Home namma chikmagalur chikamagalur ಬೈಕ್‌ಗೆ ಟಿಪ್ಪರ್ ಡಿಕ್ಕಿ ಬೈಕ್‌ ಸವಾರ ಸ್ಥಳದಲ್ಲೇ ಸಾವು
chikamagalurHomeLatest Newsnamma chikmagalur

ಬೈಕ್‌ಗೆ ಟಿಪ್ಪರ್ ಡಿಕ್ಕಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

Share
Share

ಮೂಡಿಗೆರೆ: ಅತಿ ವೇಗದಲ್ಲಿ ಬಂದ ಟಿಪ್ಪರ್ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಚರ್ಚ್ ಬಳಿ ನಡೆದಿದೆ.

ಮೃತ ಯುವಕ ಆಂಧ್ರಪ್ರದೇಶ ಮೂಲದವನಾಗಿದ್ದು, ಬೈಕ್‌ನಲ್ಲಿ ಬೆಡ್‌ಶೀಟ್, ರಗ್ಗು ಹಾಗೂ ಟವಲ್‌ಗಳನ್ನು ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ.

ವ್ಯಾಪಾರಕ್ಕಾಗಿ ಸಂಚರಿಸುತ್ತಿದ್ದ ವೇಳೆ ಸಂಭವಿಸಿದ ಈ ಭೀಕರ ಅಪಘಾತದಿಂದಾಗಿ ಯುವಕನ ದೇಹ ಛಿದ್ರಗೊಂಡು ರಸ್ತೆಯಲ್ಲೇ ಪ್ರಾಣಬಿಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಗೋಣಿಬೀಡು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಸದ್ಯ ಟಿಪ್ಪರ್ ಚಾಲಕನ ವಿರುದ್ಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Biker dies on the spot after tipper hits bike

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...