Home namma chikmagalur chikamagalur ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ-ಸವಾರ ಸಾವು
chikamagalurCrime NewsHomeLatest Newsnamma chikmagalur

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ-ಸವಾರ ಸಾವು

Share
Share

ಕಡೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ತಿಮ್ಮರಾಜು ಎಂಬುವವರು ತಮ್ಮ ಹೀರೋ ಹೊಂಡಾ ಸ್ಟೆಂಡರ್ ಬೈಕ್‌ನಲ್ಲಿ ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು.

ರಾಷ್ಟ್ರೀಯ ಹೆದ್ದಾರಿ 173ರ ಚನ್ನಾಪುರ ಗೇಟ್ ಸಮೀಪ ತಲುಪಿದಾಗ, ಎದುರುಗಡೆಯಿಂದ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ತಿಮ್ಮರಾಜು ಅವರ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಅಪಘಾತವೆಸಗಿದ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ತಿಮ್ಮರಾಜು ಅವರ ತಲೆ ಹಾಗೂ ಕೈಕಾಲುಗಳಿಗೆ ಗಂಭೀರ ಸ್ವರೂಪದ ರಕ್ತಗಾಯಗಳಾಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಕ್ಷಣ ಅವರನ್ನು ಉಪಚರಿಸಿ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹಾಗೂ ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಿಮ್ಮರಾಜು ಮೃತಪಟ್ಟಿದ್ದಾರೆ.

ಈ ಸಂಬಂಧ ಮೃತರ ಪತ್ನಿ ಗೀತಾ ಅವರು ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Bike collided with unknown vehicle, rider dies

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ ಘಟನೆ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಳದಾಳ್ ಪಾಳ್ಯದಲ್ಲಿ ನಡೆದಿದೆ. ತ್ಯಾಗರಾಜ್ ಗೌಡ ಎಂಬುವವರ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ ಎಂದು ಗುರುತಿಸಲಾಗಿದ್ದು, ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಡೂರು...

Related Articles

ಚಿಕ್ಕಮಗಳೂರಿನಲ್ಲಿ ಡಕೋಟಾ ಬಸ್ಸುಗಳು

ಚಿಕ್ಕಮಗಳೂರು: ಚಿಕ್ಕಮಗಳೂರು ಕೆ,ಎಸ್,ಆರ್, ಟಿ ಸಿ ಬಸ್ಸುಗಳನ್ನು “ಡಕೋಟಾ” ಎಂದು ಜನ ಕರೆಯ ತೊಡಗಿದ್ದಾರೆ. ಕೆ,ಎಸ್,ಆರ್,ಟಿ...

ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಕಡ್ಡಾಯ

ಚಿಕ್ಕಮಗಳೂರು:  ಭಾರತದ ನಾಗರಿಕ ನೋಂದಣಿ ನಿಯಮದ ಪ್ರಕಾರ ಜನನ-ಮರಣ ನೋಂದಣಿಯನ್ನು ಪ್ರತಿಯೊಬ್ಬರೂ ತಪ್ಪದೇ ಮಾಡಿಸಬೇಕು ಎಂದು...

ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ

ಚಿಕ್ಕಮಗಳೂರು: ಲ್ಲೆಯಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಇಲ್ಲ; ಬುಕಿಂಗ್ ಮಾಡಿದವರಿಗೆ ನಿಯಮಾನುಸಾರ ಗ್ಯಾಸ್...

ಜಿಲ್ಲೆಯಲ್ಲಿ ‘ಡಿಜಿಟಲ್ ಅರೆಸ್ಟ್’ – 48.50 ಲಕ್ಷ ರೂ. ವಂಚನೆ

ಚಿಕ್ಕಮಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧಗಳ ಅಬ್ಬರ ಮುಂದುವರಿದಿದ್ದು, ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ‘ಡಿಜಿಟಲ್ ಅರೆಸ್ಟ್’ ಎಂಬ...