Home Latest News ಮಳಲೂರು ದಲಿತ ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ
Latest NewschikamagalurHomenamma chikmagalur

ಮಳಲೂರು ದಲಿತ ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

Share
Share

ಚಿಕ್ಕಮಗಳೂರು:  ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಅಂಬಳೆ ಹೋಬಳಿ ಮಳಲೂರು ಗ್ರಾಮದಲ್ಲಿರುವ ೧೮ ಎಕರೆ ಗೋಮಾಳ ಜಮೀನಿನಲ್ಲಿ ನಿವೇಶನ ರಹಿತ ಪರಿಶಿಷ್ಟ ಕುಟುಂಬದವರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಇಂದು ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಭೀಮ್ ಆರ್ಮಿ, ಯುವ ಬ್ರಿಗೇಡ್, ಅಂಬೇಡ್ಕರ್ ಯುವಕ ಸಂಘ ಮಳಲೂರು ಗ್ರಾಮಸ್ಥರೊಂದಿಗೆ ನಗರಕ್ಕಾಗಮಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿ ಮಳಲೂರು ಗ್ರಾಮದ ಸರ್ವೆ ನಂ.೭೮, ೭೯ ರಲ್ಲಿ ೯.೨೪ ಹಾಗೂ ೮.೩೫ ಎಕರೆ ಗೋಮಾಳ ಜಮೀನು ಇದ್ದು, ಇದನ್ನು ನಿವೇಶನ ರಹಿತರಿಗೆ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿರುವ ಪರಿಶಿಷ್ಟ ಜನಾಂಗದ ೧೫೦ ಕುಟುಂಬದವರು ನೂರಾರು ವರ್ಷಗಳಿಂದ ವಾಸಿಸುತ್ತಿದ್ದು, ಒಂದು ಕುಟುಂಬದಲ್ಲಿ ೮-೧೦ ಜನರಿದ್ದು, ಮನೆಗಳಿಲ್ಲದೆ ತುಂಬ ತೊಂದರೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಭೀಮ್ ಆರ್ಮಿ ಮುಖಂಡ ಹೊನ್ನೇಶ್ ಮಾತನಾಡಿ, ನಿವೇಶನ ನೀಡುವಂತೆ ಒತ್ತಾಯಿಸಿ ಪರಿಶಿಷ್ಟ ಜಾತಿ ಜನಾಂಗದವರು ೨೦೧೮ ರಲ್ಲೇ ಗ್ರಾಮ ಪಂಚಾಯಿತಿಗೆ ಮಳಲೂರು ಗ್ರಾಮಸ್ಥರು ಮನವಿ ನೀಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಆರೋಪಿಸಿದರು.
ದೌರ್ಜನ್ಯ ತಡೆ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ ಮಾತನಾಡಿ, ಸಂವಿಧಾನದ ಆಶಯದಂತೆ ಪ್ರಾಥಮಿಕ ಸೌಲಭ್ಯಗಳಾದ ನಿವೇಶನ, ಮನೆ, ಶಿಕ್ಷಣ, ಆರೋಗ್ಯ ನೀಡಬೇಕೆಂದು ಡಾ. ಬಿ.ಆರ್ ಅಂಬೇಡ್ಕರ್ ಹೇಳಿದ್ದರೂ ಕಾರ್ಯರೂಪಕ್ಕೆ ತರುವಲ್ಲಿ ವಿಳಂಭವಾಗುತ್ತಿದೆ ಎಂದು ದೂರಿದರು.

ಸ್ವತಂತ್ರ ಬಂದು ೭೯ ವರ್ಷಗಳಾದರೂ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಬಡವರಿಗೆ ಮೂಲಭೂತ ಹಕ್ಕುಗಳನ್ನು ಪಡೆಯುವಲ್ಲಿ ವಿಫಲರಾಗಿದ್ದು, ಮಳಲೂರು ಗ್ರಾಮದಲ್ಲಿ ೧೫೦ ಪರಿಶಿಷ್ಟ ಜನಾಂಗದ ಕುಟುಂಬಗಳು ವಾಸಿಸುತ್ತಿದ್ದು, ಬಲಾಢ್ಯರು ಒತ್ತುವರಿ ಮಾಡಿರುವ ಭೂಮಿಯನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ತೆರವು ಮಾಡಿ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.

ಗ್ರಾಮಸ್ಥರಾದ ಪವಿತ್ರ ಮಾತನಾಡಿ, ದಲಿತ ಕುಟುಂಬದ ಬಡವರಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರುಗಳಾದ ಮಲ್ಲಯ್ಯ, ನಳಿನ, ಸುಶೀಲ, ಗಂಗಮ್ಮ, ಪಾರ್ವತಮ್ಮ, ಗಂಗಮ್ಮ, ಪುಟ್ಟಮ್ಮ, ಮಂಜುಳ, ಲಕ್ಷ್ಮಮ್ಮ, ಚಂದ್ರಮ್ಮ, ಸುಶೀಲ, ಸಾವಿತ್ರಿ, ಭಾಗ್ಯ, ಹೂವಮ್ಮ, ಇಂದ್ರಾಣಿ ಮತ್ತಿತರರು ಉಪಸ್ಥಿತರಿದ್ದರು.

Appeal to the district administration demanding a site

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...