Home namma chikmagalur chikamagalur ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಷೇಧಿತ ಪಟಾಕಿಗಳ ಮಾರಾಟ ನಿಷೇಧ
chikamagalurHomeLatest Newsnamma chikmagalur

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಷೇಧಿತ ಪಟಾಕಿಗಳ ಮಾರಾಟ ನಿಷೇಧ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ 2026ನೇ ಸಾಲಿನ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮಹತ್ವದ ಕ್ರಮ ಕೈಗೊಂಡಿದೆ.

ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರೆ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಸಾಗಾಣಿಕೆ ಹಾಗೂ ಮಾರಾಟವನ್ನು ತಡೆಗಟ್ಟಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಭನ್ವರ್ ಸಿಂಗ್ ಮೀನಾ ಅವರು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಶೇಷ ಕಾರ್ಯಪಡೆಗಳನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ತರೀಕೆರೆ, ಅಜ್ಜಂಪುರ ಹಾಗೂ ಕಡೂರು ತಾಲೂಕುಗಳಲ್ಲಿ ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆಗಳು ತಕ್ಷಣದಿಂದಲೇ ಕಾರ್ಯಾಚರಣೆಗೆ ಇಳಿಯಲಿವೆ. ಈ ತಂಡಗಳಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಅಗ್ನಿಶಾಮಕ ಠಾಣಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ಮೆಸ್ಕಾಂ ಎಂಜಿನಿಯ‌ರ್ಗಳು ಸ್ಥಳೀಯ ಪೊಲೀಸ್ ನಿರೀಕ್ಷಕರು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅಧಿಕಾರಿಗಳ ತಂಡಗಳು ಪಟಾಕಿ ದಾಸ್ತಾನು ಗೋದಾಮುಗಳು ಮತ್ತು ಮಳಿಗೆಗಳ ಮೇಲೆ ಹಠಾತ್ ದಾಳಿ ನಡೆಸಿ ಪರಿಶೀಲನೆ ನಡೆಸಲಿವೆ. ಮಾರಾಟ ಮಾಡಲಾಗುವ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್‌ಗಳ ಮೇಲೆ ಅಧಿಕೃತ ಹಸಿರು ಪಟಾಕಿ ಚಿಹ್ನೆ ಹಾಗೂ ಕ್ಯೂಆರ್ ಕೋಡ್ (QR Code) ಇರುವುದನ್ನು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕಿದೆ.

ಗೋದಾಮು ಅಥವಾ ಮಳಿಗೆಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಪಟಾಕಿಗಳು ಕಂಡುಬಂದರೆ ಅಂತಹ ಸಂಪೂರ್ಣ ದಾಸ್ತಾನನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ ಸಂಬಂಧಪಟ್ಟವರ ವಿರುದ್ಧ ನೇರವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಹೊರ ರಾಜ್ಯಗಳಿಂದ ಅಕ್ರಮವಾಗಿ ಪಟಾಕಿ ಸಾಗಿಸುವ ವಾಹನಗಳನ್ನೂ ಜಪ್ತಿ ಮಾಡಲು ಸಾರಿಗೆ ಇಲಾಖೆಗೆ ನಿರ್ದೇಶಿಸಲಾಗಿದೆ.

ಆಸ್ಪತ್ರೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಯಾವುದೇ ಸೂಕ್ಷ್ಮ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕರಪತ್ರಗಳು, ಆಡಿಯೋ ಮತ್ತು ವೀಡಿಯೊಗಳ ಮೂಲಕ ಸಾರ್ವಜನಿಕರಲ್ಲಿ ಹಸಿರು ಪಟಾಕಿ ಬಳಕೆ ಕುರಿತು ವ್ಯಾಪಕ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.

ಅಲ್ಲದೆ ಹಬ್ಬದ ಅವಧಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಪರಿಸರಸ್ನೇಹಿ ದೀಪಾವಳಿ ಆಚರಿಸುವಂತೆ ಜಿಲ್ಲಾಡಳಿತ ಕರೆ ನೀಡಿದೆ.

Ban on the sale of prohibited firecrackers in Chikkamagaluru district

Share

Leave a comment

Leave a Reply

Your email address will not be published. Required fields are marked *

Don't Miss

ಹರಿಹರಪುರದಲ್ಲಿ ಮನೆ ಕಳ್ಳತನ: ₹2 ಲಕ್ಷ ಮೌಲ್ಯದ ಚಿನ್ನದ ಸರ ಅಪಹರಣ

ಕೊಪ್ಪ: ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ ಸುಮಾರು ₹2 ಲಕ್ಷ ಮೌಲ್ಯದ 24 ಗ್ರಾಂ ತೂಕದ ಚಿನ್ನದ ಸರ ಹಾಗೂ ₹600 ನಗದು ಕಳವು ಮಾಡಿರುವ...

ಮಳೆರಾಯನ ಕೃಪೆಗಾಗಿ ಕಪ್ಪೆಗಳಿಗೆ ಸಂಪ್ರದಾಯಬದ್ಧ ಮದುವೆ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನಲ್ಲಿ ಬರದ ಛಾಯೆ ತೀವ್ರವಾಗಿ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಮಳೆರಾಯನ ಕೃಪೆಗಾಗಿ ಗ್ರಾಮಸ್ಥರೆಲ್ಲರೂ ಸೇರಿ ಕಪ್ಪೆಗಳಿಗೆ ಸಂಪ್ರದಾಯಬದ್ಧವಾಗಿ ಮದುವೆ ಮಾಡಿಸಿ, ಊರಲ್ಲಿ ಮೆರವಣಿಗೆ ನಡೆಸಿ ಬಳಿಕ ಭರ್ಜರಿ ಸಾಮೂಹಿಕ...

Related Articles

ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆ

ಕಡೂರು: ಕರ್ನಾಟಕ ಜಾನಪದ ಅಕಾಡೆಮಿಯ 2026-27ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಡೂರು ತಾಲ್ಲೂಕು ಬೀರೂರು...

ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯವಕ ಆತ್ಮಹತ್ಯೆ

ಚಿಕ್ಕಮಗಳೂರು: ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯುವಕನೊಬ್ಬ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ...

ಅಜ್ಜಂಪುರದಲ್ಲಿ ಭದ್ರಾ ನಾಲೆಗೆ ಹಾರಿದ ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಬೆಳೆ ನಷ್ಟ ಹಾಗೂ ಸಾಲದ ಹೊರೆಯಿಂದ ರೈತರು ಎದುರಿಸುತ್ತಿರುವ ಸಂಕಷ್ಟದ...

ಮೂರು ದಿನಗಳ ಕಾಲ ನಗರದಲ್ಲಿ ಕುಡಿಯುವ ನೀರಿನ ಪೂರೈಕೆ

ಚಿಕ್ಕಮಗಳೂರು: ಕಾಫಿನಾಡಿನ ನಗರವಾಸಿಗಳಿಗೆ ಮುಂದಿನ ಮೂರು ದಿನಗಳ ಕಾಲ ಕುಡಿಯುವ ನೀರಿನ ಪೂರೈಕೆಯಲ್ಲಿ ಭಾರಿ ವ್ಯತ್ಯಯ...