Home Crime News ಹೆಬ್ಬೆ ಫಾಲ್ಸ್ ನಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು : ಎಚ್ಚರಿಕೆ ನೀಡಿದರೂ ಹೊಂಡದಲ್ಲಿ ಮುಳುಗಿ ಮೃತ್ಯು
Crime News

ಹೆಬ್ಬೆ ಫಾಲ್ಸ್ ನಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು : ಎಚ್ಚರಿಕೆ ನೀಡಿದರೂ ಹೊಂಡದಲ್ಲಿ ಮುಳುಗಿ ಮೃತ್ಯು

Share
Share

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಾಗ ಜಲಪಾತದ ಬಳಿ ಈಜಲು ಹೋಗಿದ್ದ ಛತ್ತೀಸ್’ಘಡ ಮೂಲದ ಬೆಂಗಳೂರು ಟೆಕ್ಕಿ ನೀರಿ‌ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತದ ಬಳಿ ನಡೆದಿದೆ. ಮೃತನನ್ನ 30 ವರ್ಷದ ಅಮಿತ್ ಕುಮಾರ್ ಎಂದು ಗುರುತಿಸಲಾಗಿದೆ. ಮೃತ ಅಮಿತ್ ಕುಮಾರ್ ಮೂಲತಃ ಛತ್ತೀಸ್ಗಢದ ಯುವಕ. ಅವಿವಾಹಿತ. ಬೆಂಗಳೂರಿನಲ್ಲಿ ತಮಿಳುನಾಡು ಮೂಲದ ಸಲಾಂ ಕರೀಂ ಎಂಬ ಯುವಕನ ಜೊತೆ ಸೇರಿಕೊಂಡು ರೂಂ ಮಾಡಿದ್ದನು. ಇಬ್ಬರು ಸಾಫ್ಟ್ ವೇರ್ ಉದ್ಯೋಗಿಗಳಾಗಿದ್ದು ಒಂದೇ ರೂಮಿನಲ್ಲಿ ಇದ್ದುಕೊಂಡು ಬೇರೆ-ಬೇರೆ ಕಂಪನಿಯಲ್ಲಿ ಕೆಲಸ‌ ಮಾಡುತ್ತಿದ್ದರು. ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ನಾಲ್ಕು ದಿನಗಳ ಕಂಟಿನ್ಯೂ ರಜೆ ಇದ್ದ ಕಾರಣ ಚಿಕ್ಕಮಗಳೂರು ಜಿಲ್ಲೆಗೆ 3 ದಿನಗಳ ಹಿಂದೆಯೇ ಪ್ರವಾಸಕ್ಕೆ ಬಂದಿದ್ದರು. ಜಿಲ್ಲೆಯ ನಾನಾ ಭಾಗದ ಪ್ರವಾಸಿ ತಾಣಗಳನ್ನ ನೋಡಿಕೊಂಡು ಭಾನುವಾರ ಮಧ್ಯಾಹ್ನದ ವೇಳೆಗೆ ಹೆಬ್ಬೆ ಜಲಪಾತದ ಬಳಿ ಬಂದಿದ್ದರು. ಹೆಬ್ಬೆ ಜಲಪಾತ ಸುಮಾರು 120 ಅಡಿ‌ ಎತ್ತರದಿಂದ ನೀರು ಧುಮ್ಮಿಕ್ಕುವ ಜಲಪಾತ. ಈ ಜಲಪಾತದ ಬಳಿ ಇಬ್ಬರೂ ಈಜಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲಿದ್ದ ಫಾರೆಸ್ಟ್ ಡಿಪಾರ್ಟ್ಒ ಗಾರ್ಡ್ ಗಳು ಅಲ್ಲಿ ಆಳ ಇದೆ, ಹೋಗಬೇಡಿ ಎಂದು ಹೇಳಿದ್ದರೂ ಕೂಡ ಈಜಲು ಹೋದ ಅಮಿತ್ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಆತನ ಸ್ಮೇಹಿತ ಲಾಲ್ ಕರೀಂ ಕೂಡ ನೀರಿನಲ್ಲಿ ಮುಳುಗಿ ಅಸ್ವಸ್ಥನಾದಾಗ ಸ್ಥಳಿಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಆತನನ್ನ ರಕ್ಷಿಸಿದ್ದಾರೆ. ಆದರೆ, ಈಜು ಬಾರದ ಅಮಿತ್ ನೀರಿನಲ್ಲಿ ಮುಳುಗು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಂಗದಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...