Home namma chikmagalur chikamagalur ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
chikamagalurHomeLatest Newsnamma chikmagalur

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

Share
Share

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ ಗೊಳಿಸಿರುವ ಅನುಮಾನವಿದೆ. ಇದೇ ಕಾರಣದಿಂದಲೇ 1,822 ಮತಗಳ ಎಣಿಕೆಗೆ 12 ತಾಸು ಆದರೂ ಮುಗಿದಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಐಡಿಎಸ್‌ ಜಿ ಕಾಲೇಜು ಎದುರು ಪ್ರತಿಭಟಿಸಿದರು.

ನೂರಾರು ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಮತ ಎಣಿಕೆ ಪೂರ್ಣಗೊಳಿಸಲು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ, ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಕೇವಲ 1822 ಮತಗಳ ಎಣಿಕೆ ರಾತ್ರಿ 8 ಗಂಟೆಯಾದರೂ ಮುಗಿದಿಲ್ಲ.

ದೇಶದ ಇತಿಹಾಸದಲ್ಲಿ ಈ ರೀತಿ ಆಗಿರಲಿಲ್ಲ. ಕಳೆದ ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ಇದೆ ಕೇಂದ್ರದಲ್ಲಿ ನಡೆದಿತ್ತು. ಆಗ 3000ಕ್ಕೂ ಹೆಚ್ಚು ಮತಗಳನ್ನು ಮಧ್ಯಾಹ್ನ ಮೂರು ಗಂಟೆ ಒಳಗೆ ಎಣಿಕೆ ಮಾಡಲಾಗಿತ್ತು.

ಚುನಾವಣಾ ಅಧಿಕಾರಿಗಳು ಯಾವುದೋ ಒತ್ತಡಕ್ಕೆ ಮಣಿದಿರುವ ಅನುಮಾನವಿದೆ. ಒತ್ತಡಕ್ಕೆ ಮಣಿಯದೆ ಅಧಿಕಾರಿಗಳು ಕೋರ್ಟ್ ಆದೇಶ ಪಾಲಿಸಬೇಕು. ಮರುಮತ ಎಣಿಕೆ ಫಲಿತಾಂಶ ಹೊರಬರುವವರೆಗೂ ನಾವು ಪ್ರತಿಭಟನೆ ನಡೆಸುತ್ತಲೇ ಇರುತ್ತೇವೆ ಎಂದು ಪಟ್ಟು ಹಿಡಿದರು.

ಕೆಲಕಾಲ ಸುಮ್ಮನಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮತ್ತೆ ವಾಗ್ವಾದ ಶುರುವಾಯಿತು. ಬಲ ಭಾಗದಿಂದ ಬಿಜೆಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದರೆ, ಎಡ ಭಾಗದಿಂದ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿದರು.

ಸಮಯಕ್ಕೆ ಸರಿಯಾಗಿ ಪೊಲೀಸರು ನಡುವಿನ ಗೋಡೆಯಂತೆ ನಿಂತು ನಡೆದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಆರೋಪ ಪ್ರತ್ಯಾರೋಪಮಾಡಿದರು.

BJP protests against delay in vote counting

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...