Home namma chikmagalur chikamagalur ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು
chikamagalurHomeLatest Newsnamma chikmagalur

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

Share
Share

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು ಬೈಪಾಸ್ ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೊಬ್ಬರು, ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಸೀಗೇಹಡ್ಲು ನಿವಾಸಿಯಾಗಿ, ಸದ್ಯ ಅಜ್ಜಂಪುರದಲ್ಲಿ ವಾಸವಿದ್ದ ಮಂಜಾನಾಯ್ಕ (೪೧) ಮೃತಪಟ್ಟವರು. ಗುತ್ತಿಗೆಗೆ ಪಡೆದಿದ್ದ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದ ಮಂಜಾನಾಯ್ಕ ಒಂದು ವಾರದಿಂದ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ನಸುಕಿನಲ್ಲಿ ಕುಟುಂಬದವರಿಗೆ ಕರೆ ಮಾಡಿದ ಅಪರಿಚಿತರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದರು.

ಮೃತರ ಪುತ್ರ ಹಾಗೂ ಪತ್ನಿ ಬೀರೂರು ಬೈಪಾಸ್ ರಸ್ತೆಗೆ ತೆರಳಿ ಪರಿಶೀಲಿಸಿದಾಗ ಮಂಜಾನಾಯ್ಕ ರಸ್ತೆಯ ಬದಿ ಬಿದ್ದಿದ್ದು, ಎಡದ ಕೆನ್ನೆ ಮತ್ತು ಕಿವಿಯ ಬಳಿ ಪೆಟ್ಟು ಬಿದ್ದಿತ್ತು. ಅವರು ಚಾಲನೆ ಮಾಡುತ್ತಿದ್ದ ಬೈಕ್ ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿತ್ತು. ಬೀರೂರು ಆಸ್ಪತ್ರೆಗೆ ಕರೆತಂದಾಗ ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದು, ಪುತ್ರ ರಾಹುಲ್ ನಾಯ್ಕ ನೀಡಿದ ದೂರಿನ ಅನ್ವಯ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು-ಬೈಕ್ ಡಿಕ್ಕಿಯಲ್ಲಿ ಸವಾರ ಸಾವು

ಕಡೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬೀರೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಡಿತಿಮ್ಮಾಪುರ ಗೇಟ್ ಬಳಿ ನಡೆದಿದೆ.
ಚಿಕ್ಕಮಗಳೂರು ನಗರದ ಪ್ರದೀಪ್ (೩೫) ಮೃತಪಟ್ಟವರು.

ಲಿಂಗದಹಳ್ಳಿ ಹೋಬಳಿಯ ಮಲ್ಲೇನಹಳ್ಳಿ ನಿವಾಸಿ ಚಂದ್ರಶೇಖರ್, ಬೀರೂರು-ಲಿಂಗದಹಳ್ಳಿ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ಹುಣಸಘಟ್ಟ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಶಾಲೆಯ ಕೆಲಸ ಮುಗಿಸಿ ಕಾರಿನಲ್ಲಿ ತರೀಕೆರೆ ಕಡೆಯಿಂದ ಬೀರೂರು ಕಡೆಗೆ ಬರುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಬಂದ ಬೈಕ್ ಕಾರಿಗೆ ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಪಘಾತದ ಬಳಿಕ ಚಂದ್ರಶೇಖರ್ ಕಾರಿನಿಂದ ಇಳಿದು ನೋಡಿದಾಗ ಬೈಕ್ ಸವಾರನ ತಲೆ ಹಾಗೂ ಎಡಗಾಲಿಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರ ಸಹಾಯದಿಂದ ಗಾಯಾಳುವನ್ನು ಅಂಬುಲೆನ್ಸ್‌ನಲ್ಲಿ ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಬಳಿಕ ಆಸ್ಪತ್ರೆಗೆ ತೆರಳಿದ ಚಂದ್ರಶೇಖರ್‌ಗೆ, ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Biker dies in vehicle collision

 

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...