Home namma chikmagalur ಮಹಾತ್ಮಾ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ
namma chikmagalurchikamagalurHomeLatest News

ಮಹಾತ್ಮಾ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

Share
Share

ಚಿಕ್ಕಮಗಳೂರು: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಾ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ ೬೦ ವರ್ಷಗಳಾಗಿರುವ ವ್ಯಕ್ತಿಗಳು ಅಥವಾ ೨೫ ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮಾ ಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ – ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

ಅರ್ಜಿಗಳನ್ನು ಸೆಪ್ಟೆಂಬರ್ ೧೯ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. ೧೭. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು – ೫೬೦ ೦೦೧ ಅಥವಾ ಇ – ಮೇಲ್ ವಿಳಾಸ informationdiprawards@gmail.com  ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for selection for Mahatma Gandhi Service Award Karnataka

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...