Home namma chikmagalur chikamagalur ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ
chikamagalurHomeLatest Newsnamma chikmagalur

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

Share
Oplus_16908288
Share

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಚಿಕ್ಕಮಗಳೂರು ಶಾಖೆಗೆ ನೂತನವಾಗಿ ಡಿ.ರಾಮೇಗೌಡರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದಾಗಿ ಕೆಲವರು ಪತ್ರಿಕಾ ಗೋಷ್ಠಿ ನಡೆಸಿರುವುದು ನಿಯಮ ಬಾಹಿರವಾಗಿದೆ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ ಎಂದರು.

ತಾಲ್ಲೂಕು ಅಧ್ಯಕ್ಷರಾಗಿದ್ದ ವೈ.ಸಿ.ಸುನಿಲ್ ಕುಮಾರ್ ರವರ ಮೇಲೆ ಕೆಲವು ಆರೋಪಗಳಿದ್ದು, ಆರೋಪಗಳ ಬಗ್ಗೆ ಸ್ಪಷ್ಟಿಕರಣ ಕೇಳಲು ಜಿಲ್ಲಾ ಸಮಿತಿ ಸಭೆ ತೀರ್ಮಾನಿಸಿತ್ತು. ಅದರಂತೆ ಜಿಲ್ಲಾ ಸಮಿತಿ ಸುನಿಲ್ ಕುಮಾರ್ ರವರಿಗೆ ರಿಜಿಸ್ಟರ್ ಅಂಚೆ ಪತ್ರದ ಮೂಲಕ ನೋಟಿಸು ಜಾರಿ ಮಾಡಲಾಗಿತ್ತು. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಸುನಿಲ್ ಕುಮಾರ್ ಅನಾರೋಗ್ಯದ ಕಾರಣ ನೀಡಿ ರಾಜಿನಾಮೆ ನಾಟಕ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.

ಕೆ.ಕೆ.ಕೃಷ್ಣಗೌಡರು ಸಂಘಟನೆಯಲ್ಲಿ ಬಹಳ ಕಾಲ ಇರುವವರು ಸಂಘಟನೆಯ ನಿಯಮಾವಳಿಗಳು ಕೃಷ್ಣಗೌಡರಿಗೆ ತಿಳಿದಿದ್ದರೂ ಯಾರೊ ಬೆರಳೆಣಿಕೆ ಜನರನ್ನು ಕೂರಿಸಿಕೊಂಡು ಅಸ್ಥಿತ್ವದಲ್ಲಿರುವ ತಾಲ್ಲೂಕು ಸಮಿತಿ ಗಮನಕ್ಕೂ ಬಾರದೆ ತಾಲ್ಲೂಕು ಸಮಿತಿ ಅಧ್ಯಕ್ಷರನ್ನು ಘೋಷಣೆ ಮಾಡಿರುವುದು ನಿಯಮ ಬಾಹಿರವಾಗಿದೆ ಎಂದು ಹೇಳಿದರು.

ಈ ವಿಚಾರವನ್ನು ರಾಜ್ಯ ಸಮಿತಿ ಗಮನಕ್ಕೆ ತರಲಾಗಿದ್ದು ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲವೆಂದು ರಾಜ್ಯಾಧ್ಯಕ್ಷರು ತಿಳಿಸಿರುತ್ತಾರೆ. ಈ ಕಾರಣದಿಂದ ಕೂಡಲೆ ಜಾರಿಗೆ ಬರುವಂತೆ ಸಂಪೂರ್ಣ ತಾಲ್ಲೂಕು ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ. ಹಾಗೂ ಮತ್ತಾವರ ಜಯರಾಂರವರನ್ನು ತಾಲ್ಲೂಕು ಸಂಚಾಲಕರಾಗಿ ನೇಮಕ ಮಾಡಿದ್ದು ಮುಂದಿನ ತಾಲ್ಲೂಕು ಸಮಿತಿ ಸಭೆ ಕರೆಯುವ ಜವಬ್ದಾರಿಯನ್ನು ನೀಡಲಾಗಿದೆ ಅಲ್ಲಿ ತಾಲ್ಲೂಕು ಸಮಿತಿ ರಚನೆ ಮಾಡಲಾಗುವುದು ಎಂದರು.

ಸುದ್ದಿಗೋಷ್ಟಿಯಲ್ಲಿ ಗೌರವಾಧ್ಯಕ್ಷ ಬಿ.ಸಿ. ಬಸವರಾಜು, ಮಾಜಿ ಅಧ್ಯಕ್ಷ ಗುರುಶಾಂತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಾಶೇಖರ್, ದೇವರಾಜ್, ಶಿವಣ್ಣ, ಜಯರಾಂ, ಕುಮಾರಸ್ವಾಮಿ ಇದ್ದರು.

Appointment of president of taluk unit of farmers’ association is illegal

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ ಅಧಿಕಾರ ಪಡೆಯಲು ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಕೋಟ್ಯಾಂತರ ಹಣ ಖರ್ಚು ಮಾಡಿ ನ್ಯಾಯಲಯದ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ ಪೈಪೋಟಿ ನಡೆಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ರಾಜಕೀಯವಾಗಿ ರಸ್ತೆಬಿದ್ದಿರುವ ಗುಂಡಿಯಲ್ಲಿ ಮುಚ್ಚುತ್ತಾರೆಂದು ವಿಧಾನಪರಿಷತ್ ಸದಸ್ಯ...

Related Articles

ಮಲೆನಾಡಿನ ಮಡಿಲಲ್ಲಿ ಜ್ಞಾನದ ಎರಡು ದೀಪಗಳು

ಜಯಪುರದ ಶ್ರೀ ಸತ್ಯಸಾಯಿ ದಿವ್ಯ ನಿಕೇತನಂ ಮತ್ತು ಶ್ರೀ ಸತ್ಯಸಾಯಿ ಶ್ರೀ ನಿಕೇತನಂನಲ್ಲಿ ಉಚಿತ ಶಿಕ್ಷಣದೊಂದಿಗೆ...

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ...

ಕಡೂರು, ಚಿಕ್ಕಮಗಳೂರು ತಾಲ್ಲೂಕುಗಳನ್ನು ಬರಪಟ್ಟಿಗೆ ಸೇರಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬರಗಾಲ ಪೀಡಿತ ತಾಲ್ಲೂಕುಗಳ ಘೋಷಣೆಯಲ್ಲಿ ತಾರತಮ್ಯ ನೀತಿ ಅನುಸರಿಸಿದೆ ಎಂದು ಕರ್ನಾಟಕ...