Home namma chikmagalur chikamagalur ಕಾಂಗ್ರೆಸ್‌ನ ಧೋರಣೆಯನ್ನು ಖಂಡಿಸಿ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ
chikamagalurHomeLatest Newsnamma chikmagalur

ಕಾಂಗ್ರೆಸ್‌ನ ಧೋರಣೆಯನ್ನು ಖಂಡಿಸಿ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ

Share
Oplus_16908288
Share

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಮೂಡಿಸುವ ಹಾಗೂ ಸುಳ್ಳು ಸುದ್ದಿಗಳ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಆರೋಪಿಸಿದರು.

ನಗರದ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಈ ಧೋರಣೆಯನ್ನು ಖಂಡಿಸಿ ನವೆಂಬರ್ 1ರಿಂದ 30ರವರೆಗೆ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯಾನಂತರ ದೇಶದಲ್ಲಿ 12 ಬಾರಿ ಎಸ್‌ಐಆರ್‌ ಪ್ರಕ್ರಿಯೆ ನಡೆದಿದ್ದು, ಈ ಅವಧಿಯಲ್ಲಿ ಹಲವು ಬಾರಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಮತದಾರರ ಪಟ್ಟಿಯ ಪರಿಷ್ಕರಣೆ ಚುನಾವಣಾ ಆಯೋಗದ ನಿರಂತರ ಹಾಗೂ ಸಾಂವಿಧಾನಿಕ ಪ್ರಕ್ರಿಯೆಯಾಗಿದೆ. ಆದರೂ ಕಾಂಗ್ರೆಸ್, ಎಸ್‌ಐಆರ್‌ ಪ್ರಕ್ರಿಯೆಯನ್ನು ರಾಜಕೀಯ ವಿವಾದವನ್ನಾಗಿ ಮಾಡುತ್ತಿದೆ ಎಂದು ಟೀಕಿಸಿದರು.

ಎಸ್‌ಐಆರ್‌ ಪ್ರಕ್ರಿಯೆ ಆರಂಭಕ್ಕೂ ಮುನ್ನ ಚುನಾವಣಾಧಿಕಾರಿಗಳು ರಾಜ್ಯಮಟ್ಟದಿಂದ ತಾಲೂಕು ಮಟ್ಟದವರೆಗೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಆಗ ಆಕ್ಷೇಪ ವ್ಯಕ್ತಪಡಿಸದ ಕಾಂಗ್ರೆಸ್, ಇದೀಗ ಜನರಲ್ಲಿ ಗೊಂದಲ ಮೂಡಿಸುವ ರೀತಿಯಲ್ಲಿ ಹೋರಾಟ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಹೆಸರು ದಾಖಲಾಗಿರುವುದು, ಮೃತಪಟ್ಟವರ ಹೆಸರುಗಳು ಮುಂದುವರಿದಿರುವುದು, ಸ್ಥಳಾಂತರಗೊಂಡ ಮತದಾರರ ವಿವರಗಳು ಹಾಗೂ ಅಗತ್ಯ ದಾಖಲೆಗಳಿಲ್ಲದೆ ಹೆಸರು ಸೇರ್ಪಡೆಯಾಗಿರುವಂತಹ ಅಂಶಗಳನ್ನು ಪರಿಶೀಲಿಸಲು ಪರಿಷ್ಕರಣೆ ಸಹಕಾರಿಯಾಗಲಿದೆ. ಇಂತಹ ಪ್ರಕ್ರಿಯೆಯನ್ನು ರಾಜಕೀಯ ಪಕ್ಷಗಳು ಸ್ವಾಗತಿಸಬೇಕೇ ಹೊರತು, ವಿರೋಧಿಸುವ ಮೂಲಕ ಜನರಲ್ಲಿ ಆತಂಕ ಮೂಡಿಸಬಾರದು ಎಂದರು.

