Home Latest News ಜಿಲ್ಲಾಡಳಿತಕ್ಕೆ ಜಿಲ್ಲೆಯ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಮನವಿ
Latest NewschikamagalurHomenamma chikmagalur

ಜಿಲ್ಲಾಡಳಿತಕ್ಕೆ ಜಿಲ್ಲೆಯ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಮನವಿ

Share
Share

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಇಲಾಖೆಗಳ ಹಾಸ್ಟೆಲ್ ಹಾಗೂ ವಸತಿ ಶಾಲೆಯ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಸರ್ಕಾರದ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಳೆದ ೧೫ ರಿಂದ ೨೦ ವರ್ಷಗಳಿಂದ ಅಡುಗೆಯವರು, ಅಡುಗೆ ಸಹಾಯಕರು ಸ್ವಚ್ಚತಾಗಾರರು ಕಾವಲುಗಾರರು. ಅತಿಥಿ ಶಿಕ್ಷಕರು, ಕಂಪ್ಯೂಟರ್ ಆಪರೇಟರ್, ಸ್ಟಾಪ್ ನರ್ಸ್‌ಗಳು ಸಂಕಷ್ಟದಲ್ಲಿದ್ದಾರೆ ಎಂದಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಸುಮಾರು ೧೫ ವರ್ಷಗಳಿಂದ ನಾನಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಹೋರಾಟ ಮಾಡಿದ ಪ್ರತಿಫಲವಾಗಿ ರಾಜ್ಯ ಸರ್ಕಾರ ಮಾಸಿಕ ಕನಿಷ್ಟ ವೇತನ ರೂ ೨೫.೭೧೪ ಗಳಿಗೆ ಪರಿಷ್ಕರಣೆ ಮಾಡಿ ಕರಡು ಅಧಿಸೂಚನೆ ಹೊರಡಿಸಿದ್ದನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.

ವಾರದ ರಜಾ, ೮ ಘಂಟೆಗಳ ವರೆಗಿನ ಕೆಲಸದ ಅವಧಿ, ೫೦ ಮಕ್ಕಳಿಗೆ ೩ ಜನ ಸಿಬ್ಬಂದಿಯಂತೆ ಹಿಂದಿನ ಪದ್ಧತಿ ಮುಂದುವರೆಸುವುದು, ಅಧಿಕಾರಿಗಳ ಕಿರುಕುಳ ತಪ್ಪಿಸುವುದು ೨೦೧೭ರಿಂದ ಪ್ರಾರಂಭವಾದ ವಸತಿ ಶಾಲೆಗಳಿಗೆ ಹೆಚ್ಚುವರಿ ೫ ಜನ ಸಿಬ್ಬಂದಿಗಳನ್ನು ನೇಮಕ ಮಾಡುವುದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪಸ್ಥಿತಿಯಲ್ಲಿ ಹೊರಗುತ್ತಿಗೆ ನೌಕರರ ಸಭೆ ಮಾಡುವುದು, ವಿವಿಧೋದೇಶ ಸಹಕಾರ ಸಂಘ ಸ್ಥಾಪನೆ ಇನ್ನುಳಿದ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ತಮ್ಮಲ್ಲಿ ಮನವಿಯಲ್ಲಿ ಕೋರಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಶಿವಮೂರ್ತಿ,ಸೌಮ್ಯ, ರಾಧಾ,ವಿಮಲಾ,ಸವಿತಾ,ಪೂರ್ಣೀಮಾ,ಪವಿತ್ರ ಸೇರಿದಂತೆ ಹಲವರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...