ಚಿಕ್ಕಮಗಳೂರು: ನಗರದಲ್ಲಿ ಕಳೆದ ಆರು ದಿನಗಳಿಂದ ಎಲ್ಪಿಜಿ ಗ್ಯಾಸ್ ಲಭ್ಯವಾಗದ ಕಾರಣ ಆಟೋ ಚಾಲಕರ ಜೀವನ ನಿರ್ವಹಣೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಆಟೋ ಚಾಲಕರು ಮತ್ತು ಮಾಲೀಕರ ಸಂಘವು ಈಗ ಅನಿರ್ದಿಷ್ಟಾವಧಿ ಮುಷ್ಕರದ ಹಾದಿ ಹಿಡಿಯಲು ನಿರ್ಧರಿಸಿದೆ.
ನಗರದ ಮೂರು ಗ್ಯಾಸ್ ಬಂಕ್ಗಳಲ್ಲಿ ಒಂದೇ ರೀತಿಯ ದರ ಇರದೇ ಬೇರೆ ಬೇರೆ ದರ ನಿಗದಿಪಡಿಸಿರುವುದು ಚಾಲಕರಲ್ಲಿ ತೀವ್ರ ಗೊಂದಲ ಮೂಡಿಸಿದೆ. ಈ ಕುರಿತು ಬಂಕ್ ಸಿಬ್ಬಂದಿಯನ್ನು ಪ್ರಶ್ನಿಸಿದರೆ ಅವರು ಸರಿಯಾದ ಮಾಹಿತಿ ನೀಡದೆ ಕಿರುಕುಳ ನೀಡುತ್ತಿದ್ದಾರೆ ಎನ್ನುವುದು ಆಟೋ ಚಾಲಕರ ಆರೋಪ,
ಈಗಾಗಲೇ ಜಿಲ್ಲಾಡಳಿತ ಮತ್ತು ಆಹಾರ ಇಲಾಖೆಗೆ ಈ ಸಂಬಂಧ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ಯಾಸ್ ಅಲಭ್ಯತೆಯಿಂದಾಗಿ ದಿನನಿತ್ಯದ ದುಡಿಮೆ ಇಲ್ಲದೆ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದರೂ ಅಧಿಕಾರಿಗಳು ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಜಿಲ್ಲಾಡಳಿತದ ಈ ಮೌನಕ್ಕೆ ಆಟೋ ಚಾಲಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸೋಮವಾರದ ಒಳಗೆ ಗ್ಯಾಸ್ ಪೂರೈಕೆಯಾಗದಿದ್ದರೆ ಮುಷ್ಕರ ನಡೆಸುತ್ತೇವೆ ಎಂದು ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ ಈ ಬಗ್ಗೆ ನಮ್ಮ ಚಿಕ್ಕಮಗಳೂರು ಪ್ರತಿನಿಧಿ ಡ್ಯಾನಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
Auto LPG gas chaos in Chikmagalur city
Leave a comment