Home namma chikmagalur ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ
namma chikmagalurchikamagalurHomeLatest News

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ

Share
Share

ಚಿಕ್ಕಮಗಳೂರು:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗೆ ನಿಗದಿಪಡಿಸಿರುವ ಅನುದಾನವನ್ನು ಬೇರೆ ಯಾವ ಯೋಜನೆಗಳಿಗೂ ಬಳಸಬಾರದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರಡ್ಡಿ ಅವರನ್ನು ಗುರುವಾರ ಭೇಟಿ ಮಾಡಿದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರ ಅಭಿವೃದ್ಧಿಗಾಗಿ ಕಲಂ ೭ ಸಿ ಮತ್ತು ೭ ಡಿ ರಲ್ಲಿ ನಿಗದಿಪಡಿಸಿದ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶವಿರುವುದನ್ನು ರದ್ದುಪಡಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಲವು ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ, ಹಲವಾರು ಕಾರ್ಯಕ್ರಮಗಳ ಮೂಲಕ ಎಚ್ಚರಿಕೆಯನ್ನೂ ನೀಡಿದೆ, ಆದರೂ ಹಿಂದಿನ ಎಲ್ಲಾ ಸರ್ಕಾರಗಳೂ ಪರಿಶಿಷ್ಟರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಿಕೊಂಡು ಅವರನ್ನು ವಂಚಿಸಿವೆ ಎಂದು ಆರೋಪಿಸಿದರು.

ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ನಿಗದಿಪಡಿಸಿರುವ ೧೧,೮೯೬,೪೫ ಕೋಟಿ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸುವ ಕುರಿತು ತೀರ್ಮಾನಿಸಿರುವುದಾಗಿ ಹೇಳಿಕೆ ನೀಡಿರುವುದನ್ನು ಖಂಡಿಸಿದ ಪದಾಧಿಕಾರಿಗಳು ಪರಿಶಿಷ್ಟ ಅಭಿವೃದ್ಧಿ ಪರಿಷತ್ತಿನ ಸಭೆ ಇದಕ್ಕೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿದರು.

ಕಳೆದ ಸಾಲಿನಲ್ಲಿ ಗ್ಯಾರೆಂಟಿ ಯೋಜನೆಗಳಿಗಾಗಿ ಖಜಾನೆಗೆ ನೀಡಿರುವ೧೧,೧೧೪ ಕೋಟಿ ಮತ್ತು ೧೪,೨೮೨,೩೮ ಕೋಟಿ ಪರಿಶಿಷ್ಟರ ಹಣವನ್ನು ರಾಜ್ಯ ಸರ್ಕಾರ ಹಿಂಪಡೆದು ಅದನ್ನು ಪರಿಶಿಷ್ಟರ ಅಭಿವೃದ್ಧಿ ಯೋಜನೆಗಳಾದ ಭೂ ಒಡೆತನ, ಕೊಳವೆಬಾವಿ ನಿರ್ಮಾಣ, ಪರಿಶಿಷ್ಟರ ಜಮೀನಿಗೆ ರಸ್ತೆ ನಿರ್ಮಾಣ, ನೀರಾವರಿ ವ್ಯವಸ್ಥೆ, ಮನೆ ನಿರ್ಮಾಣ ಕಾಮಗಾರಿಗಳಿಗೆ ಬಳಸಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು, ಪ್ರತಿ ವರ್ಷ ಬಿಡುಗಡೆಯಾದ ಹಣ ಮತ್ತು ಖರ್ಚಾಗಿರುವ ಹಣದ ವಿವರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕು, ಬ್ಯಾಕ್ ಲಾಗ್ ಹುದ್ದೆಗಳನ್ನು ಕಾಲಕಾಲಕ್ಕೆ ರಾಜ್ಯ ಸರ್ಕಾರ ನಿಗದಿಪಡಿಸುವ ಒಳ ಮೀಸಲಾತಿ ನಿಯಮದಂತೆ ಆಯಾ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ತುಂಬಬೇಕು ಎಂದು ಆಗ್ರಹಿಸಿದರು.

Appeal to Additional District Magistrate from Karnataka Dalit Sangharsh Samiti

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...