Home namma chikmagalur chikamagalur ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ
chikamagalurHomeLatest Newsnamma chikmagalur

ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

Share
Share

ಚಿಕ್ಕಮಗಳೂರು: ತ್ಯಾಗ, ಬಲಿದಾನ ಹಾಗೂ ಭ್ರಾತೃತ್ವದ ಸಂಕೇತವಾದ ಈದುಲ್ ಅಝಾಹ್(ಬಕ್ರೀದ್) ಹಬ್ಬವನ್ನು ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಗುರುವಾರ ಆಚರಿಸಲಾಯಿತು.

ಕಳೆದ ಒಂದು ವಾರದಿಂದಲೇ ಹಬ್ಬದ ಸಡಗರ ಎಲ್ಲೆಡೆ ಮನೆ ಮಾಡಿತ್ತು. ಗುರುವಾರ ಬೆಳಿಗ್ಗೆ ಬಿಳಿ ಬಟ್ಟೆ ತೊಟ್ಟು ಮಸೀದಿ, ಈದ್ಗಾ ಮೈದಾನಗಳಿಗೆ ತಂಡೋಪ ತಂಡವಾಗಿ ಬಂದ ಮುಸ್ಲಿಮರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮೌಲ್ವಿಗಳು ಸಂದೇಶ ಮತ್ತು ಪ್ರವಚನ ನೀಡಿದರು.

ಪ್ರಾರ್ಥನೆ ಮುಗಿಸಿದ ನಂತರ ಕಬರಸ್ತಾನಕ್ಕೆ ತೆರಳಿ, ಗೋರಿಗಳಿಗೆ ಹೂ ಸಮರ್ಪಿಸಿ ಹಿರಿಯರನ್ನು ಸ್ಮರಿಸಿದರು. ಪ್ರಾರ್ಥನೆ ಮುಗಿಸಿದ ಬಳಿಕ ಪರಸ್ಪರ ಅಲಂಗಿಸಿ ಶುಭಾಶಯ ಹಂಚಿಕೊಂಡರು.

ಬಡವರು, ನೆರೆ ಹೊರೆಯವರು, ಸಂಬಂಧಿಕರಿಗೆ ಕುರಬಾನಿ ಹಂಚುವುದು ಈ ಹಬ್ಬದ ವಿಶೇಷ. ಬಿರಿಯಾನಿ, ಪಾಯಸ, ಜಾಮೂನು, ಹಣ್ಣುಗಳಿಂದ ತಯಾರಿಸಿದ ಕಸ್ಟರ್ಡ್, ಶಾವಿಗೆ ಸೇರಿ ಬಗೆ ಬಗೆಯ ಖಾದ್ಯ ಸಿದ್ಧಪಡಿಸಿಕೊಂಡು ಸವಿಯುವುದು ಎಲ್ಲರ ಮನೆಯಲ್ಲೂ ಸಾಮಾನ್ಯ. ಇದೇ ರೀತಿ ಈ ವರ್ಷವೂ ಎಲ್ಲರ ಮನೆಯಲ್ಲೂ ಸಂಭ್ರಮದಿಂದ ಹಬ್ಬ ಅಚರಿಸಲಾಯಿತು.

ಮಸೀದಿ ರಸ್ತೆಗಳಲ್ಲಿ ವಾಹನ, ಜನ ದಟ್ಟಣೆ ಇತ್ತು. ನಗರದ ಪ್ರಮುಖ ವೃತ್ತಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

Bakrid celebrated with devotion across the district

Share

Leave a comment

Leave a Reply

Your email address will not be published. Required fields are marked *

Don't Miss

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

Related Articles

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ...

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ...

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...