Home Latest News ಮತ್ತೆ ಎಂಟ್ರಿ ಕೊಟ್ಟ ಭೀಮ : ಕಾಡಾನೆ ಕಂಡು ಜನರು ಗಾಬರಿ
Latest News

ಮತ್ತೆ ಎಂಟ್ರಿ ಕೊಟ್ಟ ಭೀಮ : ಕಾಡಾನೆ ಕಂಡು ಜನರು ಗಾಬರಿ

Share
Share

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಕಾಟ ನಿಲ್ಲುವ ಲಕ್ಷಣ ಕಾಣುತ್ತಿಲ್ಲ…. ಬೀಟಮ್ಮ ಆನೆಗಳ ಹಿಂಡು ಚಿಕ್ಕಮಗಳೂರು ಜಿಲ್ಲೆ ತೊರೆದು ಹಾಸನ ಜಿಲ್ಲೆಗೆ ಎಂಟ್ರಿ ಆಗುತ್ತಿದ್ದಂತೆ ಇನ್ನೇನು ಆನೆಗಳ ಕಾಟಕ್ಕೆ ಸದ್ಯಕ್ಕೆ ಮುಕ್ತಿ ಸಿಕ್ಕಿತು ಎನ್ನುವ ನೆಮ್ಮದಿಯಲ್ಲಿದ್ದ ಮಲೆನಾಡಿನ ಜನರಿಗೆ ಮತ್ತೆ ಆನೆಯ ಕಾಟ ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ ಕೆಆರ್ ಪೇಟೆ ಬಿಕ್ಕಿಮನೆ ಗ್ರಾಮಗಳಲ್ಲಿ ಒಂಟಿ ಸಲಗ ಭೀಮ ಕಳೆದ ರಾತ್ರಿ ಇಡಿ ಗ್ರಾಮ ಸುತ್ತಮುತ್ತ ಓಡಾಡಿ ಆತಂಕ ಸೃಷ್ಟಿಸಿದೆ.

ಒಂಟಿ ಸಲಗದ ಗ್ರಾಮದ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿದ್ದು, ದೃಶ್ಯಗಳನ್ನು ನೋಡಿದ ಬಳಿಕ ಒಂಟಿ ಸಲಗ ಗ್ರಾಮಕ್ಕೆ ಬಂದಿರುವುದು ಗೊತ್ತಾಗಿದೆ. ಹಾಸನ ಜಿಲ್ಲೆಯ ಗಡಿ ಭಾಗದಿಂದ ನಿರಂತರವಾಗಿ ಕಾಡಾನೆಗಳು ಚಿಕ್ಕಮಗಳೂರು ತಾಲೂಕಿನ ಗ್ರಾಮಗಳಿಗೆ ಲಗ್ಗೆ ಇಡುತ್ತಿರುವುದು ಸ್ಥಳೀಯ ಕಾಫಿ ತೋಟದ ಮಾಲೀಕರಲ್ಲಿ ಬೆಳೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೂಡಲೇ ಪದೇ ಪದೇ ಸುತ್ತಮುತ್ತಲಿನ ಗ್ರಾಮಗಳಿಗೆ ಎಂಟ್ರಿ ಕೊಡುತ್ತಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಸ್ಥಳೀಯ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಸಿ.ಸಿ ಕ್ಯಾಮೆರಾದಲ್ಲಿ ಆನೆ ಸೆರಾಗಿರುವ ಆದಾರದಲ್ಲಿ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷಿ ಎಂಬಂತೆ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದೆ ಕೆಡಿಸಿದ್ದ ಬೀಟಮ್ಮ ಗ್ಯಾಂಗ್ ನ ಭೀಮ ಆನೆ ಮತ್ತೆ ಗಡಿ ಭಾಗಕ್ಕೆ ಎಂಟ್ರಿ ಕೊಟ್ಟಿದ್ದು  ಅಪಾಯಕಾರಿ ಎಂದೇ ಬಿಂಬಿತ ಆಗಿರುವ ಕಾಡಾನೆ ಬೇಲೂರು ಬಿಕ್ಕೊಡು ಕಡೆಯಿಂದ ಚಿಕ್ಕಗಳೂರು ಕಡೆಗೆ ಪುನರ್ ಆಗಮನ ಮಾಡಿದೆ

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...