Home namma chikmagalur chikamagalur ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು
chikamagalurHomeLatest Newsnamma chikmagalur

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು

Share
Share

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಸ್ಫೋಟಿಸಿದ್ದಾರೆ.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮತ್ತು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸೇರಿದಂತೆ 45ಕ್ಕೂ ಹೆಚ್ಚು ಹಿರಿಯ ಮುಖಂಡರನ್ನೊಳಗೊಂಡ ನಿಯೋಗವು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಲಿಖಿತ ದೂರನ್ನು ಸಲ್ಲಿಸಿದೆ. 2023ರ ಚುನಾವಣೆಯಲ್ಲಿ ಕೇವಲ 722 ಮತಗಳ ಅತ್ಯಲ್ಪ ಅಂತರದಿಂದ ಗೆಲುವು ಸಾಧಿಸಿರುವ ಶಾಸಕಿಯ ಧೋರಣೆಯಿಂದಾಗಿ, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಭಾರಿ ಹಿನ್ನೆಡೆಯಾಗುವ ಆತಂಕವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ.

ವರ್ಷಗಳಿಂದ ಪಕ್ಷಕ್ಕಾಗಿ ರಕ್ತ-ಬೆವರು ಹರಿಸಿದ ಮೂಲ ಕಾಂಗ್ರೆಸ್ಸಿಗರನ್ನು ಸಂಪೂರ್ಣವಾಗಿ ಮೂಲೆಗುಂಪು ಮಾಡುತ್ತಿರುವುದೇ ಈ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ. ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಒಟ್ಟು 16 ಗಂಭೀರ ಅಂಶಗಳನ್ನೊಳಗೊಂಡ ಸುದೀರ್ಘ ದೂರಿನ ಪಟ್ಟಿಯನ್ನು ಕೆಪಿಸಿಸಿಗೆ ಹಸ್ತಾಂತರಿಸಲಾಗಿದೆ. 2023ರ ಚುನಾವಣೆಯ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಆರ್.ಎಸ್.ಎಸ್ ಮತ್ತು ಭಜರಂಗದಳದ ಹಿನ್ನೆಲೆಯುಳ್ಳವರ ಜೊತೆ ಶಾಸಕಿ ಅತಿಯಾದ ಆಪ್ತತೆ ಹೊಂದಿದ್ದಾರೆ ಎಂದು ನಿಯೋಗವು ದೂರಿದೆ.

ಅಷ್ಟೇ ಅಲ್ಲದೆ, ರಾಜ್ಯಾದ್ಯಂತ ನಿಷೇಧ ಎದುರಿಸುತ್ತಿರುವ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ 2025ರ ಮೂಡಿಗೆರೆ ಹಿಂದೂ ಮಹಾಗಣಪತಿ ಕಾರ್ಯಕ್ರಮದಲ್ಲಿ ಅದ್ದೂರಿ ಸ್ವಾಗತ ನೀಡಿ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಅಂಶವನ್ನು ಗಂಭೀರವಾಗಿ ಉಲ್ಲೇಖಿಸಲಾಗಿದೆ. ಈ ನಡವಳಿಕೆಯಿಂದಾಗಿ ಕಾಂಗ್ರೆಸ್ ಪಕ್ಷದ ಪರಂಪರಾಗತ ಮತಬ್ಯಾಂಕ್ ಆಗಿರುವ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದ್ದು, ಈ ಬಗ್ಗೆ ಪ್ರಶ್ನಿಸಲು ಹೋದ ಮುಸ್ಲಿಂ ಮುಖಂಡರನ್ನು ಶಾಸಕರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಲಾಗಿದೆ.

