Home namma chikmagalur chikamagalur ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ
chikamagalurHomeLatest Newsnamma chikmagalur

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಮುಖಂಡರು, ಪ್ರತಾಪ ಸಿಂಹ ವಿರುದ್ಧ ಘೋಷಣೆ ಕೂಗಿದರು. ಭೀಮ್ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೇಶ್ ಮಾತನಾಡಿ, ‘ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಸಂಸದ ಪ್ರತಾಪ್‌ ಸಿಂಹ ನೀಲಿ ಶಾಲು ಹಾಗೂ ದಲಿತ ಸಂಘಟನೆ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ’ ಎಂದರು.

ನೀಲಿನ ಶಾಲಿನ ಬಗ್ಗೆ ಅರಿವಿಲ್ಲದ ಮಾಜಿ ಸಂಸದ ಬಾಯಿಗೆ ಬಂದಂತೆ ಹೇಳಿಕೆ ನೀಡುವುದು ಸರಿಯಾದ ಕ್ರಮವಲ್ಲ. ನೀಲಿ ಬಣ್ಣ ಹಲವಾರು ವರ್ಷಗಳಿಂದ ಸಮಾನತೆ ಸಾರುವ ಸಂಕೇತವಾಗಿದೆ. ನೀಲಿ ಶಾಲಿನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಪ್ರತಾಪ ಸಿಂಹ ಅವರು ಜನಸಾಮಾನ್ಯರ ಭಾವನೆಗೆ ಧಕ್ಕೆಯಾಗುವ ಹೇಳಿಕೆ ನೀಡಬಾರದು. ಅನೇಕ ದಲಿತ ಸಂಘಟನೆಗಳು ನೀಲಿ ಶಾಲು ಹೆಗಲ ಮೇಲೆ ಏರಿಸಿ ಸತ್ಯ, ನ್ಯಾಯದ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಮರೆಯಬಾರದು ಎಂದರು.

ನೀಲಿ ಶಾಲು ಹಾಗೂ ದಲಿತ ಸಂಘಟನೆಗಳ ಬಗ್ಗೆ ನೀಡಿರುವ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೋರಬೇಕು. ಇದೇ ಚಾಳಿ ಮುಂದುವರೆಸಿದರೆ ರಾಜ್ಯದಾದ್ಯಂತ ಭೀಮ್ ಆರ್ಮಿ ಹಾಗೂ ದಲಿತ ಸಂಘಟನೆಗಳು ಹೋರಾಟ ರೂಪಿಸಲಿವೆ ಎಂದು ಎಚ್ಚರಿಸಿದರು.

ದಲಿತ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ, ಜಿಲ್ಲಾ ಭೀಮ್ ಆರ್ಮಿ ಗೌರವಾಧ್ಯಕ್ಷ ರಮೇಶ್, ಉಪಾಧ್ಯಕ್ಷ ಯಶ್ವಂತ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಭಾಗವಹಿಸಿದ್ದರು.

Bhim Army protests against Pratap Simha.

Share

Leave a comment

Leave a Reply

Your email address will not be published. Required fields are marked *

Don't Miss

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೌರಿ ಹಬ್ಬದ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ ಬಂದಿದ್ದ ರಾಗಿ ಬೆಳೆಯ ಮೇಲೆ ಟ್ರಾಕ್ಟರ್ ಹರಿಸಿ ನಾಶಪಡಿಸಿರುವ ಆಘಾತಕಾರಿ ಘಟನೆಯೊಂದು ತರೀಕೆರೆ ತಾಲೂಕಿನ...

Related Articles

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು...

ಅರಸನ ನಾಲೆ ಪುನಶ್ಚೇತನ‌ಕ್ಕೆ ಆಗ್ರಹಿಸಿ ಇಂದು ರೈತರ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ...

ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ

ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ...

ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಬಂದ್‌ ಯಶಸ್ವಿ

ಶೃಂಗೇರಿ: ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ನೇತೃತ್ವದಲ್ಲಿ ಸೋಮವಾರ ಕರೆ ನೀಡಿದ್ದ ಶೃಂಗೇರಿ ಪಟ್ಟಣ ಬಂದ್...