Home namma chikmagalur ಬೆಂಗಳೂರು ಕಾಲ್ತುಳಿತ ಸರ್ಕಾರದ ವೈಫಲ್ಯ ಆದರೆ ರಾಜೀನಾಮೆ ನೀಡುವ ಅಗತ್ಯವಿಲ್ಲ
namma chikmagalurchikamagalurHomeLatest News

ಬೆಂಗಳೂರು ಕಾಲ್ತುಳಿತ ಸರ್ಕಾರದ ವೈಫಲ್ಯ ಆದರೆ ರಾಜೀನಾಮೆ ನೀಡುವ ಅಗತ್ಯವಿಲ್ಲ

Share
Share

ಚಿಕ್ಕಮಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಹಾಗೂ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗುತ್ತಿದ್ದಾರೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎಂಬ ಅನುಮಾನ ಚಿಕ್ಕಮಗಳೂರಿನಲ್ಲಿ ನೀಡಿರುವ ಅವರ ಹೇಳಿಕೆಯಿಂದಾಗಿ ಕಾಡಲಾರಂಭಿಸಿದೆ.

ಭಾನುವಾರ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯಲ್ಲಿ 26 ಜನ ಮೃತಪಟ್ಟರು. ಇದು ಕೇಂದ್ರ ಸರ್ಕಾರದ ವೈಫಲ್ಯ. ಆದರೆ ನಾವು ಪ್ರಧಾನ ಮಂತ್ರಿ ರಾಜೀನಾಮೆ ಕೇಳಿದ್ದೆವೆಯೇ? ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿಯೂ ವೈಫಲ್ಯವಾಗಿದೆ ನಿಜ. ಆದರೆ ಯಾರೂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಹಿಂದೆ ಬೇರೆ ಸರ್ಕಾರಗಳು ಇದ್ದಾಗ ಸಾಕಷ್ಟು ಘಟನೆಗಳು ನಡೆದಿವೆ. ಆಗ ನಾವು ಯಾರ ರಾಜೀನಾಮೆಯನ್ನು ಕೇಳಿರಲಿಲ್ಲ. ಕೆಲ ದಿನಗಳ ಹಿಂದೆ ಪಾಕಿಸ್ತಾನದ ಜೊತೆ ಯುದ್ಧ ಆರಂಭವಾದಾಗ ಎಲ್ಲಾ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದವು. ಇದನ್ನು ಪ್ರತಿಯೊಬ್ಬರೂ ಮನಗಾಣಬೇಕು ಎಂದು ಹೇಳಿದರು.

ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ಯಾರು ಅನುಮತಿ ಕೇಳಿದರು, ಅನುಮತಿ ನೀಡಲು ಯಾರು ನಿರಾಕರಿಸಿದರು, ಬಳಿಕ ಅನುಮತಿ ಕೊಟ್ಟವರು ಯಾರು ಎಂಬುದು ಯಾರಿಗೂ ಗೊತ್ತಿಲ್ಲ. ಇದೆಲ್ಲವೂ ಬೂದಿ ಮುಚ್ಚಿದ ಕೆಂಡದಂತಿದೆ. ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಎನ್ನುವುದು ತನಿಖೆಯಿಂದ ಹೊರ ಬರಬೇಕು ಎಂದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಹೀಗೆ ವಿವಿಧ ಹಂತದಲ್ಲಿ ಏನೇನು ಆಗಿದೆ ಎಂಬ ಸತ್ಯ ತನಿಖೆಯಿಂದ ಹೊರ ಬರಬೇಕು. ಬೆಂಗಳೂರು ಘಟನೆ ಬಗ್ಗೆ ಹೈಕಮಾಂಡ್ ಗೆ ಜವಾಬ್ದಾರಿ ಇದೆ. ಹೀಗಾಗಿ ದೆಹಲಿಗೆ ಕರೆಸಿ ವರದಿ ಕೇಳಬಹುದು. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ಕೊಡಬಹುದು ಎಂದು ತಿಳಿಸಿದರು.

ಸಿಎಂ ಬದಲಾವಣೆ ಇದೆಯೇ ಎಂಬ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ, ಅದೇಗೆ ಸಿಎಂ ಬದಲಾವಣೆಯಾಗುತ್ತಾರೆ? ನಿಮಗೆ ಹೇಳಿದ್ದು ಯಾರು? ಸಿಎಂ ಅಧಿಕಾರಾವಧಿ ಎರಡೂವರೆ ವರ್ಷ ಎಂದು ಹೇಳಿದವರು ಯಾರು ಎಂದು ಪ್ರಶ್ನಿಸಿದ ಅವರು, ಎರಡೂವರೆ ವರ್ಷ ಎಂದು ಎಲ್ಲೂ ಇಲ್ಲ. ಈಗಲೂ ಸಿಎಂ ಸಿದ್ದರಾಮಯ್ಯ ಅವರೇ ಇದ್ದಾರೆ. ಮುಂದೆಯೂ ಅವರೇ ಇರುತ್ತಾರೆ ಅಷ್ಟೇ ಎಂದು ಪ್ರತಿಕ್ರಿಯಿಸಿದರು‌.

ಬೆಳಗಾವಿ ವಿಭಜನ ಸಧ್ಯಕ್ಕಿಲ್ಲ. ಆಮೇಲೆ ವಿಭಜನೆ ಮಾಡಬಹುದು. ಬೆಳಗಾವಿ ವಿಭಜನೆ ಮಾಡುವ ಪ್ರಸ್ತಾವವೇನೋ ಇದೆ. ಆದರೆ ಅದು ಸಧ್ಯಕ್ಕಿಲ್ಲ ಎಂದು ಹೇಳಿದರು.

ಶಾಸಕ ಎಚ್.ಡಿ.ತಮ್ಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಎಚ್.ಪಿ.ಮಂಜೇಗೌಡ, ಮಾಜಿ ಸಂಸದ ಚಂದ್ರಪ್ಪ, ಪ್ರಮುಖರಾದ ಡಾ. ಡಿ.ಎಲ್.ವಿಜಯ್ ಕುಮಾರ್, ಹಿರೇಮಗಳೂರು ರಾಮಚಂದ್ರ ಮತ್ತಿತರರಿದ್ದರು.

Bengaluru stampede is a failure of the government but there is no need to resign

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...