Home Crime News ಆಟೊ ಮುಖಾಮುಖಿ ಡಿಕ್ಕಿ- ಚಾಲಕ ಮಂಜುನಾಥ್ ಸ್ಥಳದಲ್ಲೇ ಸಾವು
Crime NewschikamagalurHomeLatest Newsnamma chikmagalur

ಆಟೊ ಮುಖಾಮುಖಿ ಡಿಕ್ಕಿ- ಚಾಲಕ ಮಂಜುನಾಥ್ ಸ್ಥಳದಲ್ಲೇ ಸಾವು

Share
Share

ಮೂಡಿಗೆರೆ: ಕಡೂರು- ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಯ ರೈತ ಭವನದ ಬಳಿ ಕಾರು ಹಾಗೂ ಆಟೊ ಮುಖಾ ಮುಖಿ ಡಿಕ್ಕಿಯಾಗಿ ಆಟೊ ಚಾಲಕ ಮಂಜುನಾಥ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾನುವಾರ ರಾತ್ರಿ ಹ್ಯಾಂಡ್‌ಪೋಸ್ಟ್ ಕಡೆಯಿಂದ ಮೂಡಿಗೆರೆ ಪಟ್ಟಣಕ್ಕೆ ತೆರಳುತ್ತಿದ್ದ ಆಟೊಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೊ ನಜ್ಜುಗುಜ್ಜಾಗಿದೆ. ಅದರ ಚಾಲಕ ಮಂಜುನಾಥ್ ರಸ್ತೆಗೆ ಬಿದ್ದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಅಪಘಾತ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಕ್ಕದ ಕಾಫಿ ತೋಟದೊಳಗೆ ನುಗ್ಗಿದೆ. ಇಬ್ಬರು ಮಕ್ಕಳು ಸೇರಿ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮೃತದೇಹವನ್ನು ಎಂಜಿಎಂ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರ ನಡೆಸಲಾಯಿತು.

ಇಲ್ಲಿರುವ ಹೆದ್ದಾರಿಯು ಸಾವಿನ ಹೆದ್ದಾರಿಯಾಗಿದೆ. ನಿರಂತರವಾಗಿ ಅಪಘಾತಗಳು ಸಂಭವಿಸಿ ಅನೇಕ ಮಂದಿ ಬಲಿಯಾಗಿದ್ದಾರೆ. ಹೆದ್ದಾರಿಯಲ್ಲಿ ವಿಪರೀತ ಗುಂಡಿಯಾಗಿವೆ. ಕನಿಷ್ಠ ಗುಂಡಿಯನ್ನು ಮುಚ್ಚದೆ ಸುಳ್ಳು ಹೇಳುತ್ತಾ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜಾರಿಕೊಳ್ಳುತ್ತಾರೆ. ಅಪಘಾತವಾದಾಗ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ ತಿರುಗಿ ನೋಡುತ್ತಿಲ್ಲ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳದಲ್ಲಿ ನೆರೆದಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು.

‘ಕಡೂರು-ಮೂಡಿಗೆರೆ ಹಾಗೂ ತುಮಕೂರು-ಮಂಗಳೂರು ಈ ಎರಡೂ ಹೆದ್ದಾರಿಗಳ ವಿಸ್ತರಣೆಗೆ ಅನುದಾನ ಬಿಡುಗಡೆಯಾಗಿದೆ. ಟೆಂಡರ್ ಪ್ರಕ್ರಿಯೆ ನಡೆದಿದೆ. ಸದ್ಯದಲ್ಲೆ ಕಾಮಗಾರಿ ಆರಂಭವಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ.

ಇದುವರೆಗೂ ಕಾಮಗಾರಿಯ ಸಿದ್ಧತೆ ಕೂಡ ನಡೆದಿಲ್ಲ. ಹೆದ್ದಾರಿಯುದ್ದಕ್ಕೂ ಗುಂಡಿಯಾಗಿ ವಾಹನಗಳು ಸಂಚರಿಸುವಂತಿಲ್ಲ. ಮಳೆ ನೀರು ಹೆದ್ದಾರಿಯಲ್ಲಿ ಸಂಗ್ರಹಗೊಂಡು ಆಗಾಗ ಅಪಘಾತಗಳು ಸಂಭವಿಸುತ್ತವೆ. ಈಗಾಗಲೇ ಅಪಘಾತದಿಂದ ಹಲವಾರು ಮಂದಿ ಪ್ರಾಣ ಕಳೆದು ಕೊಂಡಿದ್ದಾರೆ. ಅಪಘಾತದ ಹೊಣೆಯನ್ನು ರಾಷ್ಟ್ರೀಯ ಹೆದ್ದಾರಿ ಅಧಿಕಾರದ ಅಧಿಕಾರಿಗಳು ಹೊತ್ತುಕೊಳ್ಳಬೇಕು. ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕು’ ಎಂದು ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ಎಲ್.ಬಿ. ರಮೇಶ್ ಒತ್ತಾಯಿಸಿದರು.

Auto head-on collision – driver Manjunath dies on the spot

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...