ಕಡೂರು: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಡೂರು ತಾಲ್ಲೂಕಿನ ಯಗಟಿ ಕೆರೆಯ ಕೋಡಿ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.
ಹರಿಸಮುದ್ರ ಗ್ರಾಮದ ಮಲ್ಲಿಕಾರ್ಜುನ ಮೃತಪಟ್ಟವರು. ಅ.30ರಂದು ರಾತ್ರಿ 9.30ರ ಸುಮಾರಿಗೆ ಮಲ್ಲಿಕಾರ್ಜುನ ಅವರು ಕೆಎ 66 ಎಲ್ 2653 ಸಂಖ್ಯೆಯ ಬೈಕ್‌ನಲ್ಲಿ ಯಗಟಿಯಿಂದ ಹರಿಸಮುದ್ರ ಗ್ರಾಮಕ್ಕೆ ತೆರಳುತ್ತಿದ್ದಾಗ, ಯಗಟಿ ಕೆರೆಯ ಕೋಡಿ ಬಳಿ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆ ಬದಿಯ ಸಿಮೆಂಟ್ ಕಂಬಗಳಿಗೆ ಅಪ್ಪಳಿಸಿ ಮಲ್ಲಿಕಾರ್ಜುನ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸಗಿದ ಕಾರು ಹಾಗೂ ಚಾಲಕನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Bike rider dies on the spot after being hit by a car
Leave a comment