Home namma chikmagalur ಅಂಬಳೆ-ಬೆಣ್ಣೂರು ಮಾರ್ಗಕ್ಕೆ ಬಸ್ ಸಂಚರಿಸಲು ಮನವಿ
namma chikmagalurchikamagalurHomeLatest News

ಅಂಬಳೆ-ಬೆಣ್ಣೂರು ಮಾರ್ಗಕ್ಕೆ ಬಸ್ ಸಂಚರಿಸಲು ಮನವಿ

Share
Share

ಚಿಕ್ಕಮಗಳೂರು  ಅಂಬಳೆ ಬೆಣ್ಣೂರು ಮಾರ್ಗವಾಗಿ ಸರಿಯಾದ ಸಮಯಕ್ಕೆ ಬಸ್ ಸಂಚರಿಸಲು ಸೂಚನೆ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರುಗಳು ಕೆ.ಎಸ್.ಆರ್. ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಅಂಬಳೆ ಮಾ ರ್ಗವಾಗಿ ಬೆಣ್ಣೂರು ಗ್ರಾಮಕ್ಕೆ ಹೋಗಿ ವಾಪಸ್ ಹಿಂದಿರುವ ಬಸ್ ಸಿರಗಾಪುರ, ಅಂಬಳೆ, ಬೆಣ್ಣೂರು, ಹಾದಿಹಳ್ಳಿ ಗ್ರಾಮಕ್ಕೆ ತಡವಾಗಿ ಬರುತ್ತಿದೆ ಎಂದು ಹೇಳಿದರು.

ಸಿರಗಾಪುರ ಬಸ್ ನಿಲ್ದಾಣದಲ್ಲಿ ಬಸ್ ನಿಲುಗಡೆಗೊಳಿಸುತ್ತಿಲ್ಲ. ಇದರಿಂದ ಶಾಲಾ ಕಾಲೇಜಿಗೆ ತೆರಳು ವ ವಿದ್ಯಾರ್ಥಿಗಳು, ಜನಸಾಮಾನ್ಯರಿಗೆ ಬಹಳಷ್ಟ ತೊಂದರೆಯಾಗಿದೆ. ಅಲ್ಲದೇ ಬೆಳಿಗ್ಗೆ ಹಾಗೂ ಸಂಜೆ ಸಮಯಕ್ಕೆ ಬಸ್ ಸರಿಯಾಗಿ ಬರುತ್ತಿಲ್ಲ ಎಂದು ದೂರಿದರು.

ಕೂಡಲೇ ಕೆ.ಎಸ್.ಆರ್.ಟಿ.ಸಿ. ಇಲಾಖೆ ಈ ಭಾಗಕ್ಕೆ ಬೆಳಿಗ್ಗೆ ಬಸ್ ಸಂಚರಿಸಲು ಅನುವು ಮಾಡಿಕೊಡ ಬೇಕು. ಸಿರಗಾಪುರ ನಿಲ್ದಾಣದಲ್ಲಿ ಬಸ್ ನಿಲುಗಡೆಗೊಳಿಸಲು ಬಸ್ ನಿರ್ವಾಹಕರಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭೀಮ್ ಆರ್ಮಿ ನಗರಾಧ್ಯಕ್ಷ ಪ್ರವೀಣ್, ಜಿಲ್ಲಾ ಸಂಘಟನಾ ಸಂಚಾಲಕ ಟಿ.ಎಲ್. ಗಣೇಶ್, ಗ್ರಾಮಸ್ಥರಾದ ಅಣ್ಣಪ್ಪ, ಚಿಕ್ಕೇಗೌಡ ಮತ್ತಿತರಿದ್ದರು.

Appeal to run bus on Ambale-Bennur route

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...

Related Articles

ಮಾಧ್ಯಮ ಕ್ಷೇತ್ರ ಶಾಸಕಾಂಗ-ಕಾರ್ಯಾಂಗ-ಸಾರ್ವಜನಿಕರ ನಡುವೆ ಸೇತುವೆ

ಚಿಕ್ಕಮಗಳೂರು:  ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂಬ ಮಾತು ಅಕ್ಷರಶಃ ಸತ್ಯ. ಸರಕಾರಗಳ ಯೋಜನೆಗಳ...

ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು

ಚಿಕ್ಕಮಗಳೂರು:  ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದು...

ಭೂದಾನ-ಗೋದಾನ-ಅನ್ನದಾನಕ್ಕಿಂತ ಮತದಾನ ಶ್ರೇಷ್ಠ

ಚಿಕ್ಕಮಗಳೂರು:  ಭೂದಾನ, ಗೋದಾನ, ಅನ್ನದಾನಕ್ಕಿಂತ ಸಮಾಜದ ನಾಗರೀಕರಿಗೆ ಮ ತದಾನ ಸರ್ವಶ್ರೇಷ್ಟ. ಆಸೆ-ಆಕಾಂಕ್ಷೆಗಳಿಗೆ ಒಳಗಾಗದೇ ಪ್ರಜೆಗಳ...

ಮರದಿಂದ ಬಿದ್ದು ಕಾರ್ಮಿಕ ಸಾವು

ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್...