Home namma chikmagalur chikamagalur ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಗಾಯಗೊಂಡಿದ್ದ ಯುವಕ ಸಾವು
chikamagalurCrime NewsHomeLatest Newsnamma chikmagalur

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಗಾಯಗೊಂಡಿದ್ದ ಯುವಕ ಸಾವು

Share
Share

ಚಿಕ್ಕಮಗಳೂರು: ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿ ಸಂತೋಷ (25) ಎಂದು ಗುರುತಿಸಲಾಗಿದೆ. ಇವರು ಗಾರೆ ಕೆಲಸ ಮಾಡಿಕೊಂಡಿದ್ದರು.

ಸೆ.13ರಂದು ಬೆಳಿಗ್ಗೆ ಸುಮಾರು 7 ಗಂಟೆಗೆ ಸಂತೋಷ ಅವರು ಕೆಲಸದ ನಿಮಿತ್ತ ಮಳಲೂರು ಗ್ರಾಮದಿಂದ ಗೌಡನಹಳ್ಳಿಯಲ್ಲಿರುವ ಮನೆಗೆ KA-18-V-3519 ನೋಂದಣಿ ಸಂಖ್ಯೆಯ ಮೋಟಾರ್ ಸೈಕಲ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮಳಲೂರು–ಗೌಡನಹಳ್ಳಿ ಟಾರು ರಸ್ತೆಯಲ್ಲಿ ಇಷ್ಟ್ ಬಾರ್‌ನಿಂದ ಸುಮಾರು 100 ಮೀಟರ್ ದೂರದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಸಂತೋಷ ಅವರ ತಲೆ ಹಾಗೂ ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಅಪಘಾತವನ್ನು ಗಮನಿಸಿದ ಆರದವಳ್ಳಿ ಗ್ರಾಮದ ರವಿ ಮತ್ತು ಸಾಗರ ಅವರು ತಕ್ಷಣ ಯಾವುದೋ ವಾಹನದಲ್ಲಿ ಗಾಯಾಳುವನ್ನು ಚಿಕ್ಕಮಗಳೂರಿನ ಎಂ.ಜಿ. ಆಸ್ಪತ್ರೆಗೆ ದಾಖಲಿಸಿದ್ದರು.

ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಸಂತೋಷ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 11 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಸೆ.24ರಂದು ಬೆಳಿಗ್ಗೆ 8.11ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರ ಸಂಬಂಧಿ ಯೋಗೇಶ್ ಅವರು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಸಂತೋಷ ಅವರ ತಂದೆ ಪ್ರಭಾಕರ ಅವರು ಆಸ್ಪತ್ರೆಯಲ್ಲಿ ಮಗನ ಆರೈಕೆಯಲ್ಲಿ ತೊಡಗಿದ್ದ ಕಾರಣ ದೂರು ನೀಡಲು ವಿಳಂಬವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Bike crashes into electric pole: Injured youth dies

Share

Leave a comment

Leave a Reply

Your email address will not be published. Required fields are marked *

Don't Miss

ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ

ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ....

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ...

Related Articles

ಅದ್ದೂರಿ ಮೆರವಣಿಗೆ ಮೂಲಕ ಹಿಂದೂ ಮಹಾಗಣಪತಿ ವಿಸರ್ಜನೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಗಣಪತಿಗಳಲ್ಲೊಂದಾದ ಚಿಕ್ಕಮಗಳೂರಿನ ಹಿಂದುಮಹಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಶನಿವಾರ ವಿಜೃಂಭಣೆಯಿAದ ನೆರವೇರಿತು....

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ...

ಆಕ್ಸಿಸ್ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹2.79 ಲಕ್ಷ ವಂಚನೆ

ಚಿಕ್ಕಮಗಳೂರು: ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ವಿವರ...