Home namma chikmagalur ನ್ಯಾಯಮೂರ್ತಿಗಳ ಮೇಲೆ ಹಲ್ಲೆಯ ಆರೋಪಿ ಬಂಧನಕ್ಕೆ ಮನವಿ
namma chikmagalurchikamagalurHomeLatest News

ನ್ಯಾಯಮೂರ್ತಿಗಳ ಮೇಲೆ ಹಲ್ಲೆಯ ಆರೋಪಿ ಬಂಧನಕ್ಕೆ ಮನವಿ

Share
????????????????????????????????????
Share

ಚಿಕ್ಕಮಗಳೂರು: ನ್ಯಾಯಮೂರ್ತಿಗಳ ಮೇಲೆ ಹಲ್ಲೆಗೆ ಯತ್ನಿಸಿದ ವಕೀಲರ ವಿರು ದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಬಿಎಸ್‌ಪಿ ಹಾಗೂ ಶ್ರಾವಸ್ತಿ ಬುದ್ಧ ವಿಹಾರದ ಮುಖಂಡರುಗಳು ಬುಧವಾರ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಭಾರತ ಸಂವಿಧಾ ನದ ವ್ಯಾಪ್ತಿಯಡಿ ಬರುವ ಮೂರು ಅಂಗಗಳಲ್ಲಿ ನ್ಯಾಯಾಂಗಕ್ಕೆ ವಿಶೇಷವಾದ ಸ್ಥಾನಮಾನ ಹಾಗೂ ಗೌರ ವವಿದೆ. ನ್ಯಾಯಾಂಗವು ಗಟ್ಟಿಯಾದ ಕಾರಣ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜೀವಂತಾಗಿದೆ ಎಂದರು.

ನ್ಯಾಯಾಂಗದ ಮೇಲಿನ ಯಾವುದೇ ದಾಳಿಯು ಪ್ರಜಾಪ್ರಭುತ್ವದ ಮೇಲೆ ಮತ್ತು ಭಾರತದ ಸಾರ್ವ ಭೌಮತ್ವದ ಮೇಲೆ ಮಾಡುವ ದಾಳಿಯಾಗಿದ್ದು ಆ ರೀತಿಯಲ್ಲಿ ಸುಪ್ರಿಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಶೂ ಎಸೆದು ವಕೀಲ ರಾಷ್ಟ್ರದ್ರೋಹದ ಕೃತ್ಯವೆಸಗಿದ್ದಾರೆ ಎಂದರು.

ನ್ಯಾಯಮೂರ್ತಿ ಬಿ.ಆರ್.ಗವಾಯಿಯವರು ಕಲಾಪದ ವೇಳೆಯಲ್ಲಿ ಮನುವಾದಿ ಮನಸ್ಥಿತಿಯ ವಕೀ ಲ ಸನಾತನದ ಮೇಲಿನ ದಾಳಿಯನ್ನು ಸಹಿಸುವುದಿಲ್ಲ ಎಂಬ ಘೋಷಣೆ ಕೂಗಿ ಧರಿಸಿದ್ಧ ಶೂ ಎಸೆಯ ಲು ಪ್ರಯತ್ನಿಸಿರುವುದು ಗಮನಿಸಿದರೆ ಭಾರತದಲ್ಲಿ ಇಂದಿಗೂ ಜಾತಿ ವ್ಯವಸ್ಥೆ ತಾಂಡವವಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು.

ಸುಪ್ರೀಂ ಕೋರ್ಟ್ ಬಿ.ಆರ್.ಗವಾಯಿ ಅವರು ದಲಿತ ಹಾಗೂ ಬೌದ್ಧ ಧರ್ಮದ ನ್ಯಾಯಮೂರ್ತಿ ಗಳಾಗಿದ್ದಾರೆ. ಸನಾತನಿ ಮನುವಾದಿ ಇರುವ ಜನರು ಇಂದಿಗೂ ಉನ್ನತ ಸ್ಥಾನಗಳಲ್ಲಿ ದಲಿತರು, ಹಿಂದು ಳಿದವರು, ಅಲ್ಪಸಂಖ್ಯಾತರು ಪದವಿ ಹೊಂದುವುದನ್ನು ವಿರೋಧಿಸುತ್ತಲೇ ಬಂದಿದ್ದು ಈ ಕೃತ್ಯವು ಕೂಡ ಒಂದು ಭಾಗವಾಗಿದೆ ಎಂದು ಹೇಳಿದರು.

ಶ್ರಾವಸ್ತಿ ಬುದ್ಧ ವಿಹಾರದ ಉಪಸಕ ಭರತ್ ಮಾತನಾಡಿ ನ್ಯಾಯಾಧೀಶರ ಮುಂದೆ ಹೇಗೆ ನಡೆದುಕೊ ಳ್ಳಬೇಕು ಎಂಬ ಕನಿಷ್ಟ ಪರಿಜ್ಞಾನವಿಲ್ಲದ ಈ ವಕೀಲರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಹಾ ಗೂ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದರೆ ರಾಜ್ಯಾ ದ್ಯಂತ ಉಗ್ರವಾದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ, ಜಿಲ್ಲಾಧ್ಯಕ್ಷ ಪಿ.ಪರಮೇಶ್ವರ್, ಉಪಾ ಧ್ಯಕ್ಷ ಕೆ.ಎಸ್.ಮಂಜುಳಾ, ಅಸ್ಲೆಂಬಿ ಅಧ್ಯಕ್ಷ ಹೆಚ್.ಕುಮಾರ್, ಖಜಾಂಚಿ ಟಿ.ಹೆಚ್.ರತ್ನ, ಮುಖಂಡರುಗಳಾ ದ ಪುಟ್ಟಸ್ವಾಮಿ, ಕೆ.ಆರ್.ಗಂಗಾಧರ್, ಪಿ.ಕೆ.ಮಂಜುನಾಥ್, ಮಂಜಯ್ಯ, ಬುದ್ಧವಿಹಾರದ ಚಂದ್ರಶೇಖರ್, ಶೇಖರ್, ಪುನೀತ್, ಶೃಂಗಾರ್ ಮತ್ತಿತರರಿದ್ದರು.

Appeal for arrest of accused in assault on judges

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...