Home namma chikmagalur chikamagalur ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು
chikamagalurHomeLatest Newsnamma chikmagalur

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

Share
Share

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ
ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಮೃತರನ್ನು 21 ವರ್ಷದ ಗೋಕುಲ್ ಎಂದು ಗುರುತಿಸಲಾಗಿದೆ. ಗೋಕುಲ್ ತನ್ನ ಕೆಎ-18 ಇಹೆಚ್ 4297 ಸಂಖ್ಯೆಯ ಬೈಕಿನಲ್ಲಿ ಅರುಣ್ ಮತ್ತು ಪ್ರವೀಣ್ ಎಂಬುವವರೊಂದಿಗೆ ಬಾಳೆಹೊನ್ನೂರು ಕಡೆಗೆ ತೆರಳುತ್ತಿದ್ದರು.

ಮಸೀದಿಕೆರೆಯ ಗುಡ್ ಲಕ್ ಮೆಡಿಕಲ್ ಮಾಲೀಕರ ಮನೆಯ ಎದುರು ಬೈಕ್ ಸಾಗುತ್ತಿದ್ದಾಗ, ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಈ ಅಪಘಾತದ ತೀವ್ರತೆಗೆ ಬೈಕಿನಲ್ಲಿದ್ದ ಮೂವರೂ ರಸ್ತೆಗೆ ಎಸೆಯಲ್ಪಟ್ಟಿದ್ದು ಗೋಕುಲ್ ಅವರ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ಪೆಟ್ಟು ಬಿದ್ದ ಕಾರಣ ಅವರು ಮೃತಪಟ್ಟಿದ್ದಾರೆ.

ಬೈಕಿನಲ್ಲಿದ್ದ ಮತ್ತಿಬ್ಬರಾದ ಅರುಣ್ ಅವರ ತಲೆ ಮತ್ತು ಹಲ್ಲಿಗೆ ಪೆಟ್ಟಾಗಿದ್ದು, ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರವೀಣ್‌ ಅವರ ಹೊಟ್ಟೆ ಮತ್ತು ಕಾಲಿಗೆ ರಕ್ತಗಾಯಗಳಾಗಿದ್ದು, ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮೃತನ ತಾಯಿ ಪುಷ್ಪಾ ಅವರು ನೀಡಿದ ಲಿಖಿತ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Biker dies in road accident

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...