Home namma chikmagalur chikamagalur ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ
chikamagalurHomeLatest Newsnamma chikmagalur

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

Share
Share

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ ಬೆರೆಸುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಅವರದ್ದೇ ನಿಯಂತ್ರಣದಲ್ಲಿದೆ ಎಂದು ನೆನಪಿಸಿದ ಸಚಿವರು, ಪ್ರಕ್ರಿಯೆಯಲ್ಲಿ ಲೋಪದೋಷಗಳಿದ್ದರೆ ಆಯೋಗವೇ ಸೂಕ್ತ ನಿರ್ದೇಶನ ನೀಡಲಿ, ಅದನ್ನು ಸರಿಪಡಿಸಿಕೊಳ್ಳೋಣ ಎಂದು ಸವಾಲು ಹಾಕಿದ್ದಾರೆ.

ಚುನಾವಣಾ ಆಯೋಗ ಕೇಳಿದಷ್ಟು ಸಿಬ್ಬಂದಿಯನ್ನು ಒದಗಿಸುವುದು ಮಾತ್ರ ಸರ್ಕಾರದ ಕೆಲಸವಾಗಿದ್ದು, ಇಡೀ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವುದು ಸಂಪೂರ್ಣವಾಗಿ ಆಯೋಗದ ಜವಾಬ್ದಾರಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯವರು ಸಣ್ಣ ವಿಷಯವನ್ನೂ ದೊಡ್ಡದು ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದ ಅವರು, ಜಯನಗರದಲ್ಲಿ ಪಕ್ಷದ ಚಿಹ್ನೆ ಬಳಸಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಜೊತೆಗೆ ಕರಪತ್ರ ಹಂಚುತ್ತಿರುವುದು ನಿಯಮಬಾಹಿರ ಎಂದು ಆಕ್ಷೇಪಿಸಿದ್ದಾರೆ. ಮತ ಕೇಳುವಾಗ ಏನು ಬೇಕಾದರೂ ಮಾಡಿಕೊಳ್ಳಲಿ. ಆದರೆ ಮತಪಟ್ಟಿ ಸರಿಪಡಿಸುವ ಕೆಲಸದಲ್ಲಿ ರಾಜಕೀಯ ಬೆರೆಸುವುದು ತಪ್ಪು ಎಂದು ಅವರು ಹೇಳಿದ್ದಾರೆ.

ಮೇಕೆದಾಟು ಯೋಜನೆಯಡಿ ಬೆಂಗಳೂರಿಗೆ 4.57 ಟಿಎಂಸಿ ನೀರು ನಿಗದಿಯಾಗಿದ್ದು, ಪ್ರಸ್ತುತ ವಿದ್ಯುತ್ ಉತ್ಪಾದನೆಗೆ ಅನುಮತಿ ಕೋರಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಕಳೆದ ತಿಂಗಳು ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದ ಕಾರಣ ಕಾವೇರಿ ಕಾವಲು ಸಮಿತಿಯವರು ತಮಿಳುನಾಡಿಗೆ ನೀರು ಬಿಡುವಂತೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಮೇಕೆದಾಟು ಜಲಾಶಯ ನಿರ್ಮಾಣವಾಗಿದ್ದರೆ ಇಂತಹ ಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಬಹುದಿತ್ತು ಮತ್ತು ಇದರಿಂದ ತಮಿಳುನಾಡು ರೈತರಿಗೇ ಹೆಚ್ಚು ಅನುಕೂಲವಾಗಲಿದೆ ಎಂದು ಅವರು

ಪ್ರತಿಪಾದಿಸಿದ್ದಾರೆ. ಈ ಯೋಜನೆಯಿಂದ ಕರ್ನಾಟಕಕ್ಕೆ ಕೇವಲ ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಯ ಎರಡೇ ಲಾಭಗಳಿದ್ದು. ಬೇರೆ ಉದ್ದೇಶಕ್ಕೆ ನೀರು ಬಳಸಲು ಬರುವುದಿಲ್ಲ ಎಂದು ವಿವರಿಸಿದ್ದಾರೆ. ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಎರಡು ಅರ್ಜಿಗಳು ಈಗಾಗಲೇ ವಜಾಗೊಂಡಿರುವುದರಿಂದ ಯೋಜನೆಗೆ ಯಾವುದೇ ಕಾನೂನು ತೊಡಕುಗಳಿಲ್ಲ ಎಂದ ಅವರು, ಕೇಂದ್ರದ ಅನುಮತಿ ಸಿಕ್ಕ ತಕ್ಷಣ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ. ಕೋರ್ಟು-ಕಚೇರಿ ಎಂದು ಅಲೆಯುವುದರಿಂದ ಎರಡೂ ರಾಜ್ಯಗಳಿಗೆ ನಷ್ಟವಾಗಲಿದ್ದು, ಉಭಯ ರಾಜ್ಯಗಳು ಒಟ್ಟಿಗೆ ಕುಳಿತು ಚರ್ಚಿಸುವ ಮೂಲಕ ಸಮಸ್ಯೆಗೆ ಸುಲಭ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಜುಲೈನಲ್ಲಿ ವಿಧಾನಸಭೆ ಅಧಿವೇಶನ ಆರಂಭವಾಗುವುದರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿದ್ದು, ಮಂತ್ರಿ ಮಂಡಲ ಪೂರ್ಣಗೊಳ್ಳಲಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿಗಳ ಬಳಿ 20 ಸ್ಥಾನಗಳಿದ್ದು ಶೀಘ್ರದಲ್ಲೇ ಸಂಪುಟ ಭರ್ತಿಯಾಗಲಿದೆ ಎಂದ ಅವರು, ಈ ಬಾರಿ ಚಿಕ್ಕಮಗಳೂರು ಜಿಲ್ಲೆಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ ಎಂಬ ಆಶಾವಾದ ವ್ಯಕ್ತಪಡಿಸಿದ್ದಾರೆ.

ಸಂಪುಟ ವಿಸ್ತರಣೆಗೆ ಯಾವುದೇ ಮುಹೂರ್ತಗಳ ಅಡ್ಡಿಯಿಲ್ಲ. ಕೆಲಸಗಳು ಬೇಗನೇ ನಡೆಯಲಿವೆ ಎಂದು ಸ್ಪಷ್ಟಪಡಿಸಿದ ಸಚಿವರು, ಹಾಲಿ ಇರುವ ಖಾತೆಗಳ ಬಗ್ಗೆ ತಮಗಿರುವ ತೃಪ್ತಿಯ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆ ವಿಚಾರವಾಗಿ ತಾವೇನೂ ಮಾತನಾಡುವುದಿಲ್ಲ, ಅದು ಈಗಾಗಲೇ ಮುಗಿದುಹೋದ ಅಧ್ಯಾಯ ಎಂದು ಹೇಳುವ ಮೂಲಕ ಖಾತೆ ಬದಲಾವಣೆಯ ಚರ್ಚೆಗೆ ಪೂರ್ಣವಿರಾಮ ಇಟ್ಟಿದ್ದಾರೆ.

BJP politics in the voter list revision process

Share

Leave a comment

Leave a Reply

Your email address will not be published. Required fields are marked *

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...

Related Articles

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...

ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಉರುಳಿದ ಕಾರು

ಕಳಸ: ನಿರಂತರ ಮಳೆಯಿಂದಾಗಿ ರಸ್ತೆ ತೇವಾಂಶದಿಂದ ಕೂಡಿದ್ದ ಪರಿಣಾಮ, ಬೈಕ್‌ಗೆ ಸೈಡ್ ಕೊಡಲು ಹೋಗಿ ಕಾರೊಂದು...