ಕಾಂಗ್ರೆಸ್‌ನ ರಾಜಕೀಯ ನಿಲುವುಗಳನ್ನು ಟೀಕಿಸಿದ ಸುನಿಲ್ ಕುಮಾರ್, ಚುನಾವಣೆಗಳಲ್ಲಿ ಸೋಲನುಭವಿಸಿದಾಗಲೆಲ್ಲ ಕಾಂಗ್ರೆಸ್ ಚುನಾವಣಾ ವ್ಯವಸ್ಥೆಯನ್ನೇ ಪ್ರಶ್ನಿಸುತ್ತಿದೆ ಎಂದು ಆರೋಪಿಸಿದರು. ಈ ಹಿಂದೆ ಇವಿಎಂ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್, ನಂತರ ಮತದಾರರ ಪಟ್ಟಿಯ ಬಗ್ಗೆ ಪ್ರಶ್ನೆ ಎತ್ತಿತ್ತು. ಇದೀಗ ಎಸ್‌ಐಆರ್‌ ಪ್ರಕ್ರಿಯೆಯನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಮತದಾರರನ್ನೇ ದೂಷಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ವ್ಯಂಗ್ಯವಾಡಿದರು.

ಪ್ರಜಾಪ್ರಭುತ್ವದ ವ್ಯವಸ್ಥೆ ಮತ್ತು ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಕಾಂಗ್ರೆಸ್ ಗೌರವ ಹೊಂದಿಲ್ಲ ಎಂದು ಆರೋಪಿಸಿದ ಅವರು, ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ದೂರಿದರು. ಈ ಹಿಂದೆ ಪ್ರಶಸ್ತಿ ವಾಪಸಿ ವಿವಾದ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು 370ನೇ ವಿಧಿ ರದ್ದತಿ ಸಂದರ್ಭಗಳಲ್ಲಿಯೂ ಇದೇ ರೀತಿಯ ರಾಜಕೀಯ ವಾತಾವರಣ ಸೃಷ್ಟಿಸಲು ಪ್ರಯತ್ನಿಸಲಾಗಿತ್ತು ಎಂದು ಹೇಳಿದರು.

ಎಸ್‌ಐಆರ್‌ ಕುರಿತು ಪಶ್ಚಿಮ ಬಂಗಾಳದಲ್ಲಿ ವ್ಯಕ್ತವಾದ ಆಕ್ಷೇಪಗಳ ಹಿನ್ನೆಲೆಯಲ್ಲಿ ನ್ಯಾಯಾಲಯದ ವಿಚಾರಣೆಗಳೂ ನಡೆದಿವೆ ಎಂದು ಉಲ್ಲೇಖಿಸಿದ ಅವರು, ಚುನಾವಣಾ ಆಯೋಗದ ಪ್ರಕ್ರಿಯೆಯನ್ನು ರಾಜಕೀಯ ಕಾರಣಗಳಿಗಾಗಿ ವಿರೋಧಿಸುವುದನ್ನು ಕಾಂಗ್ರೆಸ್ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯ ಕುರಿತು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ತಲುಪಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನವೆಂಬರ್ 1ರಿಂದ 30ರವರೆಗೆ ವಿವಿಧ ಹಂತಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಮೊದಲ ಹಂತದಲ್ಲಿ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪಾದಯಾತ್ರೆ ನಡೆಸಲಾಗುವುದು. ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಸಂವಾದ ನಡೆಸಿ, ಮತದಾರರ ಪಟ್ಟಿ ಪರಿಷ್ಕರಣೆಯ ಉದ್ದೇಶ ಮತ್ತು ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಇದಲ್ಲದೆ, ತಾಲೂಕು ಕೇಂದ್ರಗಳಲ್ಲಿ ಪ್ರಬುದ್ಧರು ಹಾಗೂ ಯುವಕರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಎಸ್‌ಐಆರ್‌ ಕುರಿತು ಹರಡುತ್ತಿರುವ ಸುಳ್ಳು ಸುದ್ದಿಗಳು ಮತ್ತು ತಪ್ಪು ಮಾಹಿತಿಗಳಿಗೆ ವಾಸ್ತವಾಂಶಗಳ ಮೂಲಕ ಉತ್ತರ ನೀಡುವ ಪ್ರಯತ್ನ ಮಾಡಲಾಗುವುದು ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪಟ್ಟಿಯನ್ನು ಪರಿಷ್ಕರಿಸುವುದು, ಬಿಪಿಎಲ್‌ ಕಾರ್ಡ್‌ಗಳ ಪರಿಶೀಲನೆ, ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಇದೇ ರೀತಿ ಮತದಾರರ ಪಟ್ಟಿಯ ಪರಿಷ್ಕರಣೆಯೂ ನಿಯಮಾನುಸಾರ ನಡೆಯುವ ಪ್ರಕ್ರಿಯೆಯಾಗಿದ್ದು, ಅದನ್ನು ವಿರೋಧಿಸುವ ಕಾಂಗ್ರೆಸ್‌ನ ನಿಲುವು ಸರಿಯಲ್ಲ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದರು.

