ಕಡೂರು: ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗ್ರಿಲ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಕಡೂರು ತಾಲ್ಲೂಕು ಮಚ್ಚೇರಿ ಬಳಿಯ ನಾಯಿಸಾಡ್ಲಿ ಎಂಬಲ್ಲಿ ನಡೆದಿದೆ.
ಕಡೂರು ಕೋಟೆ ಬಡಾವಣೆಯ ನಿವಾಸಿ ಉಮೇಶ್ (40) ಮೃತಪಟ್ಟವರು.
ಕುಂತಿಹೊಳೆಯಿಂದ ಕಡೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಲೆಗೆ ಗಾಯವಾಗಿ ತೀವ್ರ ರಕ್ತಸ್ರಾವ ಉಂಟಾದ ಕಾರಣ ಉಮೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇವರು ಬೀರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker dies after hitting roadside grill
Leave a comment