ಲೋಕೋಪಯೋಗಿ ರಸ್ತೆ ಸಂಪೂರ್ಣ ಹಾಳಾಗಿದ್ದು, ದುರಸ್ತಿಗೆ ₹50 ಕೋಟಿ ಅನುದಾನ ನೀಡುವಂತೆ ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಸಲ್ಲಿಸಿದರು.

ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ(ಸಿಆರ್‌ಐಎಫ್‌) ನಿಧಿಯಿಂದ ₹50 ಕೋಟಿ ಅನುದಾನವನ್ನು ರಾಜ್ಯದ ಲೋಕೋಪಯೋಗಿ ಇಲಾಖೆ ಕೋರಿಕೆ ಸಲ್ಲಿಸಿದೆ. ಮಂಜೂರು ಮಾಡಿದರೆ ಈ ಭಾಗದ ರಸ್ತೆ ಅಭಿವೃದ್ಧಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಚಿಕ್ಕಮಗಳೂರು ಸೇರಿ ರಾಜ್ಯದ ಅನೇಕ ಭಾಗಗಳಿಂದ ಶೃಂಗೇರಿ ಮಠಕ್ಕೆ ಬರುವ ಭಕ್ತರ ಸಂಖ್ಯೆ ಜಾಸ್ತಿ ಇದೆ. ರಸ್ತೆಯನ್ನು ತುರ್ತಾಗಿ ಸರಿಪಡಿಸುವ ಅಗತ್ಯವಿದೆ. ಕೂಡಲೇ ಅನುದಾನ ಮಂಜೂರು ಮಾಡಬೇಕು. ಅಲ್ಲದೇ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಮನವಿ ಮಾಡಿದರು.

Appeal for ₹50 crore grant for Aldur-Sringeri road development

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...