Home namma chikmagalur chikamagalur ಗ್ರೇಡಿಂಗ್ ಕೈಬಿಟ್ಟು ಫಲಿತಾಂಶ ಅಂಕ ಪರಿಗಣಿಸುವಂತೆ ಮನವಿ
chikamagalurHomeLatest Newsnamma chikmagalur

ಗ್ರೇಡಿಂಗ್ ಕೈಬಿಟ್ಟು ಫಲಿತಾಂಶ ಅಂಕ ಪರಿಗಣಿಸುವಂತೆ ಮನವಿ

Share
Share

ಚಿಕ್ಕಮಗಳೂರು: ಪ್ರೌಢಶಾಲಾ ಹಂತದಲ್ಲಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಎಸ್.ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ಕೈಬಿಟ್ಟು ಬದಲಾಗಿ ಫಲಿತಾಂಶದಲ್ಲಿ ಅಂಕಗಳನ್ನು ಪರಿಗಣಿಸುವಂತೆ ಆಗ್ರಹಿಸಿ ಜಿಲ್ಲಾ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘವು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ರಾಮಸ್ವಾಮಿ ನಾಯ್ಕ ತೃತಿಯ ಭಾಷೆಯ ಅಂಕಗಳ ನ್ನು ೨೦೨೬ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪರಿಗಣಿಸದಿರುವಂತೆ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ತೀರ್ಮಾನ ಕೈಕೊಂಡಿರುವುದು ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯ ಮೇಲೆ ಕೆಟ್ಟ ಪರಿ ಣಾಮ ಬೀರಿದಂತಾಗಿದೆ ಎಂದರು.

ಹಿಂದಿ ಭಾಷೆ ಬಗ್ಗೆ ಯಾವುದೇ ತಜ್ಞರು, ಶಿಕ್ಷಕರು, ಪಾಲಕರು ಅಥವಾ ವಿದ್ಯಾರ್ಥಿಗಳಿಂದ ಅಭಿಪ್ರಾ ಯವನ್ನು ಸಂಗ್ರಹಿಸದೇ ದಿಡೀರನೇ ಈ ನಿರ್ಧಾರ ಕೈಗೊಂಡಿರುವುದು ದುಃಖಕರ ಸಂಗತಿ. ತೃತೀಯ ಭಾ ಷೆಯನ್ನು ವಿದ್ಯಾರ್ಥಿಗಳಲ್ಲಿ ಭಾಷಾ ಸಾಮರ್ಥ್ಯವನ್ನು ಅಭೀವೃದ್ದಿಪಡಿಸುವುದಲ್ಲದೇ ಸಂವಹನ ಕೌಶಲ್ಯಗಳ ನ್ನು ತರಗತಿಗಳಲ್ಲಿ ಬೆಳೆಸಲು ಹಕ್ಕನ್ನು ಮೊಟಕುಗೊಳಿಸಿದಂತೆ ಎಂದರು.

ಕಳೆದ ಏಳು ದಶಕಗಳಿಂದ ನಡೆದುಕೊಂಡು ಬಂದಿರುವ ಶಿಕ್ಷಣ ನೀತಿಯನ್ನು ಬದಲಾಯಿಸುವುದು ನ್ಯಾಯ ಸಮ್ಮತವಾದ ತೀರ್ಮಾನವಲ್ಲ. ಪ್ರೌಢಶಾಲಾ ಶಿಕ್ಷಣದಲ್ಲಿ ತೃತೀಯ ಭಾಷೆ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಅಡ್ಡಿಪಡಿಸಿದಂತಾಗುತ್ತದೆ ಹಾಗೂ ಶಿಕ್ಷಕರ ಆತ್ಮಸ್ಥೈರ್ಯವನ್ನು ಕುಂದಿಸದಂತಾಗಲಿದೆ ಎಂದು ತಿಳಿಸಿದರು.

ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಯನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ಗ್ರೇಡಿಂಗ್ ಕೈಬಿಟ್ಟು, ಬದಲಾಗಿ ತೃತೀಯ ಭಾಷೆಯ ಅಂಕಗಳನ್ನು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಪರಿಣಿಸಬೇಕು. ಇದು ಭಾಷಾ ಅಧ್ಯಯನ ಆಸಕ್ತಿ ಹೆಚ್ಚಿಸುವುದರ ಜೊತೆಗೆ ಶಿಕ್ಷಕರಿಗೂ ತಮ್ಮ ಪರಿಶ್ರಮಕ್ಕೆ ಸಮರ್ಪಕ ಮಾನ್ಯತೆ ದೊರೆದಂತಾಗಲಿದೆ ಎಂದರು.

ಅಲ್ಲದೇ ವಿದ್ಯಾರ್ಥಿಗಳು ಸ್ವ ಇಚ್ಚೆಯಂತೆ ತಮಗೆ ಬೇಕಾದ ವಿಷಯವನ್ನು ಆಯ್ಕೆ ಮಾಡಿಕೊಂಡು ತೇರ್ಗಡೆ ಹೊಂದಿ ಜೀವನವನ್ನು ರೂಪಿಸಿಕೊಳ್ಳಲು ಅನುವು ಮಾಡಿಕೊಡಲು ಸರ್ಕಾರ ನಿರ್ದೇಶನ ನೀಡ ಬೇಕು ಎಂಬುದು ಹಿಂದಿ ಶಿಕ್ಷಕರ ಮೂಲ ಒತ್ತಾಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಷರೀಫ್, ಖಜಾಂಚಿ ಎನ್.ಜಿ.ಚಂದ್ರಪ್ಪ, ಶಿಕ್ಷಕರಾದ ದೀಪಾ, ರೇಖಾ, ಪವಿತ್ರ, ರೂಪ, ವಿಶ್ವನಾಥ್, ಶ್ರೀನಿವಾಸ್, ಪ್ರಭಾಕರ್, ಪದ್ಮಾವತಿ, ಉಷಾ, ಸುನೀತಾ, ಕವಿತಾ ಮತ್ತಿತರರು ಉಪಸ್ಥಿತರಿದ್ದರು.

Appeal to abandon grading and consider result scores

 

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ 3.30 ರ ಅವಧಿಯಲ್ಲಿ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಕಳುಹಿಸಿರುವ ಸಂದೇಶದಿಂದಾಗಿ ನ್ಯಾಯಾಲಯದ ಆವರಣದಲ್ಲಿ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿ ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿ ಹಾಡಿದ್ದಕ್ಕೆ ತಾಲೂಕು ಆಡಳಿತ ಸಾಕ್ಷಿಯಾಯಿತು....

Related Articles

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್...