Home namma chikmagalur ಮಳೆಯಿಂದ ಹಾನಿಯಾದ ಕಾಫಿ, ಮೆಣಸು – ಅಡಿಕೆ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು
namma chikmagalurchikamagalurHomeLatest News

ಮಳೆಯಿಂದ ಹಾನಿಯಾದ ಕಾಫಿ, ಮೆಣಸು – ಅಡಿಕೆ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಕಾಫಿ, ಮೆಣಸು ಮತ್ತು ಅಡಿಕೆ ಬೆಳೆಗಳಿಗೆ ಹಾನಿಯಾಗಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆಶಿವಣ್ಣ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ, ಕಾಫಿ ಬೆಳೆಯುವ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೇ ಮತ್ತು ಜೂನ್ ತಿಂಗಳಿನಿಂದ ನಿರಂತರವಾಗಿ ಸುರಿದ ಮಳೆಯಿಂದ ಕಾಫಿ ತೋಟದಲ್ಲಿ ಅಪಾರ ಪ್ರಮಾಣದಲ್ಲಿ ಕಾಫಿ ಫಸಲು ನಷ್ಟವಾಗಿದೆ. ಈ ಕುರಿತು ಕಾಫಿ ಮಂಡಳಿಯ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡಿರುತ್ತಾರೆ. ಬಳಿಕ ಮಳೆ ಮುಂದುವರೆದಿದ್ದು, ಅಧಿಕ ತೇವಾಂಶ, ಗಾಳಿ, ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ ಎಂದು ತಿಳಿಸಿದರು.

ಕಾಫಿಮಂಡಳಿ, ಕಂದಾಯ ಇಲಾಖೆ, ತೋಟಗಾರಿಕೆ ಮತ್ತು ಕೃಷಿಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಮತ್ತೊಮ್ಮೆ ಬೆಳೆನಷ್ಟ ಕುರಿತು ಸಮೀಕ್ಷೆ ನಡೆಸಿ ಮತ್ತೊಮ್ಮೆ ಸರ್ಕಾರಕ್ಕೆ ವರದಿ ಸಲ್ಲಿಸಲು ಮುಂದಾಗಬೇಕೆಂದು ಒತ್ತಾಯಿಸಿದ ಅವರು, ಕಾಳು ಮೆಣಸು, ಅಡಿಕೆ ಬೆಳೆಯಲ್ಲಿ ಕೊಳೆರೋಗ ಕಂಡುಬಂದಿದ್ದು, ಹಾನಿ ಉಂಟಾಗಿದೆ ಎಂದು ಹೇಳಿದರು.

ಸರ್ಕಾರ ಅಧಿಕಾರಿಗಳಿಂದ ವರದಿಪಡೆದು ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರ ನೆರವಿಗೆ ಧಾವಿಸಬೇಕು. ರಾಷ್ಟ್ರ ಮತ್ತು ರಾಜ್ಯ ವಿಪತ್ತು ಯೋಜನೆಯಡಿ ಸೂಕ್ತ ಪರಿಹಾರ ದೊರಕಿಸಿಕೊಡಬೇಕು. ಕಾಫಿ ಫಸಲು ನಷ್ಟವಾಗಿರು ವ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಕಾಫಿಮಂಡಳಿ ಅಧ್ಯಕ್ಷರ ಗಮನಕ್ಕೂ ತರಲಾಗಿದೆ ಎಂದರು.

ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ರತೀಶ್‌ಕುಮಾರ್ ಮಾತನಾಡಿ,ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಕಾಡಾನೆಹಾವಳಿ ಅಧಿಕಗೊಂಡಿದ್ದು, ತೋಟಗಳನ್ನೆ ತಮ್ಮ ಆವಾಸಸ್ಥಾನವನ್ನಾಗಿ ಮಾಡಿಕೊಂಡಿವೆ. ಕಾಫಿ, ಮೆಣಸು, ಅಡಿಕೆ ಬೆಳೆಗಳನ್ನು ನಾಶಪಡಿಸುತ್ತಿದ್ದು, ಬೆಳೆಗಾರರು ಮತ್ತು ರೈತರು ನಷ್ಟ ಅನುಭವಿಸುವಂತಾಗಿದೆ. ಕಾಡುಪ್ರಾಣಿಗಳ ಹಾವಳಿಯಿಂದ ಕಾರ್ಮಿಕರು ಕೂಲಿ ಕೆಲಸಕ್ಕೆ ಬರಲು ಹಿಂದೇಟುಹಾಕುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.

