Home namma chikmagalur chikamagalur ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಪೂರ್ವಭಾವಿ ಸಭೆ
chikamagalurHomeLatest Newsnamma chikmagalur

ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಪೂರ್ವಭಾವಿ ಸಭೆ

Share
Share

ಚಿಕ್ಕಮಗಳೂರು: ಮಾಜಿ ಮುಖ್ಯ ಮಂತ್ರಿ, ಬಿಜೆಪಿ ಕೇಂದ್ರೀಯ ಮಂಡಳಿ ಸದಸ್ಯರಾದ ಶ್ರೀ ಬಿ.ಎಸ್.ಯಡಿಯೂರಪ್ಪಅವರ ರಾಜಕೀಯ ಬದುಕಿನ 50 ವರ್ಷಗಳ ಅಭಿನಂದನಾ ಕಾರ್ಯಕ್ರಮ ಅಭಿಮಾನೋತ್ಸವ ಪೂರ್ವಭಾವಿ ಸಭೆ ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಭಾನುವಾರ ನಡೆಯಿತು.

ಮಾಜಿ ಸಚಿವರಾದ ವಿಧಾನ ಪರಿಷತ್ ಶಾಸಕ ಡಾ.ರವಿ ಸಿ.ಟಿ ಮಾತನಾಡಿ, ರಾಜ್ಯದಲ್ಲಿ ಪಕ್ಷಕ್ಕೆ ಗಟ್ಟಿ ನೆಲೆ ತಂದುಕೊಟ್ಟವರು ಯಡಿಯೂರಪ್ಪ. ಅನಂತಕುಮಾರ್ ಮತ್ತು ಯಡಿಯೂರಪ್ಪ ಹಾರ್ಡ್ವೇರ್ ಮತ್ತು ಸಾಫ್ಟ್ ವೇರ್ ಆಗಿ ಪಕ್ಷವನ್ನು ಕಟ್ಟಿದ್ದಾರೆ. ಯಡಿಯೂರಪ್ಪ ಅವರ ರಾಜಕೀಯ ಬದುಕಿಗೆ 50 ವರ್ಷಗಳು ತುಂಬಿರುವುದು ಎಲ್ಲರೂ ಸಂಭ್ರಮಿಸುವ ಸಂಗತಿಯಾಗಿದೆ ಎಂದರು.

ರಾಜಕೀಯ ಜೀವನದಲ್ಲಿ ಯಡಿಯೂರಪ್ಪ ಅವರು ಅನೇಕ ಏಳುಬೀಳುಗಳನ್ನು ಎದುರಿಸಿದ್ದಾರೆ. ಯಡಿಯೂರಪ್ಪ ಎಂದರೆ ಶಕ್ತಿ. ನಾನು ಸೇರಿದಂತೆ ಅದೆಷ್ಟೋ ಕಾರ್ಯಕರ್ತರಿಗೆ ಅವರು ಪ್ರೇರಣೆ ಕೊಟ್ಟಿದ್ದಾರೆ. ಮಾತೃ ಹೃದಯ ಅವರದ್ದಾಗಿತ್ತು ಎಂದರು.

ಪಕ್ಷಕ್ಕೆ ಅವರ ಕೊಡಿಗೆ ದೊಡ್ಡದಿದೆ. ಅವರು ನಮ್ಮ ನಾಯಕರು. ಅವರನ್ನು ಅಭಿನಂದಿಸುವುದು ಪಕ್ಷದ ಸಂಘಟನೆಗೆ ದೊಡ್ಡ ಮಟ್ಟದಲ್ಲಿ ಸಹಕಾರಿಯಾಗುತ್ತದೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಭಾಗವಹಿಸಬೇಕು ಎಂದು ಸಲಹೆ ಮಾಡಿದರು.

ಮಾಜಿ ಶಾಸಕರಾದ ಅಭಿಮಾನೋತ್ಸವ ಸಮಿತಿ ಜಿಲ್ಲಾ ಸಂಚಾಲಕ ಶ್ರೀ ಬೆಳ್ಳಿ ಪ್ರಕಾಶ್ ಮಾತನಾಡಿ, ಕಡೂರಿನಲ್ಲಿ ವಿವಿಧ ಮಹಾಶಕ್ತಿ ಕೇಂದ್ರಗಳಲ್ಲಿ ವಿವಿಧ ಹಂತಗಳಲ್ಲಿ ಸಭೆ ನಡೆಸಲಾಗಿದೆ. ಈಗಾಲೇ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ 7 ಸಾವಿರ ಕಾರ್ಯಕರ್ತರು ಹೊರಡಲು ಸಿದ್ಧರಾಗಿದ್ದಾರೆ. ಈ ಉತ್ಸಾಹ ಎಲ್ಲಾ ಕಾರ್ಯಕರ್ತರಲ್ಲಿ ಬರಬೇಕು ಎಂದು ಹೇಳಿದರು.

ಜನ ಶಕ್ತಿಯೇ ನಮಗೆ ಶಕ್ತಿ. ಇಚ್ಚಾಸಕ್ತಿ ಇದ್ದರೆ ನಮ್ಮ ಶಕ್ತಿ ಇಮ್ಮಡಿಯಾಗುತ್ತದೆ. ಅಭಿಮಾನೋತ್ಸವ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಅಧ್ಯಕ್ಷ ಶ್ರೀ ಎಂ.ಆರ್.ದೇವರಾಜಶೆಟ್ಟಿ ಮಾತನಾಡಿ, ಚಿತ್ರದುರ್ಗದಲ್ಲಿ ನಡೆಯುವ ಅಭಿಮಾನೋತ್ಸವ ಕಾರ್ಯಕ್ರಮದ ಲಾಭ ಪಕ್ಷಕ್ಕೆ ಮತ್ತು ಸಾಮಾನ್ಯ ಕಾರ್ಯಕರ್ತರಿಗೆ ಆಗಲಿದೆ. ಅದೊಂದು ಅಪೂರ್ವ ಕಾರ್ಯಕ್ರಮ ಆಗಿರುವುದರಿಂದ ಎಲ್ಲರೂ ಭಾಗವಹಿಸಬೇಕು ಎಂದರು.

ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುಷ್ಪರಾಜ್, ಬಿಜಿಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಅಭಿಮಾನೋತ್ಸವ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿವು.

B.S. Yediyurappa fanfare pre-meeting

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...