Home namma chikmagalur chikamagalur ಜ.7ಕ್ಕೆ ಅಜಾದ್ ವೃತ್ತದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ
chikamagalurHomeLatest Newsnamma chikmagalur

ಜ.7ಕ್ಕೆ ಅಜಾದ್ ವೃತ್ತದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ

Share
Share

ಚಿಕ್ಕಮಗಳೂರು: ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತಿಯಿಂದ ೨೦೮ ನೇ ಭೀಮಾ ಕೋರೆಗಾಂವ್ ವಿಜಯೋತ್ಸವ(ಶೌರ್ಯ) ದಿನದ ಕಾರ್ಯಕ್ರಮವನ್ನು ಜ.೭ ರಂದು ಬುಧವಾರ ನಗರದ ಅಜಾದ್ ವೃತ್ತದಲ್ಲಿ ಸಂಜೆ ೪ ಗಂಟೆಗೆ ಆಯೋಜಿಸಲಾಗಿದೆ ಎಂದು ದಸಂಸ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದರ ಅಂಗವಾಗಿ ಅಂದು ಮಧ್ಯಾಹ್ನ ೧ ಗಂಟೆಗೆ ಕೆಇಬಿ ವೃತ್ತದಿಂದ ಎಂಜಿ ರಸ್ತೆ ಮಾರ್ಗವಾಗಿ ಬೃಹತ್ ಮೆರವಣಿಗೆ, ಡಿಜೆ ಮತ್ತು ವಿವಿಧ ಕಲಾತಂಡಗಳೊಂದಿಗೆ ಅಜಾದ್ ವೃತ್ತ ತಲುಪಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೊಸದುರ್ಗ ಸಾಣೇಹಳ್ಳಿ ಮಠದ ಪೀಠಾಧ್ಯಕ್ಷ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯವನ್ನು ವಹಿಸಲಿದ್ದು, ಸಂಶೋಧಕ ಇತಿಹಾಸ ತಜ್ಞ ಪ್ರೊ. ತಲಕಾಡು ಚಿಕ್ಕರಂಗೇಗೌಡ, ಕಾರ್ಮಿಕ ಕಲ್ಯಾಣ ಸಚಿವ ಸಂತೋಷ್ ಎಸ್ ಲಾಡ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಹೆಚ್.ಡಿ. ತಮ್ಮಯ್ಯ, ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಾಜಿ ಸಚಿವರು ಹಾಗೂ ಬಿ.ಆರ್ ಅಂಬೇಡ್ಕರ್ ಅಧ್ಯಯನ ಸಂಸ್ಥೆ ಅಧ್ಯಕ್ಷರಾದ ಬಿ.ಬಿ ನಿಂಗಯ್ಯ ವಹಿಸಲಿದ್ದಾರೆ ಎಂದರು.

ಇದರ ಪೂರ್ವಭಾವಿಯಾಗಿ ಜ.೬ ರಂದು ಬೆಳಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಬೃಹತ್ ಬೈಕ್ ಜಾಥಾ ಏರ್ಪಡಿಸಲಾಗಿದ್ದು, ಜಾಥಾ ಅಜಾದ್ ಪಾರ್ಕ್‌ನಿಂದ ಹೊರಟು, ಐಜಿ ರಸ್ತೆ, ಕೆಇಬಿ ವೃತ್ತ, ಬಸವನಹಳ್ಳಿ ಮುಖ್ಯರಸ್ತೆ, ಎಂಜಿ ರಸ್ತೆ, ಅಂಬೇಡ್ಕರ್ ವೃತ್ತ ಬಳಸಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಅಂಬೇಡ್ಕರ್ ಮುತ್ಥಳಿಗೆ ಮಾಲಾರ್ಪಣೆ ಮಾಡಿ, ಬೈಪಾಸ್ ರಸ್ತೆ ಮೂಲಕ ಹಿರೇಮಗಳೂರು ಮಾರ್ಗವಾಗಿ ಅಜಾದ್ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಸಮಸ್ತ ನಾಗರಿಕರು, ವಿವಿಧ ಜನಪರ ಸಂಘಟನೆಗಳ ಪದಾಧಿಕಾರಿಗಳು, ಯುವಜನರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೋರೆಗಾಂವ್ ವಿಜಯೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಮುಖಂಡರುಗಳಾದ ಟಿ.ಎಲ್ ಗಣೇಶ್, ಪುರ ಚಂದ್ರು, ಉಮೇಶ್, ಹೇಮಂತ್, ಮಂಜಯ್ಯ, ಅರುಣ ಮತ್ತಿತರರು ಉಪಸ್ಥಿತರರಿದ್ದರು.

Bhima Koregaon victory celebration at Azad Circle on January 7th

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...