Home namma chikmagalur chikamagalur ಚರಂಡಿ ವಿಷಯಕ್ಕೆ ಅಟ್ರಾಸಿಟಿ ಪ್ರಕರಣ ದಾಖಲು
chikamagalurCrime NewsHomeLatest Newsnamma chikmagalur

ಚರಂಡಿ ವಿಷಯಕ್ಕೆ ಅಟ್ರಾಸಿಟಿ ಪ್ರಕರಣ ದಾಖಲು

Share
Share

ಚಿಕ್ಕಮಗಳೂರು : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರಂಡಿ ವಿಚಾರವಾಗಿ ಉಂಟಾದ ಸಣ್ಣ ಕಿಡಿ ಇದೀಗ ದೊಡ್ಡ ಜಗಳಕ್ಕೆ ನಾಂದಿ ಹಾಡಿದ್ದು, ಕೇಸ್ ಹಾಗೂ ಕೌಂಟರ್ ಕೇಸ್ ದಾಖಲಾಗಿವೆ.

ಏಪ್ರಿಲ್ 4ರ ಸಂಜೆ ಸಣೇಗೌಡ ಎಂಬುವವರು ಯಶೋಧ ಎಂಬುವವರ ಮನೆಯ ಗೋಡೆಯ ಪಕ್ಕದಲ್ಲಿ ಚರಂಡಿಗಾಗಿ ಗುಂಡಿ ತೆಗೆಯುತ್ತಿದ್ದಾಗ ಈ ವಿವಾದ ಆರಂಭವಾಗಿದೆ. ಮಳೆ ಬಂದರೆ ಗೋಡೆ ಕುಸಿಯುತ್ತದೆ ಎಂದು ಯಶೋಧ ಆಕ್ಷೇಪಿಸಿದರೆ, ಗುಂಡಿ ತೋಡದಿದ್ದರೆ ನೀರು ತಮ್ಮ ಮನೆಗೆ ನುಗ್ಗುತ್ತದೆ ಎಂದು ಸಚ್ಚೇಗೌಡ ವಾದಿಸಿದ್ದು, ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಲ್ಲದೆ, ದೈಹಿಕ ಹಲ್ಲೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಎರಡೂ ಕಡೆಯವರು ಪೊಲೀಸರ ಮೆಟ್ಟಿಲೇರಿದ್ದಾರೆ. ಸಣ್ಣೀಗೌಡ, ಲಕ್ಷ್ಮಮ್ಮ ಮತ್ತು ಯಶೋಧ, ಸುಮಿತ್ರಾ ಅವರುಗಳು ಪರಸ್ಪರ ದೂರು ನೀಡಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಶೇಷವೆಂದರೆ, ಈ ಜಗಳದ ನಡುವೆ ಜಾತಿ ನಿಂದನೆಯ ಆರೋಪವೂ ಕೇಳಿಬಂದಿದ್ದು, ಪೊಲೀಸರು ಅಟ್ರಾಸಿಟಿ ಪ್ರಕರಣವನ್ನೂ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ನೆರೆಹೊರೆಯವರ ನಡುವಿನ ಸಣ್ಣ ಚರಂಡಿ ವಿವಾದ ಈಗ ಪೊಲೀಸ್ ಠಾಣೆಯ ಅಂಗಳದಲ್ಲಿ ದೊಡ್ಡ ಕಾನೂನು ಸಮರಕ್ಕೆ ಕಾರಣವಾಗಿದೆ.

Atrocity case registered over sewage issue

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...