Home namma chikmagalur ಆ.17: ಅಜ್ಜಂಪುರ ಪ.ಪಂ. ಚುನಾವಣೆಗೆ ವೇಳಾ ಪಟ್ಟಿ ಪ್ರಕಟ
namma chikmagalurajjampuraHomeLatest News

ಆ.17: ಅಜ್ಜಂಪುರ ಪ.ಪಂ. ಚುನಾವಣೆಗೆ ವೇಳಾ ಪಟ್ಟಿ ಪ್ರಕಟ

Share
Share

ಚಿಕ್ಕಮಗಳೂರು: ಹೊಸದಾಗಿ ರಚನೆಯಾಗಿರುವ ಅಜ್ಜಂಪುರ ಪಟ್ಟಣ ಪಂಚಾಯಿತಿಯ ನಂ. ೧ರಿಂದ ೧೨ ವಾರ್ಡ್‌ಗಳ ಕೌನ್ಸಿಲರುಗಳ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ಇಂದು ಅಧಿಸೂಚನೆ ಹೊರಡಿಸಿದ್ದಾರೆ.

ಅದರಂತೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಆಗಸ್ಟ್ ೫ ರಂದು ಕೊನೆಯ ದಿನವಾಗಿದ್ದು, ಆಗಸ್ಟ್ ೬ ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.

ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ ೮ ಕೊನೆಯ ದಿನವಾಗಿದೆ. ಮತದಾನ ಅಗತ್ಯವಿದ್ದರೆ ಆಗಸ್ಟ್ ೧೭ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನವನ್ನು ನಡೆಸಲಾಗುವುದು.

ಮರು ಮತದಾನ ಅಗತ್ಯವಿದ್ದಲ್ಲಿ ಆಗಸ್ಟ್ ೧೯ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ನಡೆಸಲಾಗುವುದು.

ಆಗಸ್ಟ್ ೨೦ ರಂದು ಬೆಳಿಗ್ಗೆ ೮ ಗಂಟೆಯಿಂದ ತಾಲ್ಲೂಕು ಕೇಂದ್ರದಲ್ಲಿ ಮತಗಳ ಎಣಿಕೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aug. 17: Schedule announced for Ajjampura Town Panchayat elections

Share

Leave a comment

Leave a Reply

Your email address will not be published. Required fields are marked *

Don't Miss

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ನೊಂದವರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಕರ್ನಾಟಕ ಜನಶಕ್ತಿ ಹಾಗೂ ಎದ್ದೇಳು ಕರ್ನಾಟಕ...

ಜನಸಾಮಾನ್ಯರ ಏಳಿಗೆಗೆ ಜೀವನ ಮೀಸಲಿಟ್ಟವರು ಹೆಚ್.ಟಿ.ರಾಜೇಂದ್ರ

ಚಿಕ್ಕಮಗಳೂರು: :- ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈ ಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ ಮೀಸಲಿಟ್ಟು ಚಳುವಳಿ ರೂಪಿಸಿದ ಅಪರೂಪದ ಜನನಾ ಯಕ ರಾಜೇಂದ್ರರವರು ಎಂದು ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್...

Related Articles

ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮ?

ಮೂಡಿಗೆರೆ: ಮೂಡಿಗೆರೆ ಶಾಸಕಿ ನಯನಮೋಟಮ್ಮ ಕೇಸರಿ ಶಾಲು ಧರಿಸಿ ಹಿಂದು ಮಹಸಭಾ ಗಣಪತಿ ಕಾರ್ಯಕ್ರಮದಲ್ಲಿ ಪ್ರಮೋದ್...

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ...

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ...

ಗೊಬ್ಬರದ ಅಭಾವಕ್ಕೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ

ಚಿಕ್ಕಮಗಳೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಅಭಾವ ಸೃಷ್ಟಿಯಾಗಲು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ ,ಗೊಬ್ಬರ...