Home Crime News ವೈದ್ಯರ ನಿರ್ಲಕ್ಷದಿಂದ ಮಗು ಸಾವು ಆರೋಪ : ಆಸ್ಪತ್ರೆ ಮುಂದೆ ಪ್ರತಿಭಟನೆ
Crime News

ವೈದ್ಯರ ನಿರ್ಲಕ್ಷದಿಂದ ಮಗು ಸಾವು ಆರೋಪ : ಆಸ್ಪತ್ರೆ ಮುಂದೆ ಪ್ರತಿಭಟನೆ

Share
Share

ಚಿಕ್ಕಮಗಳೂರು :

ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಹಾಗೂ ದಲಿತ ಸಂಘಟನೆಗಳು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಎದುರು ಪ್ರತಿಭಟನೆ ನಡೆಸಿದ್ದಾರೆ. ‌

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಒಂದೂವರೆ ವರ್ಷದ ಮಗು ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಮೃತಪಟ್ಟಿದೆ, ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ತಂದಿದ್ದ ಪೋಷಕರು ಗಂಟೆಗಟ್ಟಲೆ ಕಾದರೂ ಆಸ್ಪತ್ರೆಗೆ ವೈದ್ಯರು ಆಗಮಿಸಿಲ್ಲ ಎಂದು ವೈದ್ಯರ ವಿರುದ್ಧ ಮಗುವಿನ ಕುಟುಂಬಸ್ಥರು ಹಾಗೂ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆಸ್ಪತ್ರೆಯ ಮುಂದೆ ಪೋಷಕರು, ಸಂಬಂಧಿಕರಿಂದ ಪ್ರತಿಭಟನೆ ಕೂಡಾ ನಡೆಸಲಾಗಿದೆ.
ಮಗು ಸಾವಿಗೆ ಕಾರಣವಾದ ವೈದ್ಯನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ.‌

ತರೀಕೆರೆ ತಾಲೂಕಿನ ದೊರನಾಳು ಗ್ರಾಮದ ನಾಗರಾಜ್ ಹಾಗೂ ಮೇಘನ ದಂಪತಿಗಳ ಒಂದೂವರೆ ವರ್ಷದ ಮಗು ಮನ್ವಿತ್ ಆಸ್ಪತ್ರೆಗೆ ಬಂದು ಗಂಟೆ ಒಳಗೆ ಮೃತಪಟ್ಟಿದ್ದು ಚಿಕಿತ್ಸೆ ಕೊಡದ ವೈದ್ಯ ಮಂಜುನಾಥ್ ವಿರುದ್ಧ ಪೋಷಕರ ಪ್ರತಿಭಟನೆ ತೀವ್ರವಾಗಿಸುವ ಎಚ್ಚರಿಕೆಯನ್ನು ಸಂಘಟನೆಗಳು ನೀಡಿದ್ದು ಆತನನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...

₹8 ಕೋಟಿ ಹಣ, ಚಿನ್ನಾಭರಣ ದೋಚಿ 9 ವರ್ಷದ ಮಗನೊಂದಿಗೆ ಪತಿ ಪರಾರಿ

ಕೊಪ್ಪ: ಪತಿಯೊಬ್ಬ ತನ್ನ ಪತ್ನಿಗೆ ದೀರ್ಘಕಾಲದಿಂದ ದೈಹಿಕ, ಮಾನಸಿಕ ಹಿಂಸೆ ನೀಡಿ, ಕೋಟ್ಯಂತರ ರೂಪಾಯಿ ಹಣ,...

ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ

ಲಿಂಗದಹಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...