Home namma chikmagalur chikamagalur ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷ
chikamagalurHomeLatest Newsnamma chikmagalur

ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಮಳೆಗೆ ಪ್ರಕೃತಿ ಸೌಂದರ್ಯದ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು ಇದರ ನಡುವೆ ವನ್ಯಜೀವಿಗಳ ಲೋಕ ಅನಾವರಣಗೊಂಡಂತಿದೆ. ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಇಂದು ಮುಂಜಾನೆ ಅಪರೂಪದ ಅತಿಥಿಯೊಂದು ಪ್ರತ್ಯಕ್ಷವಾಗಿ ವಾಹನ ಸವಾರರನ್ನು ಕೆಲಕಾಲ ಮಂತ್ರಮುಗ್ಧರನ್ನಾಗಿಸಿದೆ.

ಅಭಯಾರಣ್ಯದ ದಟ್ಟ ಅರಣ್ಯದ ರಸ್ತೆಯಲ್ಲಿ ವಾಹನವೊಂದು ಸಾಗುತ್ತಿದ್ದಾಗ, ಹಠಾತ್ತನೆ ಕರಡಿಯೊಂದು ರಸ್ತೆಯ ಮಧ್ಯದಲ್ಲೇ ಪ್ರತ್ಯಕ್ಷವಾಗಿದೆ. ವಾಹನದ ಹೆಡ್‌ಲೈಟ್‌ನ ಬೆಳಕಿನ ನಡುವೆಯೂ ಯಾವುದೇ ಆತಂಕವಿಲ್ಲದೆ, ಅತ್ಯಂತ ಗಂಭೀರವಾಗಿ ರಸ್ತೆಯುದ್ದಕ್ಕೂ ಹೆಜ್ಜೆ ಹಾಕುತ್ತಾ ಸಾಗಿದೆ. ವಾಹನವು ತನ್ನನ್ನು ಹಿಂಬಾಲಿಸುತ್ತಿದ್ದರೂ ತಲೆಕೆಡಿಸಿಕೊಳ್ಳದ ಜಾಂಬವಂತ ಗಾಂಭೀರ್ಯದಿಂದ ಮುಂದೆ ಸಾಗಿದ್ದಾನೆ.

ಸ್ವಲ್ಪ ದೂರ ಮುಂದೆ ಹೋಗಿ ರಸ್ತೆಯ ಮಧ್ಯದಲ್ಲೇ ನಿಂತ ಕರಡಿ, ಒಮ್ಮೆ ವಾಹನದ ಕಡೆಗೆ ತಿರುಗಿ ದಿಟ್ಟಿಸಿ ನೋಡಿದೆ. ಈ ದೃಶ್ಯವು ಸವಾರರಲ್ಲಿ ರೋಮಾಂಚನ ಮತ್ತು ಆತಂಕ ಮೂಡಿಸಿದೆ. ಬಳಿಕ ರಸ್ತೆ ಬದಿಯ ಪೊದೆಯತ್ತ ಸರಿದ ಕರಡಿ, ತಕ್ಷಣವೇ ತನ್ನ ಹಿಂಗಾಲುಗಳ ಮೇಲೆ ಎದ್ದು ನಿಂತು ವಾಹನವನ್ನು ಸೂಕ್ಷ್ಮವಾಗಿ ಗಮನಿಸಿದೆ. ಮನುಷ್ಯರಂತೆ ಎದ್ದು ನಿಂತು ನೋಡಿದ ಕರಡಿಯ ಈ ವಿಶಿಷ್ಟ ಭಂಗಿ ಅಚ್ಚರಿ ಮೂಡಿಸಿದೆ. ನಂತರ ನಿಧಾನವಾಗಿ ಹೆಜ್ಜೆ ಹಾಕುತ್ತಾ ದಟ್ಟ ಕಾಡಿನೊಳಗೆ ಕಣ್ಮರೆಯಾಗಿದೆ.

ವಾಹನದಲ್ಲಿದ್ದ ಚಾಲಕ ಈ ಇಡೀ ಅಪರೂಪದ ಕ್ಷಣಗಳನ್ನು ಹಾಗೂ ಕರಡಿಯ ಚಲನವಲನಗಳನ್ನು ಅತ್ಯಂತ ಜಾಣ್ಮಯಿಂದ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ದರ್ಶನ ಸಾಮಾನ್ಯವಾದರೂ, ಇಷ್ಟು ಹತ್ತಿರದಲ್ಲಿ, ಅದೂ ಹೆಡ್‌ಲೈಟ್ ಬೆಳಕಿನಲ್ಲಿ ಕರಡಿಯು ಇಷ್ಟೊಂದು ವಿಭಿನ್ನವಾಗಿ ವರ್ತಿಸಿರುವುದು ತೀರಾ ಅಪರೂಪವಾಗಿದೆ.

Bear sighted on the main road of Muthodi Sanctuary

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...