ಕ್ಷೇತ್ರದ ಸಾಂಸ್ಥಿಕ ರಾಜಕಾರಣದಲ್ಲೂ ಶಾಸಕಿಯ ಏಕಪಕ್ಷೀಯ ಧೋರಣೆ ಮಿತಿಮೀರಿದ್ದು, ಗೆದ್ದು ಮೂರು ವರ್ಷಗಳಾಗುತ್ತಾ ಬಂದರೂ ಅವರು ಇಂದಿರಾಗಾಂಧಿ ಸ್ಮಾರಕ ಭವನದ ಮಾತೃ ಬ್ಲಾಕ್ ಕಚೇರಿಗೆ ಒಮ್ಮೆಯೂ ಭೇಟಿ ನೀಡಿಲ್ಲ. ತಾಲೂಕು ಕೇಂದ್ರದಿಂದ ದೂರವಿರುವ ತಮ್ಮ ನಿವಾಸದಲ್ಲಿ ಗೃಹ ಕಚೇರಿ ತೆರೆದಿರುವುದರಿಂದ ಸಾರ್ವಜನಿಕರಿಗೆ ಹಾಗೂ ಕಾರ್ಯಕರ್ತರಿಗೆ ಭೇಟಿ ಮಾಡಲು ತೀವ್ರ ಅನಾನುಕೂಲವಾಗುತ್ತಿದೆ.

ಪಕ್ಷದ ಅಧಿಕೃತ ಸಭೆಗಳು, ರಾಷ್ಟ್ರೀಯ ಹಬ್ಬಗಳು ಅಥವಾ ಸಂತಾಪ ಸೂಚಕ ಸಭೆಗಳಿಂದ ದೂರ ಉಳಿಯುವ ಅವರು, ಕೆಪಿಸಿಸಿ ಸೂಚಿಸಿದ ಸಮನ್ವಯ ಸಮಿತಿಯನ್ನೂ ರಚಿಸದೆ ಪಕ್ಷದ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಕೇವಲ ತಮ್ಮ ಹಿಂಬಾಲಕರ ಮೂಲಕವೇ ಹೋಬಳಿ ಅಧ್ಯಕ್ಷರ ನೇಮಕಾತಿ, ಅನುದಾನ ಹಂಚಿಕೆ, ವರ್ಗಾವಣೆ ಹಾಗೂ ಕಾಂಟ್ರಾಕ್ಟ್ ಲಾಬಿ ನಡೆಸುತ್ತಿದ್ದು, ಮುಂಚೂಣಿ ಘಟಕಗಳಿಗೆ ಯಾವುದೇ ಕಿಮ್ಮತ್ತು ನೀಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಯುವ ಕಾಂಗ್ರೆಸ್ ಚುನಾವಣೆಯಲ್ಲೂ ಶಾಸಕಿಯ ಹಸ್ತಕ್ಷೇಪ ಮತ್ತು ವಾಮಮಾರ್ಗದ ನಡೆಗಳಿಂದಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುಣ್ಣುವಂತಾಗಿದೆ ಎಂದು ಮುಖಂಡರು ಬೇಸರ ಹೊರಹಾಕಿದ್ದಾರೆ. ಶಾಸಕರು ಹಾಕಿಸುವ ಯಾವುದೇ ಪ್ಲೆಕ್ಸ್‌ಗಳಲ್ಲಿ ಪಕ್ಷದ ಹಸ್ತದ ಗುರುತು ಅಥವಾ ಹಿರಿಯ ನಾಯಕರ ಫೋಟೋಗಳಿರುವುದಿಲ್ಲ, ಕೇವಲ ತಮ್ಮ ಹಾಗೂ ತಮ್ಮ ತಾಯಿ ಮಾಜಿ ಮಂತ್ರಿ ಮೋಟಮ್ಮನವರ ಫೋಟೋ ಮಾತ್ರ ಬಳಸಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ.

ವಾರದಲ್ಲಿ ಕೇವಲ ಎರಡು ದಿನ ಮಾತ್ರ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುವ ಶಾಸಕರನ್ನು ಭೇಟಿಯಾಗಲು ಕಾರ್ಯಕರ್ತರು ಬೆಂಗಳೂರಿಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ತಕ್ಷಣವೇ ಒಂದು ವಿಶೇಷ ತಂಡವನ್ನು ರಚಿಸಿ, ಮೂಡಿಗೆರೆ ಕ್ಷೇತ್ರದಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ತುರ್ತು ಕ್ರಮ ಕೈಗೊಳ್ಳದಿದ್ದರೆ ಮುಂದಿನ 2028ರ ವಿಧಾನಸಭಾ ಚುನಾವಣೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ತೀವ್ರ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಎಚ್ಚರಿಸಿದೆ.

B.K. Hariprasad files complaint against MLA Nayana Motamma

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....