Home namma chikmagalur chikamagalur ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ
chikamagalurCrime NewsHomeLatest Newsnamma chikmagalur

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

Share
Share

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ಹೊಸಕೋಟೆ ಗ್ರಾಮದ ಸಂತೋಷ್ (16) ನೀಡಿದ ದೂರಿನ ಪ್ರಕಾರ, ಆಗಸ್ಟ್ 5ರಂದು ಮಧ್ಯಾಹ್ನ ಸ್ನೇಹಿತನನ್ನು ಬಸ್‌ಗೆ ಹತ್ತಿಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಗ್ರಾಮದ ವಿಜಯ ಅಲಿಯಾಸ್ ವಿಜಯರಾಜ್ ಎಂಬಾತ ಹಿಂದಿನಿಂದ ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ ಸ್ಥಳೀಯ ಮಹಿಳೆಯೊಬ್ಬರು ಸಂತೋಷ್‌ನನ್ನು ಪಕ್ಕಕ್ಕೆ ಎಳೆದ ಪರಿಣಾಮ ಅನಾಹುತ ತಪ್ಪಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ದೇವಸ್ಥಾನಕ್ಕೆ ಪ್ರವೇಶಿಸಿದ ವಿಚಾರವನ್ನು ಮುಂದಿಟ್ಟುಕೊಂಡು ತನ್ನ ಜಾತಿಯನ್ನು ಉಲ್ಲೇಖಿಸಿ ಅವಾಚ್ಯವಾಗಿ ನಿಂದಿಸಿ, ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿ ಮತ್ತೆ ಕತ್ತಿಯಿಂದ ಹಲ್ಲೆಗೆ ಯತ್ನಿಸಿದಾಗ ಮತ್ತೊಬ್ಬ ವ್ಯಕ್ತಿ ವಿಜಯನನ್ನು ತಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ಸಂದರ್ಭದಲ್ಲಿ ಸಂತೋಷ್ ಭಯದಿಂದ ಮೊಬೈಲ್‌ನಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಸೆರೆಹಿಡಿದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಗ್ರಾಮದ ಶ್ವೇತಾ ಎಂಬುವರು ಸಂತೋಷ್ ಬಳಿ ಇರುವ ಮೊಬೈಲ್ ಕಿತ್ತುಕೊಂಡು ಹಲ್ಲೆ ಮಾಡುವಂತೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆ ಕುರಿತು ಆಗಸ್ಟ್ 6ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲು ತೆರಳಿದ್ದರೂ, ಅದೇ ಊರಿನಲ್ಲಿ ಮತ್ತೊಂದು ಎಫ್‌ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ಹೇಳಿ ದೂರು ಸ್ವೀಕರಿಸಿರಲಿಲ್ಲ. ಬಳಿಕ ಗೊಂದಲದ ಹಿನ್ನೆಲೆಯಲ್ಲಿ ದೂರು ನೀಡಲು ವಿಳಂಬವಾಗಿದೆ ಎಂದು ಸಂತೋಷ್ ತಿಳಿಸಿದ್ದಾರೆ.

ಆಗಸ್ಟ್ 7ರಂದು ಸಂತೋಷ್ ನೀಡಿದ ದೂರನ್ನು ಸ್ವೀಕರಿಸಿರುವ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಅಟ್ರಾಸಿಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಘಟನೆಯ ವಿಡಿಯೋ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸುವ ಸಾಧ್ಯತೆಯಿದೆ.

Attempted attack on boy with sword over temple entry

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...