Home Crime News ರೈತನ ಮೇಲೆ ಕರಡಿ ದಾಳಿ
Crime NewsHomeLatest Newsnamma chikmagalurTarikere

ರೈತನ ಮೇಲೆ ಕರಡಿ ದಾಳಿ

Share
Share

ತರೀಕೆರೆ : ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ತಾಲೂಕಿನ ಎ.ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರಾಮಕೃಷ್ಣ ಇಂದು ಬೆಳಿಗ್ಗೆ ತಮ್ಮ ತೋಟದಲ್ಲಿ ಕೆಲಸ ಮಾಡಲು ತೆರಳಿದ್ದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಕರಡಿ ದಾಳಿ ಮಾಡಿದೆ.

ಈ ಭೀಕರ ದಾಳಿಯಿಂದಾಗಿ ರಾಮಕೃಷ್ಣ ಅವರ ಕೈ ಮತ್ತು ಕಾಲುಗಳಿಗೆ ತೀವ್ರವಾದ ಗಾಯಗಳಾಗಿದ್ದು, ಕರಡಿಯು ಅವರ ಮಂಡಿ ಹಾಗೂ ಮೊಣಕೈ ಭಾಗವನ್ನು ಬಲವಾಗಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.ತೀವ್ರ ರಕ್ತಸ್ರಾವವಾಗುತ್ತಿದ್ದರೂ ಧೈರ್ಯಗುಂದದ ರಾಮಕೃಷ್ಣ ಅವರು ಕರಡಿಯೊಂದಿಗೆ ಹೋರಾಡಿ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಯಗೊಂಡ ಸ್ಥಿತಿಯಲ್ಲೇ ತೋಟದಿಂದ ಗ್ರಾಮದವರೆಗೆ ಓಡಿ ಬಂದ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯು ತರೀಕೆರೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

Bear attacks farmer

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...