Home namma chikmagalur ಕಾಫಿ ನಾಡಿನಾದ್ಯಂತ ಬಕ್ರೀದ್ ಆಚರಣೆ
namma chikmagalurchikamagalurHomeLatest News

ಕಾಫಿ ನಾಡಿನಾದ್ಯಂತ ಬಕ್ರೀದ್ ಆಚರಣೆ

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸೇರಿದಂತೆ ಕಾಫಿ ನಾಡಿನಾದ್ಯಂತ ಶನಿವಾರ ಬಕ್ರೀದ್ ಆಚರಣೆ ನಡೆಯಿತು.

ಮುಸ್ಲಿಂ ಸಮುದಾಯದವರು, ಮಸೀದಿ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಶಯವನ್ನು ವಿನಿಯಮ ಮಾಡಿಕೊಂಡರು.

ನಗರದ ಎಂ.ಜಿ. ರಸ್ತೆಯಲ್ಲಿರುವ ತಾಜಾರಿನ್, ಸಂಗೀನಾ, ನೆಹರು ನಗರದ ಬದ್ರಿಯಾ, ಉಪ್ಪಳ್ಳಿಯ ಶಾದ್ರುಲಿ, ಕಲ್ಲುದೊಡ್ಡಿಯ ಅಮ್ಜದ್ ಖಾರಾರ್ ಹಾಗೂ ಆದಿಶಕ್ತಿ ನಗರದ ಮಸೀದಿಗಳಲ್ಲಿ ಬ್ಯಾರಿ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮುಸ್ಲಿಂ ಸಮುದಾಯದವರು ನಗರದ ವಿಜಯಪುರ ಹಾಗೂ ಕೆಂಪನಹಳ್ಳಿಯ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಂಪನಹಳ್ಳಿಯ ಈದ್ಗಾ ಮೈದಾನಕ್ಕೆ ಸಾಮೂಹಿಕ ಪ್ರಾರ್ಥನೆ ಬಕ್ರೀದ್ ಹಬ್ಬದ ಶುಭಾಶಯ ಸಲ್ಲಿಸಿದರು.

ಎಲ್ಲರೂ ಕೂಡ ಜಾತಿ, ಧರ್ಮವನ್ನು ಬದಿಗಿಟ್ಟಿ ಸೌಹಾರ್ದತೆಯಿಂದ ಬಾಳಬೇಕು. ಇದು, ಸಂವಿಧಾನದ ಆಶಯವಾಗಿದೆ. ಅದರಂತೆ ಎಲ್ಲರೂ ನಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಗುರುಗಳು ಹಾಜರಿದ್ದರು.

Bakrid celebration across coffee country

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...