ಚಿಕ್ಕಮಗಳೂರು : ಸಿ.ಟಿ ರವಿ ಬಂಧನ ಖಂಡಿಸಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಬಂದ್ ಸಂಪೂರ್ಣ ವಿಫಲವಾಗಿದೆ ಜನಜೀವನ ಯಥಾ ಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಯಾವುದೇ ತೊಡಕು ಇರಲಿಲ್ಲ, ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.
ಇತ್ತ ಬೆಳ್ಳಂ ಬೆಳ್ಳಿಗ್ಗೆ ಪೊಲೀಸರ ಜೊತೆ ವಾಗ್ವಾದೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು 80 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು ನೂರಾರು ಖಾಕಿಗಳ ಸರ್ಪಗಾವಲು ನಿಯೋಜಿಸಲಾಗಿದೆ
ಈ ನಡುವೆ 80-100 ಜನ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ, ನಿನ್ನೆ ರಾತ್ರಿ ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ BNS 143, 247, 199, 191, 126 (2), 324 (4) ಅಡಿ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ,ಅನುಮತಿ ಪಡೆಯದೆ ಪ್ರತಿಭಟನೆ, ದೊಂಬಿ, ಗಲಾಟೆ, ಅಕ್ರಮ ಕೂಟ ಕಟ್ಟಿಕೊಂಡು ರಸ್ತೆ ತಡೆ, ಸಾರ್ವಜನಿಕರ ಆಸ್ತಿ ನಷ್ಟ, ಟೈರಿಗೆ ಬೆಂಕಿ, ಬಸ್ಸಿಗೆ ಕಲ್ಲು ತೂರಾಟ ಸೇರಿದಂತೆ ವಿವಿಧ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.
Leave a comment