ತೋಟಗಳಲ್ಲಿ ರಸಗೊಬ್ಬರ ಬಳಕೆ ಮುಖ್ಯವಾಗಿದೆ. ಯೂರಿಯಾ ಗೊಬ್ಬರ ಅಗತ್ಯವಾಗಿ ಬೇಕಾಗಿದ್ದು, ಈ ಗೊಬ್ಬರದ ಕೊರತೆ ಉಂಟಾಗಿದೆ. ಸರ್ಕಾರ ಬೆಳೆಗಾರರ ನೆರವಿಗೆ ಧಾವಿಸಿ, ೫ ಎಕರೆಗೆ ಕನಿಷ್ಟ ೮ ಮೂಟೆ ಯೂರಿಯಾ ರಸಗೊಬ್ಬರವನ್ನು ಕೊಡಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಬೆಳೆಗಾರರ ಸಂಘದ ಪ್ರಧಾನಕಾರ್ಯದರ್ಶಿ ಕೆರೆಮಕ್ಕಿ ಮಹೇಶ್ ಮಾತನಾಡಿ, ಮಲೆನಾಡು ಭಾಗದಲ್ಲಿ ಓಡಾಡುತ್ತಿರುವ ಕಾಡಾನೆಗಳನ್ನು ಭದ್ರಾಅಭಯಾರಣ್ಯ ಅಥವಾ ನಾಗರಹೊಳೆ ಅಭಯಾರಣ್ಯಕ್ಕೆ ಸೇರಿಸಿ ಸುತ್ತಲು ಟೆಂಟಿಕಲ್ ಫೆನ್ಸಿಂಗ್ ಅಥವಾ ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ಬೆಳೆ ನಾಶವಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಕಾಫಿ ಬೆಳೆಗಾರ ಒಕ್ಕೂಟದ ಪ್ರಧಾನಕಾರ್ಯದರ್ಶಿ ಟಿ.ಪಿ.ಸುರೇಂದ್ರ, ಕೆಜಿಎಫ್ ಮತ್ತು ಬೆಳೆಗಾರ ಸಂಘದ ಮುಖಂಡರಾದ ಸಿ.ಸುರೇಶ್, ಬಿ.ಆರ್.ಬಾಲಕೃಷ್ಣ, ಅಶೋಕ್ ಸೂರಪ್ಪನಹಳ್ಳಿ ಇದ್ದರು.

Appropriate compensation should be provided to coffee pepper and areca nut crops damaged by rains

Share

Leave a comment

Leave a Reply

Your email address will not be published. Required fields are marked *

Don't Miss

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

Related Articles

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಸರಿನಲ್ಲಿ ಚಿನ್ನದ ಸರ ಪಡೆದು ವಂಚನೆ

ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡು ಆಭರಣ ಮಳಿಗೆಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ...

ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಚಿಕ್ಕಮಗಳೂರು-ಕಳಸ ಸೇರ್ಪಡೆ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಜಿಲ್ಲೆಯ ಎರಡು ತಾಲ್ಲೂಕುಗಳು...

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಮೆಸ್ಕಾಂ ಸಬ್‌ಸ್ಟೇಷನ್‌ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವು

ಚಿಕ್ಕಮಗಳೂರು: ಹೊಸದಾಗಿ ನಿರ್ಮಿಸಲಾಗಿದ್ದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ತುಂಬಿಸಲಾಗಿದ್ದ ಸುಮಾರು 12,400 ಲೀಟರ್,...