Home namma chikmagalur chikamagalur ಎಐಟಿಯುಸಿ ಕಾರ್ಯಕರ್ತೆಯರಿಗೆ ಸೀರೆ ಬದಲು, ಗೌರವಧನಕ್ಕೆ ಮನವಿ
chikamagalurHomeLatest Newsnamma chikmagalur

ಎಐಟಿಯುಸಿ ಕಾರ್ಯಕರ್ತೆಯರಿಗೆ ಸೀರೆ ಬದಲು, ಗೌರವಧನಕ್ಕೆ ಮನವಿ

Share
Share

ಚಿಕ್ಕಮಗಳೂರು:  ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೀ ರೆ ನೀಡುವ ಬದಲು, ೧೫೦೦೦ ರೂ.ಗಳು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಎಐಟಿಯುಸಿ ಪದಾ ಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಎಐಟಿಯುಸಿ ಜಿಲ್ಲಾಧ್ಯಕ್ಷೆ ಗ್ರೆಟ್ಟಾ ಫರ್ನಾಂಡೀಸ್ ಮಾತನಾಡಿ ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಿಸದೇ ನಿರಾಸೆಯುನ್ನು ಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಸರ್ಕಾರ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಆರನೇ ಗ್ಯಾರಂಟಿಯಾಗಿ ಪ್ರಿಯಾಂಕಾಗಾಂಧಿ ಘೋಷಿಸಿರುವಂತೆ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆ ರಯರಿಗೆ ಗೌರವಧನ ಹೆಚ್ಚಿಸುವ ಪ್ರಸ್ತಾವನೆ ಮಾಡಿದ್ದರು ಎಂದರು.

ಸರ್ಕಾರ ಬಂದು ಮೂರು ವರ್ಷಗಳು ಕಳೆದರೂ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಮತ್ತು ಇಡುಗಂಟು ನೀಡುವ ಭರವಸೆ ಈಡೇರಿಸಿಲ್ಲ. ಹಿಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವ ದ ಬಿಜೆಪಿ ಸರ್ಕಾರ ತನ್ನ ಕೊನೆಯ ಬಜೆಟ್‌ನಲ್ಲಿ ಸಾವಿರ ರೂ. ಹೆಚ್ಚಿಸುವುದಾಗಿ ಘೋಷಿಸಿತು. ಆದರೆ ಈ ಘೋಷಣೆ ಅನುಷ್ಟಾನಕ್ಕೆ ಬಂದಿಲ್ಲ. ಈಗಿನ ಸರ್ಕಾರವು ಬಜೆಟ್‌ನಲ್ಲಿ ಒಂದು ರೂ. ಗೌರವ ಹೆಚ್ಚಿಸಿಲ್ಲ ಎಂ ದು ತಿಳಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪ ಬಸವರಾಜ್ ಮಾತನಾಡಿ ೨೦೧೧ನೇ ಸಾಲಿನಿಂದ ಅಂಗನವಾಡಿ ಗಳಲ್ಲಿ ದುಡಿದು ನಿವೃತ್ತರಾಗಿರುವ ವಯೋವೃದ್ದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ಜಾರಿ ಮಾಡಿಲ್ಲ. ಆನಂತರ ನಿವೃತ್ತಿಯಾದವರಿಗೆ ಅನ್ವಯವಾಗುವಂತೆ ಗ್ರಾಚ್ಯುಟಿ ಜಾರಿಗೊಳಿಸುತ್ತೀ ರಿ. ಇದರಿಂದಾಗಿ ಸುಮಾರು ೧೫ ರಿಂದ ೨೦ ಸಾವಿರದಷ್ಟು ನಿವೃತ್ತ ವಯೋವೃದ್ದ ಕಾರ್ಯಕರ್ತೆಯರು, ಸಹಾಯಕರಿಗೆ ಬದ್ಧ ಗ್ರಾಚ್ಯುಟಿ ಸೌಲಭ್ಯ ಒದಗಿಸಬೇಕು ಎಂದರು.

ಎಐಟಿಯುಸಿ ಕಾರ್ಯಕರ್ತೆಯರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವ ಸಂಭಾವನೆಯನ್ನು ಹೆಚ್ಚಳ ಮಾಡ ದೇ ಸೀರೆಯನ್ನು ನೀಡುವುದಾಗಿ ಘೋಷಿಸುವ ಮೂಲಕ ನಮ್ಮ ದುಡಿಮೆಗೆ ತಕ್ಕ ಪ್ರತಿಫಲ ನೀಡುತ್ತಿಲ್ಲ. ಮಹಿಳಾ ಕಾರ್ಮಿಕರಿಗೆ ಕನಿಷ್ಟ ವೇತನದ ನಿರಾಕರಣೆ ಮಾಡಿದಂತಾಗಿದೆ. ಕೂಡಲೇ ಮುಖ್ಯಮಂತ್ರಿಗಳು ಸೀರೆ ನೀಡುವ ಬದಲು, ಅನುದಾನದಲ್ಲಿ ಗೌರವಧನವಾಗಿ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಟಿಯುಸಿ ತಾಲ್ಲೂಕು ಅಧ್ಯಕ್ಷೆ ಶೈಲಾ ಬಸವರಾಜ್, ಕಡೂರು ಅಧ್ಯಕ್ಷೆ ಪಾರ್ವ ತಿ, ಮೂಡಿಗೆರೆ ಅಧ್ಯಕ್ಷೆ ಕೆ.ಆರ್.ಶೈಲಾ, ಸದಸ್ಯರಾದ ವಸಂತ ಧರ್ಮೇಗೌಡ, ವನಜಾಕ್ಷಿ, ದೀಪಿಕಾ, ಸುಖನ್ಯ ಮತ್ತಿತರರು ಹಾಜರಿದ್ದರು.

Appeal for honorarium instead of saree for AITUC workers

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...