ಕಾಂಗ್ರೆಸ್‌ನ ರಾಜಕೀಯ ನಿಲುವುಗಳ ಕುರಿತು ಜನರಿಗೆ ಅರಿವು ಮೂಡಿಸುವುದು ಹಾಗೂ ಎಸ್‌ಐಆರ್‌ ಬಗ್ಗೆ ವಾಸ್ತವಾಂಶಗಳನ್ನು ತಿಳಿಸುವುದು ಅಭಿಯಾನದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಕರ್ನಾಟಕ ರಾಜ್ಯ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಕಲ್ಮಣಪ್ಪ, ಬಿಜೆಪಿ ಹಿರಿಯ ಮುಖಂಡ ಕೋಟೆ ರಂಗಣ್ಣ, ನಗರ ಬಿಜೆಪಿ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ರಾಜಪ್ಪ, ಜಿಲ್ಲಾ ಮಾಧ್ಯಮ ವಿಭಾಗದ ಸಂಚಾಲಕ ದಿನೇಶ್ ಕೋಟೆ, ಮುಖಂಡರು ಉಪಸ್ಥಿತರಿದ್ದರು.

‘Arajakate Hatavo’ (End Anarchy) campaign launched across the state to condemn the Congress party’s stance.

Share

Leave a comment

Leave a Reply

Your email address will not be published. Required fields are marked *

Don't Miss

ನರ್ಸ್ ಮನೆಯ ಬೀರುವಿನಲ್ಲಿದ್ದ 47 ಗ್ರಾಂ ಚಿನ್ನಾಭರಣ ಕಳವು: ₹4.70 ಲಕ್ಷ ನಷ್ಟ

ನರಸಿಂಹರಾಜಪುರ: ಮನೆಯ ಗಾಡ್ರೇಜ್ ಬೀರುವಿನಲ್ಲಿಟ್ಟಿದ್ದ 47 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದ್ದು, ಸುಮಾರು ₹4.70 ಲಕ್ಷ ನಷ್ಟ ಸಂಭವಿಸಿರುವ ಘಟನೆ ಪಟ್ಟಣದ ನೇತಾಜಿನಗರದ ಹೊಸ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿ,...

ಕುಸುಮ್-ಬಿ, ಪಿಎಂ ಸೂರ್ಯ ಘರ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಸೂಚನೆ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಯೋಜನೆಯಡಿ ಜಿಲ್ಲೆಯಲ್ಲಿ ಅನುಮೋದನೆಗೊಂಡಿರುವ 4,319 ರೈತರ ಅರ್ಜಿಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ವಿದ್ಯುತ್ ಸಂಪರ್ಕಗಳನ್ನು ಶೀಘ್ರ ಒದಗಿಸಬೇಕು ಎಂದು...

Related Articles

ಪೊಲೀಸ್ ರಿಂದ ಮಾಮುಲಿ ವಸೂಲಿ ಹಗಲು-ರಾತ್ರಿ ನಡೆಯುವ ಜೂಜು ?

ತರೀಕೆರೆ: ಇಸ್ಪೀಟು, ಮಟ್ಕಾ,ತೂರುವ ಬಿಲ್ಲೆ ಇನ್ನಿತರ ಜೂಜು ಹಗಲು,ರಾತ್ರಿ ನಡೆಯುತ್ತಿದ್ದು ಇವರುಗಳಿಂದ “ಮಾಮುಲಿ” ವಸೂಲಿ ಮಾಡುವಲ್ಲಿ...

ಮುತ್ತೋಡಿ-ಶಿರವಾಸೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಮುತ್ತೋಡಿ-ಶಿರವಾಸೆ ರಸ್ತೆಯಲ್ಲಿ ದಿಢೀರನೆ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ...

ಚಿಕ್ಕಮಗಳೂರಿನಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಆಶ್ರಯದಲ್ಲಿ ಬುಧವಾರ ನಗರದಲ್ಲಿ ನಡೆದ ವಿಜಯದಶಮಿ ಪಥಸಂಚಲನವು ಸಾರ್ವಜನಿಕರ...

ಭೌತಿಕ ಸರ್ವೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಭೌತಿಕ ಸರ್ವೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯ...