Home namma chikmagalur chikamagalur ಬಡವರ ಹಕ್ಕುಗಳಿಗೆ ಹೋರಾಡಿದ ದಿಟ್ಟ ನಾಯಕ ಬಿ.ಕೆ.ಸುಂದರೇಶ್
chikamagalurHomeLatest Newsnamma chikmagalur

ಬಡವರ ಹಕ್ಕುಗಳಿಗೆ ಹೋರಾಡಿದ ದಿಟ್ಟ ನಾಯಕ ಬಿ.ಕೆ.ಸುಂದರೇಶ್

Share
Share

ಚಿಕ್ಕಮಗಳೂರು: – ಬಡವರು, ಕಾರ್ಮಿಕರು ಮತ್ತು ರೈತರ ಹಕ್ಕುಗಳಿಗಾಗಿ ಹೋರಾಡಿದ ದಿಟ್ಟ ನಾಯಕ ಬಿ.ಕೆ.ಸುಂದರೇಶ್. ಅವರ ಅನೇಕ ಹೋರಾಟಗಳು ಸಮಾಜದಲ್ಲಿ ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ರಘು ಹೇಳಿದರು.

ನಗರದ ಜಿಲ್ಲಾ ಸಿಪಿಐ ಕಚೇರಿಯಲ್ಲಿ ಬುಧವಾರ ದಿಟ್ಟ ಹೋರಾಟ, ಜನಾನುರಾಗಿ ದಿ|| ಬಿ.ಕೆ.ಸುಂದರೇ ಶ್ ಅವರ ೩೧ನೇ ಸ್ಮರಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತ ನಾಡಿದರು.

ಜಿಲ್ಲೆಯ ಜನರ ಸಮಸ್ಯೆಗಳಿಗೆ ನಿರಂತರ ಹೋರಾಟ ನಡೆಸಿ ಹಲವರಿಗೆ ನ್ಯಾಯ ಕೊಡಿಸುವಲ್ಲಿ ಬಿ.ಕೆ. ಸುಂದರೇಶ್ ಮೊದಲಿಗರು. ರೈತರ, ಕೂಲಿ ಕಾರ್ಮಿಕರು, ಅಂಗನವಾಡಿ ಕಾರ್ಯರ್ತೆಯರ ದ್ವನಿಯಾಗಿ ಹೋರಾಟ ಮಾಡಿದ ಅವರು ಜನನುರಾಗಿಯಾಗಿದ್ದು ಇಂಥ ನಾಯಕನನ್ನು ಪಕ್ಷ ಮತ್ತು ಜಿಲ್ಲೆ ಕಳೆದುಕೊಂ ಡಿರುವುದು ದುದೈರ್ವ ಎಂದರು.

ಸುಂದರೇಶ್ ಅವರ ಆದರ್ಶ ಬದುಕು ಇಂದಿನ ಯುವಕರಿಗೆ ಪ್ರೇರಣದೀಪ. ಶೋಷಿತರು, ದಿನಗೂ ಲಿ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಸ್ವಇಚ್ಚೆಗಾಗಿ ಬದುಕದೇ, ಸದಾಕಾಲ ಶೋಷಿತರಿಗೆ ನ್ಯಾಯ ದೊರಕಿಸಿಕೊಡಬೇಕೆಂಬ ಹೋರಾಟದ ಫಲವಾಗಿತ್ತು. ಇದಕ್ಕೆ ಜನಸಾಮಾನ್ಯರಿಗೆ ಅಭಿಮಾನದಿಂದ ಜಿಲ್ಲೆಯ ವಿವಿಧ ವೃತ್ತಗಳಲ್ಲಿ ಬಿ.ಕೆ.ಎಸ್. ಹೆಸರನ್ನು ನಾಮಕರಣಗೊಳಿಸಿದ್ದಾರೆ ಎಂದು ಹೇಳಿದರು.

ಸಿಪಿಐ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ವಿಜಯ್‌ಕುಮಾರ್ ಮಾತನಾಡಿ ಹೋರಾಟದ ಹಾದಿಯಲ್ಲಿ ಸಾಗುತ್ತಿರುವ ಮುಖಂಡರಿಗೆ ಸುಂದರೇಶ್ ಪ್ರೇರಣೆ. ಇಂಥ ವ್ಯಕ್ತಿಯ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದುವರಿದರೆ ಮಾತ್ರ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.

ಸಿಪಿಐ ಜಿಲ್ಲಾ ಮಾಜಿ ಕಾರ್ಯದರ್ಶಿ ರಾಧಾ ಸುಂದರೇಶ್ ಮಾತನಾಡಿ ಇಂದಿನ ರಾಜಕಾರಣದಲ್ಲಿ ತಾಳಕ್ಕೆ ತಕ್ಕಂತೆ ಬದಲಾಗುವ ಸನ್ನಿವೇಶವಿದೆ. ಸುಂದರೇಶ್ ರಾಜಕೀಯ ಎನ್ನುವುದು ಜನರ ಸೇವೆಯೇ ಹೊರತು ವೈಯಕ್ತಿಕ ಆದಾಯ ಮಾಡುವುದಾಗಿರಲಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಪಿಐ ತಾಲ್ಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್ ಜಿಲ್ಲಾ ಸಹಕಾರ್ಯದರ್ಶಿ ಗಳಾದ ಸೋಮೇಗೌಡ, ಹೆಡದಳ್ ಕುಮಾರ್, ಮುಖಂಡರುಗಳಾದ ಹೆಚ್.ಎಂ.ರೇಣುಕಾರಾಧ್ಯ, ಮುಖ ಂಡರುಗಳಾದ ಉಮೇಶ್, ಜೇರ್ಮಿ ಲೋಬೋ ಮತ್ತಿತರರು ಉಪಸ್ಥಿತರಿದ್ದರು.

B.K. Sundaresh a brave leader who fought for the rights of the poor

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...