Home namma chikmagalur ajjampura ಬಸ್‌ಗೆ ಬೈಕ್ ಡಿಕ್ಕಿ: ಗಾಯಗೊಂಡಿದ್ದ ಸವಾರ ಸಾವು
ajjampuraCrime NewsHomeLatest Newsnamma chikmagalur

ಬಸ್‌ಗೆ ಬೈಕ್ ಡಿಕ್ಕಿ: ಗಾಯಗೊಂಡಿದ್ದ ಸವಾರ ಸಾವು

Share
Share

ಅಜ್ಜಂಪುರ: ಮುಂದೆ ಸಾಗುತ್ತಿದ್ದ ಬಸ್‌ ಚಾಲಕ ಯಾವುದೇ ಸೂಚನೆ ನೀಡದೆ ಏಕಾಏಕಿ ಬಸ್ ನಿಲ್ಲಿಸಿದ ಪರಿಣಾಮ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಅಜ್ಜಂಪುರ ತಾಲೂಕಿನ ಗೆಜ್ಜಗೊಂಡನಹಳ್ಳಿ ಗ್ರಾಮದ ಅಣ್ಣಪ್ಪ (KA-17 HG-1696) ಎಂಬುವವರು ಮೃತಪಟ್ಟವರು. ಅವರ ಸ್ನೇಹಿತ ಕಾಂತರಾಜ್ ಜಿ.ಆರ್. ಗಾಯಗೊಂಡಿದ್ದಾರೆ.

ಅಕ್ಟೋಬರ್ 20ರಂದು ಆಯುಧಪೂಜೆ ನಿಮಿತ್ತ ಬಟ್ಟೆ ಖರೀದಿಸಲು ಅಣ್ಣಪ್ಪ ಅವರು ಕಾಂತರಾಜ್ ಅವರನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಕಡೂರಿಗೆ ತೆರಳಿದ್ದರು. ಬಟ್ಟೆ ಖರೀದಿಸಿ ಊರಿಗೆ ಮರಳುತ್ತಿದ್ದಾಗ, ಬೀರೂರು ಸಮೀಪ ಸೋಮೇನಹಳ್ಳಿ ದಾಟಿದ ಬಳಿಕ ನಾಗವಂಗಲ ಫ್ಲೈಓವರ್ ಬಳಿ ಬೆಳಿಗ್ಗೆ ಸುಮಾರು 10.50ರ ವೇಳೆಗೆ ಮುಂದೆ ಸಾಗುತ್ತಿದ್ದ ಕೆಎ-40 ಬಿ-2342 ನೋಂದಣಿ ಸಂಖ್ಯೆಯ ಮರ್ಚೆಂಟ್ ಬಸ್ ಚಾಲಕ ಏಕಾಏಕಿ ಬಸ್ ನಿಲ್ಲಿಸಿದ್ದಾನೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಬೈಕ್ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದಿದ್ದು, ಕಾಂತರಾಜ್ ಅವರಿಗೆ ತಲೆ, ಎದೆ ಹಾಗೂ ಬೆನ್ನಿನ ಭಾಗದಲ್ಲಿ ಗಾಯಗಳಾಗಿದ್ದರೆ, ಅಣ್ಣಪ್ಪ ಅವರಿಗೆ ತಲೆ, ಹಣೆ, ಎದೆ ಮತ್ತು ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದವು. ಸಾರ್ವಜನಿಕರು ಇಬ್ಬರನ್ನೂ ಆಂಬುಲೆನ್ಸ್ ಮೂಲಕ ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರ ಸಲಹೆಯಂತೆ ಶಿವಮೊಗ್ಗದ ಸುಬ್ಬಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ, ಅಕ್ಟೋಬರ್ 21ರ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಜ್ಜಂಪುರ ಪಟ್ಟಣದ ಸಮೀಪ ಅಣ್ಣಪ್ಪ ಅವರು ಉಸಿರಾಟ ನಿಲ್ಲಿಸಿದ್ದಾರೆ. ತಕ್ಷಣ ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಂದ ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ದೃಢಪಟ್ಟಿದೆ.

ಘಟನೆಯ ಕುರಿತು ಗಾಯಾಳು ಕಾಂತರಾಜ್ ಅವರು ಅಕ್ಟೋಬರ್ 21ರಂದು ಅಜ್ಜಂಪುರ ಪೊಲೀಸ್ ಠಾಣೆಗೆ ತಡವಾಗಿ ದೂರು ನೀಡಿದ್ದು, ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಮೊ.ನಂ. 270/2026ರಲ್ಲಿ ಪ್ರಕರಣ ದಾಖಲಾಗಿದೆ.

Bike collides with bus; injured rider dies

Share

Leave a comment

Leave a Reply

Your email address will not be published. Required fields are marked *

Don't Miss

ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ-ಮೂವರು ಗಂಭೀರ ಗಾಯ

ಚಿಕ್ಕಮಗಳೂರು : ವಿಜೃಂಭಣೆಯಿಂದ ನಡೆಯುತ್ತಿದ್ದ ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಅವಘಡ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಕಾ ಗ್ರಾಮದಲ್ಲಿ ನಡೆದಿದೆ. ಪ್ರತಿ ವರ್ಷದ ಸಂಪ್ರದಾಯದಂತೆ ಗಣಪತಿ...

ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಗೆ ಆಗ್ರಹ

ಚಿಕ್ಕಮಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಮತ್ತು ಪ್ರಾತಿನಿಧ್ಯದ ವಾಸ್ತವಾಂಶಗಳನ್ನು ಪರಿಗಣಿಸಿ ಶೇ.6ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ಮಾದರ ಮಹಾಸಭಾದ ಚಿಕ್ಕಮಗಳೂರು...

Related Articles

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ

ಚಿಕ್ಕಮಗಳೂರು: ನಗರ ಸೇರಿ ಸುತ್ತಮುತ್ತ ಶುಕ್ರವಾರ ಭರ್ಜರಿ ಮಳೆ ಯಾಗಿದ್ದು, ಮಳೆಗಾಲದ ವಾತಾವರಣ ನಿರ್ಮಾಣವಾಯಿತು. ಮಳೆಗಾಲದಲ್ಲೂ...

ಪ್ಲಾಂಟೇಷನ್ ಕಾರ್ಮಿಕರಿಗೆ ಶೇ.17ರಷ್ಟು ವೇತನ ಹೆಚ್ಚಳ

ಚಿಕ್ಕಮಗಳೂರು: ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕಾಫಿ ಮತ್ತು ಟೀ ಪ್ಲಾಂಟೇಷನ್‌ಗಳಲ್ಲಿ ದುಡಿಯುವ ಕಾರ್ಮಿಕರ...

ಅ.26ರಂದು ಚಿಕ್ಕಮಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಚಿಕ್ಕಮಗಳೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.26ರಂದು ಚಿಕ್ಕಮಗಳೂರಿನಲ್ಲಿ ಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು...

ಮೆಕ್ಕಾದಲ್ಲಿ ಸಿಲುಕಿದ ಚಿಕ್ಕಮಗಳೂರಿನ ಉದ್ಯಮಿ ಅಪ್ಸರ್ ಹಿಂದೂಸ್ಥಾನಿ

ಚಿಕ್ಕಮಗಳೂರು : ಸೌದಿ ಅರೇಬಿಯಾದ ಮೆಕ್ಕಾದಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಹಾಗೂ ಕರಾವಳಿ...